Gyanvapi Mosque: ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಆದೇಶ

ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯನ್ನು ಶಿವಲಿಂಗ ಅಥವಾ ಭಗವಾನ್ ಶಿವನ ಅವಶೇಷ ಎಂದು ನಿರಾಕರಿಸಿದ್ದಾರೆ. ಈ ರಚನೆಯು ವುಝು ಖಾನಾದಲ್ಲಿನ ಕಾರಂಜಿಯ ಒಂದು ಭಾಗವಾಗಿದೆ ಎಂದು ಅವರು ಹೇಳಿದರು.

Gyanvapi Mosque: ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿ
Follow us
ರಶ್ಮಿ ಕಲ್ಲಕಟ್ಟ
|

Updated on: May 12, 2023 | 8:28 PM

ಪ್ರಯಾಗರಾಜ್: ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ (Gyanvapi Mosque) ಹಿಂದೂ ಅರ್ಜಿದಾರರು ಶಿವಲಿಂಗ ಎಂದು ಹೇಳುವ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ (Allahabad High Court)ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (Archaeological Survey of India) ನಿರ್ದೇಶನ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಮೀಕ್ಷೆಗಾಗಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿತ್ತು.ಇಂದಿನ ಆದೇಶದಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ), ರಚನೆಯ ಸಮೀಕ್ಷೆಗೆ ವೈಜ್ಞಾನಿಕ ವಿಧಾನವನ್ನು ಬಳಸಬೇಕು ಮತ್ತು ಅದಕ್ಕೆ ಹಾನಿಯಾಗದಂತೆ ತಡೆಯಬೇಕು ಎಂದು ಹೈಕೋರ್ಟ್ ಹೇಳಿದೆ.

ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯನ್ನು ಶಿವಲಿಂಗ ಅಥವಾ ಭಗವಾನ್ ಶಿವನ ಅವಶೇಷ ಎಂದು ನಿರಾಕರಿಸಿದ್ದಾರೆ. ಈ ರಚನೆಯು ವುಝು ಖಾನಾದಲ್ಲಿನ ಕಾರಂಜಿಯ ಒಂದು ಭಾಗವಾಗಿದೆ ಎಂದು ಅವರು ಹೇಳಿದರು. ನಮಾಜ್ ಮಾಡುವ ಮೊದಲು ಶುದ್ಧೀಕರಣವನ್ನು ಮಾಡುವ ಜಾಗಲೇ ವುಝು ಖಾನಾ.

ಮಸೀದಿ ಸಂಕೀರ್ಣದೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಮಾಡಲು ಐದು ಹಿಂದೂ ಮಹಿಳೆಯರು ವಿನಂತಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷದ ಆರಂಭದಲ್ಲಿ ಕೆಳ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆಸಿದ ವಿಡಿಯೊ ಸಮೀಕ್ಷೆಯಲ್ಲಿ ಈ ರಚನೆಯು ಕಂಡುಬಂದಿದೆ.

ಇದನ್ನೂ ಓದಿ:  ನಿಮ್ಮ ಆಸಕ್ತಿಯ ಕ್ಷೇತ್ರಗಳನ್ನು ಕಂಡುಕೊಂಡರೆ ನೀವು ಅಲ್ಲಿ ಸಾಧನೆ ಮಾಡಬಲ್ಲಿರಿ: ವಿದ್ಯಾರ್ಥಿಗಳಿಗೆ ಮೋದಿ ಕಿವಿ ಮಾತು

ಐದು ಅರ್ಜಿದಾರರಲ್ಲಿ ನಾಲ್ವರು ಶಿವಲಿಂಗದ ವಯಸ್ಸು ಅರಿಯಲು ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ತನಿಖೆಯನ್ನು ಕೋರಿದ್ದರು. ಹಿಂದೂ ದೇವತೆಗಳ ಪುರಾತನ ವಿಗ್ರಹಗಳು ಮಸೀದಿಯೊಳಗೆ ನೆಲೆಗೊಂಡಿವೆ ಎಂದು ಮಹಿಳೆಯರು ಹೇಳುತ್ತಾರೆ.

ಮಸೀದಿಯ ಹೊರ ಗೋಡೆಯ ಮೇಲೆ ಹಿಂದೂ ದೇವರುಗಳ ವಿಗ್ರಹಗಳಿಗೆ ದೈನಂದಿನ ಪೂಜೆಯನ್ನು ಕೋರುವ ವಿನಂತಿಯ ನಿರ್ವಹಣೆಯನ್ನು ಮಸೀದಿ ಸಮಿತಿ ಪ್ರಶ್ನಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ