ಲಿವ್-ಇನ್ ರಿಲೇಶನ್ಶಿಪ್ ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ: ಅಲಹಾಬಾದ್ ಹೈಕೋರ್ಟ್
ಲಿವ್-ಇನ್ ಸಂಬಂಧದ ಕುರಿತು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ತಿಳಿಸಿದೆ. ಲಿವ್-ಇನ್ ಸಂಬಂಧ(Live-in Relationship)ವೆಂಬುದು ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿರುವ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ತೀರ್ಪು ನೀಡುವಾಗ, ಲಿವ್ ಇನ್ ಸಂಬಂಧ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾಗಿರುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅಲಹಾಬಾದ್, ಜೂನ್ 27: ಲಿವ್-ಇನ್ ಸಂಬಂಧ(Live-in Relationship)ವೆಂಬುದು ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿರುವ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ತೀರ್ಪು ನೀಡುವಾಗ, ಲಿವ್ ಇನ್ ಸಂಬಂಧ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾಗಿರುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಶೇನ್ ಆಲಂ ಎಂಬುವವರು ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್ಚುತ್ತಿರುವ ಇಂತಹ ಪ್ರಕರಣಗಳ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ಲಿವ್-ಇನ್ ಸಂಬಂಧಗಳನ್ನು ಕಾನೂನುಬದ್ಧಗೊಳಿಸಿದ ನಂತರ, ನ್ಯಾಯಾಲಯವು ಇಂತಹ ಪ್ರಕರಣಗಳಿಂದ ಬೇಸತ್ತಿದೆ ಎಂದು ಹೈಕೋರ್ಟ್ ಹೇಳಿದೆ.
ಲಿವ್-ಇನ್-ರಿಲೇಷನ್‌ಶಿಪ್ ಪರಿಕಲ್ಪನೆಯು ಭಾರತೀಯ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾದ ಕಾನೂನಿಗೆ ವಿರುದ್ಧವಾಗಿರುವುದರಿಂದ ಇಂತಹ ಪ್ರಕರಣಗಳು ನ್ಯಾಯಾಲಯಕ್ಕೆ ಬರುತ್ತಿವೆ. ಆರೋಪಿಯು ಫೆಬ್ರವರಿ 25 ರಿಂದ ಜೈಲಿನಲ್ಲಿದ್ದ, ಯಾವುದೇ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿಲ್ಲ ಎಂದು ನ್ಯಾಯಾಲಯ ಕಂಡುಕೊಂಡಿದೆ.
ಮತ್ತಷ್ಟು ಓದಿ: ಪತಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದ ಖ್ಯಾತ ನಟಿ
ನ್ಯಾಯಮೂರ್ತಿ ಸಿದ್ಧಾರ್ಥ್ ಅವರಿದ್ದ ಏಕಸದಸ್ಯ ಪೀಠವು ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದೆ. ಅರ್ಜಿದಾರರಾದ ಶೇನ್ ಆಲಂ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರು ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂತ್ರಸ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು, ಆದರೆ ನಂತರ ಅವರನ್ನು ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ.
ಲಿವ್-ಇನ್ ಸಂಬಂಧದ ಪರಿಕಲ್ಪನೆಯು ಯುವ ಪೀಳಿಗೆಯನ್ನು ಬಹಳಷ್ಟು ಆಕರ್ಷಿಸಿದೆ. ಇದೇ ಕಾರಣಕ್ಕೆ ಇಂತಹ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ. ಅದರ ದುಷ್ಪರಿಣಾಮಗಳು ಸಹ ಮುನ್ನೆಲೆಗೆ ಬರುತ್ತಿವೆ ಎಂದು ನ್ಯಾಯಾಲಯ ಹೇಳಿದೆ.
ಅಲಹಾಬಾದ್ ಹೈಕೋರ್ಟ್ ಮಾತ್ರವಲ್ಲ , ದೆಹಲಿ ಸೇರಿದಂತೆ ಹಲವು ಹೈಕೋರ್ಟ್ಗಳು ಲಿವ್ ಇನ್ ಸಂಬಂಧದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿವೆ. ಇಬ್ಬರೂ ಮೊದಲು ಒಪ್ಪಿಗೆ ಪಡೆದೇ ಜತೆಗಿರುತ್ತಾರೆ. ಆದರೆ ಮದುವೆಗೆ ಸಂಬಂಧಿಸಿದ ವಿವಾದಗಳು ಉಂಟಾದಾಗ, ಪೊಲೀಸ್, ನ್ಯಾಯಾಲಯದ ಸಹಾಯ ಕೇಳಿಕೊಂಡು ಬರುತ್ತಾರೆ, ಇದು ತಪ್ಪು ಎಂದು ನ್ಯಾಯಾಲಯಗಳು ಹೇಳಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




