100 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಯತ್ನ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಖುಲಾಸೆ
ವೃದ್ಧೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಖುಲಾಸೆಗೊಂಡಿದ್ದಾನೆ. ಅಂಕಿತ್ ಪುನಿಯಾ ಅವರನ್ನು 2020 ರಲ್ಲಿ ಸೆಷನ್ಸ್ ನ್ಯಾಯಾಲಯವು 100 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಅಪರಾಧಿ ಎಂದು ತೀರ್ಪು ನೀಡಿತು. ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಯಿತು.
ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದ ಅಂಕಿತ್ ಪುನಿಯಾ ಅವರನ್ನು ಅಲಹಾಬಾದ್ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಅಂಕಿತ್ ಪುನಿಯಾ ಅವರನ್ನು 2020 ರಲ್ಲಿ ಸೆಷನ್ಸ್ ನ್ಯಾಯಾಲಯವು 100 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಅಪರಾಧಿ ಎಂದು ತೀರ್ಪು ನೀಡಿತು. ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಯಿತು.
ನ್ಯಾಯಮೂರ್ತಿ ಅಶ್ವನಿ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಗೌತಮ್ ಚೌಧರಿ ಅವರ ಪೀಠವು ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿತು ಮತ್ತು ಅಂಕಿತ್ ಪುನಿಯಾ ಅವರನ್ನು ಖುಲಾಸೆಗೊಳಿಸಿತು. ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ , ಮಹಿಳೆಯ ಮೊಮ್ಮಗ ಅಂಕಿತ್ ಪುನಿಯಾ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಪ್ರಕಾರ, ಆಗಸ್ಟ್ 29, 2017 ರಂದು ರಾತ್ರಿ ಮಹಿಳೆಯ ಕಿರುಚಾಟವನ್ನು ಕೇಳಿ ಅವರ ಮೊಮ್ಮಗ ಮತ್ತು ಇತರ ಕುಟುಂಬ ಸದಸ್ಯರು ಸಹಾಯಕ್ಕಾಗಿ ಬಂದರು.
ಅಂಕಿತ್ ಪುನಿಯಾ ಅಲ್ಲಿಂದ ಓಡುವುದನ್ನು ನೋಡಿದರು, ಆ ವೇಳೆ ಮಹಿಳೆ ಕಳೆದ ಒಂದು ವರ್ಷದಿಂದ ಹಾಸಿಗೆ ಹಿಡಿದಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದರ ನಂತರ ಅವರ ಆರೋಗ್ಯ ಹದಗೆಟ್ಟಿತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನವೇ ಅವರು ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್ಐಆರ್ ದಾಖಲು
ಈ ಪ್ರಕರಣದಲ್ಲಿ ಅಂಕಿತ್ ಪೂನಿಯಾ ವಿರುದ್ಧ ಕೊಲೆ, ಅತ್ಯಾಚಾರ ಯತ್ನ ಮತ್ತು ಬಲವಂತದ ಮನೆಗೆ ನುಗ್ಗುವಿಕೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆ ದಲಿತೆ ಆಗಿದ್ದರಿಂದ ಪೊಲೀಸರು ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಪುನಿಯಾ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮತ್ತು ನವೆಂಬರ್ 20, 2020 ರಂದು ಮೀರತ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ನಂತರ ಅವರು ಈ ಆದೇಶದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರು.
ಅಲಹಾಬಾದ್ ಹೈಕೋರ್ಟ್‌ನ ಆದೇಶದ ಪ್ರಕಾರ, ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಮಹಿಳೆಯ ಮೊಮ್ಮಗ ಪುನಿಯಾ ಅವರಿಂದ ಸಾಲ ಪಡೆದಿದ್ದಾನೆ ಎಂದು ಅಂಕಿತ್ ಪುನಿಯಾ ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಸಾಲವನ್ನು ಮರುಪಾವತಿ ಮಾಡುವುದನ್ನು ತಪ್ಪಿಸಲು ಈ ರೀತಿ ಕಥೆ ಕಟ್ಟಿದ್ದಾರೆ, ಘಟನೆಗೆ ಸಾಕ್ಷಿ ಅಥವಾ ಪ್ರತ್ಯಕ್ಷದರ್ಶಿ ಇಲ್ಲ ಎಂದು ಪುನಿಯಾ ಪರ ವಕೀಲರು ಹೇಳಿದ್ದಾರೆ.
ಘಟನೆಯ ಸಮಯದಲ್ಲಿ ತಾನು ತನ್ನ ಪತ್ನಿಯೊಂದಿಗೆ ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದೆ ಎಂದು ದೂರುದಾರ ಒಪ್ಪಿಕೊಂಡಿದ್ದಾನೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಅಂದರೆ ಅವರು ಈ ಘಟನೆಗೆ ಪ್ರತ್ಯಕ್ಷದರ್ಶಿಯಾಗಿರಲಿಲ್ಲ. ಆದ್ದರಿಂದ, ದೂರುದಾರ ಮತ್ತು ಅವರ ಪತ್ನಿಯ ಹೇಳಿಕೆಗಳು ವಿಶ್ವಾಸಾರ್ಹವಲ್ಲ ಎಂದು ನ್ಯಾಯಾಲಯವು ಘೋಷಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ