ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಮತ್ತು ಗೋಸಂರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಏಕೆಂದರೆ ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ ಎಂದು ಹೇಳಿದ ಅಲಹಾಬಾದ್ ಹೈಕೋರ್ಟ್ (Allahabad High Court) ಜಾವೇದ್ ಎಂಬ ವ್ಯಕ್ತಿಗೆ ಜಾಮೀನು ನಿರಾಕರಿಸಿತು. ಈತನ ಮೇಲೆ ಗೋಹತ್ಯೆಯ ಆರೋಪವಿದೆ. ಜಾಮೀನು ನಿರಾಕರಿಸಿದ ನ್ಯಾಯಮೂರ್ತಿ ಶೇಖರ್ ಯಾದವ್ ಅವರ ಪೀಠವು ಅರ್ಜಿದಾರರು ಹಸುವನ್ನು ಕಳ್ಳತನ ಮಾಡಿದ ನಂತರ ಅದನ್ನು ಕೊಂದರು. ಅದರ ತಲೆ ಕತ್ತರಿಸಿ, ಅದರ ಮಾಂಸವನ್ನು ಜೊತೆಯಲ್ಲಿ ಇರಿಸಿದ್ದರು ಎಂದು ಹೇಳಿದ್ದಾರೆ.
ನ್ಯಾಯಾಲಯವು ಈ ಕೆಳಗಿನ ಮಹತ್ವದ ಅವಲೋಕನಗಳನ್ನು ಮಾಡಿದೆ ಮೂಲಭೂತ ಹಕ್ಕು ಕೇವಲ ಗೋಮಾಂಸ ಸೇವಿಸುವವರ ಪರಮಾಧಿಕಾರವಲ್ಲ, ಬದಲಿಗೆ ಹಸುವನ್ನು ಪೂಜಿಸುವವರು ಮತ್ತು ಆರ್ಥಿಕವಾಗಿ ಗೋವುಗಳ ಮೇಲೆ ಅವಲಂಬಿತರಾಗಿರುವವರು, ಅರ್ಥಪೂರ್ಣವಾದ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿದ್ದಾರೆ.
ಬದುಕುವ ಹಕ್ಕು ಕೊಲ್ಲುವ ಹಕ್ಕಿಗಿಂತ ಮೇಲು. ಗೋಮಾಂಸ ತಿನ್ನುವ ಹಕ್ಕನ್ನು ಎಂದಿಗೂ ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು.
ಹಸು ವಯಸ್ಸಾದಾಗ ಮತ್ತು ಅನಾರೋಗ್ಯವಾಗಿದ್ದರೂ ಕೂಡ ಉಪಯುಕ್ತವಾಗಿದೆ. ಅದರ ಸೆಗಣಿ ಮತ್ತು ಮೂತ್ರವು ಕೃಷಿಗೆ, ಔಷಧಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಅದಕ್ಕೆ ವಯಸ್ಸಾದಾಗ ಅಥವಾ ಅನಾರೋಗ್ಯಕ್ಕೆ ಒಳಗಾದಾಗಲೂ ತಾಯಿಯಂತೆ ಪೂಜಿಸಲಾಗುತ್ತದೆ. ಅದನ್ನು ಕೊಲ್ಲುವ ಹಕ್ಕನ್ನು ಯಾರಿಗೂ ನೀಡಲಾಗುವುದಿಲ್ಲ.
ಗೋವುಗಳ ಮಹತ್ವವನ್ನು ಕೇವಲ ಹಿಂದೂಗಳು ಮಾತ್ರ ಅರ್ಥಮಾಡಿಕೊಂಡಿರುವುದಲ್ಲ. ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಗೋವನ್ನು ಭಾರತದ ಸಂಸ್ಕೃತಿಯ ಒಂದು ಪ್ರಮುಖ ಭಾಗವೆಂದು ಪರಿಗಣಿಸಿದ್ದಾರೆ. 5 ಮುಸ್ಲಿಂ ಆಡಳಿತಗಾರರು ಗೋಹತ್ಯೆಯನ್ನು ನಿಷೇಧಿಸಿದರು. ಬಾಬರ್, ಹುಮಾಯೂನ್ ಮತ್ತು ಅಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿ ನೀಡುವುದನ್ನು ನಿಷೇಧಿಸಿದರು. ಮೈಸೂರಿನ ನವಾಬ ಹೈದರ್ ಅಲಿ ಗೋಹತ್ಯೆಯನ್ನು ಶಿಕ್ಷಾರ್ಹ ಅಪರಾಧವಾಗಿಸಿದರು.
ಇದನ್ನೂ ಓದಿ: ಒಡಿಶಾ-ಆಂಧ್ರ ಪ್ರದೇಶ ಗಡಿ ವಿವಾದ ಇತ್ಯರ್ಥವಾಗುವ ಸಾಧ್ಯತೆ; ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
(Allahabad High Court says cow should be declared as national animal cow protection should be kept as a fundamental right of Hindus)