AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯದ ವೇಳೆ ಚುನಾವಣಾ ಅಧಿಕಾರಿ ಕೊವಿಡ್​ನಿಂದ ಮೃತಪಟ್ಟರೆ ಕನಿಷ್ಠ ₹1 ಕೋಟಿ ಪರಿಹಾರ ನೀಡಬೇಕು: ಅಲಹಾಬಾದ್ ಹೈಕೋರ್ಟ್

Allahabad High Court: ಆರ್‌ಟಿಪಿಸಿಆರ್ ಇಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಮತ್ತು ರಾಜ್ಯ ಚುನಾವಣಾ ಆಯೋಗ ಒತ್ತಾಯ ಮಾಡಿದ್ದರಿಂದ ಕುಟುಂಬದಲ್ಲಿ ದುಡಿದು ಸಂಪಾದಿಸುವ ವ್ಯಕ್ತಿ ಸಾವಿಗೀಡಾದರೆ ಅವರಿಗೆ ರಾಜ್ಯ ಸರ್ಕಾರ ಕನಿಷ್ಠ 1 ಕೋಟಿ ಪರಿಹಾರ ನೀಡಬೇಕು ಎಂದಿದೆ ಹೈಕೋರ್ಟ್.

ಚುನಾವಣಾ ಕರ್ತವ್ಯದ ವೇಳೆ ಚುನಾವಣಾ ಅಧಿಕಾರಿ ಕೊವಿಡ್​ನಿಂದ ಮೃತಪಟ್ಟರೆ ಕನಿಷ್ಠ ₹1 ಕೋಟಿ ಪರಿಹಾರ ನೀಡಬೇಕು: ಅಲಹಾಬಾದ್ ಹೈಕೋರ್ಟ್
ಅಲಹಾಬಾದ್ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:May 12, 2021 | 11:47 AM

Share

ಅಲಹಾಬಾದ್: ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯ ನಂತರ ಕೊವಿಡ್​ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ಕನಿಷ್ಠ ₹1ಕೋಟಿ ಪರಿಹಾರ ಧನ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಹೇಳಿದೆ. ಚುನಾವಣೆಯ ಸಮಯದಲ್ಲಿ ಯಾರಾದರೂ ಅವನು/ಅವಳು ಸೇವೆಗಳನ್ನು ಸಲ್ಲಿಸಲು ಸ್ವಯಂಪ್ರೇರಿತರಾಗಿ ಬಂದ ಪ್ರಕರಣವಲ್ಲ.  ಆದರೆ ಚುನಾವಣಾ ಕರ್ತವ್ಯವನ್ನು ನಿಯೋಜಿಸಲಾಗಿರುವವರಿಗೆ ಚುನಾವಣಾ ಸಮಯದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಕಡ್ಡಾಯ ಎಂದು ವಿಭಾಗೀಯ ಪೀಠದ ನ್ಯಾಯಾಧೀಶರಾದ ಸಿದ್ದಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಶುಕ್ರವಾರ ಉತ್ತರ ಪ್ರದೇಶ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ 30,00,000 ರೂ ಪರಿಹಾರ ಘೋಷಿಸಿತ್ತು. ಪರಿಹಾರದ ಮೊತ್ತವು ತುಂಬಾ ಕಡಿಮೆಯಾಗಿದೆ ಮತ್ತು ಕುಟುಂಬಗಳಿಗೆ ಕನಿಷ್ಠ 1 ಕೋಟಿ ರೂ ನೀಡಬೇಕು ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ

ಆರ್‌ಟಿಪಿಸಿಆರ್ ಇಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಮತ್ತು ರಾಜ್ಯ ಚುನಾವಣಾ ಆಯೋಗ ಒತ್ತಾಯ ಮಾಡಿದ್ದರಿಂದ ಕುಟುಂಬದಲ್ಲಿ ದುಡಿದು ಸಂಪಾದಿಸುವ ವ್ಯಕ್ತಿ ಸಾವಿಗೀಡಾದರೆ ಅವರಿಗೆ ರಾಜ್ಯ ಸರ್ಕಾರ ಕನಿಷ್ಠ 1 ಕೋಟಿ ಪರಿಹಾರ ನೀಡಬೇಕು ಎಂದಿದೆ ಹೈಕೋರ್ಟ್.

ಸಾಂಕ್ರಾಮಿಕದ ಬಗ್ಗೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಚೆನ್ನಾಗಿ ತಿಳಿದಿತ್ತು. ಶಿಕ್ಷಕರು, ತನಿಖಾಧಿಕಾರಿಗಳು ಮತ್ತು ಶಿಕ್ಷಣ ಮಿತ್ರ ಸಿಬ್ಬಂದಿಗಳು ಅಪಾಯವನ್ನು ತೆಗೆದುಕೊಳ್ಳಬೇಕಾಯಿತು. ಈ ಮಾರಣಾಂತಿಕ ವೈರಸ್ ಸೋಂಕಿಗೆ ಒಳಗಾಗದಂತೆ ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಹೇಳಿತ್ತು.

ರಾಜ್ಯ ಚುನಾವಣಾ ಆಯೋಗ ಮತ್ತು ಸರ್ಕಾರವು ಪರಿಹಾರದ ಮೊತ್ತದ ಬಗ್ಗೆ ಮರುಚಿಂತನೆ ನಡೆಸಿ ಮುಂದಿನ ದಿನಾಂಕದಂದು ನಮ್ಮ ಬಳಿಗೆ ಬರುತ್ತವೆ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಸಂಬಂಧಿಸಿದ ಬೆಳವಣಿಗೆಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸಿದ್ಧಾರ್ಥ ಅವರ ಏಕ ಸದಸ್ಯ ನ್ಯಾಯಾಂಗ ಪೀಠವು ಚುನಾವಣಾ ಆಯೋಗ, ಉನ್ನತ ನ್ಯಾಯಾಲಯಗಳು ಮತ್ತು ಸರ್ಕಾರವು ಕೆಲವು ರಾಜ್ಯಗಳಲ್ಲಿ ಚುನಾವಣೆಗಳಿಗೆ ಅನುಮತಿ ನೀಡುವುದರಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳನ್ನು ಮತ್ತು ಉತ್ತರಪ್ರದೇಶ ರಾಜ್ಯದಲ್ಲಿ ಪಂಚಾಯತ್ ಚುನಾವಣೆಗಳನ್ನು ಅರಿಯಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 135 ಮಂದಿ ಕೊವಿಡ್ ನಿಂದ ಮೃತಪಟ್ಟಿದ್ದರು. ಈ ವರದಿ ಬಗ್ಗೆ ಕಳೆದ ತಿಂಗಳು ಹೈಕೋರ್ಟ್ ನ್ಯಾಯಾಂಗ ನೋಟಿಸ್ ತೆಗೆದುಕೊಂಡಿತ್ತು. ಈ ಮಾರಣಾಂತಿಕ ವೈರಸ್ ಸೋಂಕಿಗೆ ಒಳಗಾಗದಂತೆ ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯವು ಆಗ ಹೇಳಿತ್ತು.

ಕೊವಿಡ್ ಎರಡನೇ ಅಲೆ ಮಧ್ಯೆ ಉತ್ತರ ಪ್ರದೇಶ ಪಂಚಾಯತ್ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.

(Allahabad High Court Says Uttar pradesh State must grant at least Rs1 crore as compensation For Death Of Polling Officers Due To COVID During Election)

ಇದನ್ನೂ ಓದಿ:  ಕೊವಿಡ್ 2ನೇ ಅಲೆಗೆ ಚುನಾವಣಾ ಆಯೋಗವೇ ಹೊಣೆ; ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್ ಹೈಕೋರ್ಟ್

ಮದ್ರಾಸ್ ಹೈಕೋರ್ಟ್​ನ ಟೀಕೆ ಕಟುವಾಗಿರಬಹುದು ಆದರೆ ತೆಗೆದುಹಾಕಲಾಗದು: ಸುಪ್ರೀಂಕೋರ್ಟ್

Published On - 11:44 am, Wed, 12 May 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ