ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಲೈಂಗಿಕ ಕಿರುಕುಳ ಆರೋಪ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂಕೋರ್ಟ್

ನೀವು ಎಫ್‌ಐಆರ್ ನೋಂದಣಿ ಮತ್ತು ದೂರುದಾರರಿಗೆ ಭದ್ರತೆಗಾಗಿ ನಿರ್ದಿಷ್ಟ ಮನವಿಯೊಂದಿಗೆ ಇಲ್ಲಿಗೆ ಬಂದಿದ್ದೀರಿ. ಈಗ ನಿಮ್ಮ ಎರಡೂ ಮನವಿಗಳನ್ನು ಪರಿಹರಿಸಲಾಗಿದೆ. ನಿಮಗೆ ಯಾವುದೇ ಹೆಚ್ಚಿನ ಕುಂದುಕೊರತೆಗಳಿದ್ದರೆ, ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು ಎಂದು ಪೀಠ ಹೇಳಿದೆ.

ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಲೈಂಗಿಕ ಕಿರುಕುಳ ಆರೋಪ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:May 04, 2023 | 5:27 PM

ದೆಹಲಿ: ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಏಳು ದೂರುದಾರರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಗಮನಿಸಿದ ನಂತರ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಹೊರಿಸಿ ಮೂವರು ಮಹಿಳಾ ಕುಸ್ತಿಪಟುಗಳು (wrestlers) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಇಂದು (ಗುರುವಾರ) ಮುಕ್ತಾಯಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Chief Justice DY Chandrachud) ನೇತೃತ್ವದ ಪೀಠವು ಕುಸ್ತಿಪಟುಗಳನ್ನು ಪ್ರತಿನಿಧಿಸುವ ವಕೀಲರ ಮೌಖಿಕ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದೆ.

ನೀವು ಎಫ್‌ಐಆರ್ ನೋಂದಣಿ ಮತ್ತು ದೂರುದಾರರಿಗೆ ಭದ್ರತೆಗಾಗಿ ನಿರ್ದಿಷ್ಟ ಮನವಿಯೊಂದಿಗೆ ಇಲ್ಲಿಗೆ ಬಂದಿದ್ದೀರಿ. ಈಗ ನಿಮ್ಮ ಎರಡೂ ಮನವಿಗಳನ್ನು ಪರಿಹರಿಸಲಾಗಿದೆ. ನಿಮಗೆ ಯಾವುದೇ ಹೆಚ್ಚಿನ ಕುಂದುಕೊರತೆಗಳಿದ್ದರೆ, ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು ಎಂದು ಪೀಠ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರ ಪೀಠ ಸದ್ಯಕ್ಕೆ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿದೆ ಎಂದು ಹೇಳಿದೆ.  ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ಗೆ ತೆರಳಲು ಅರ್ಜಿದಾರರಿಗೆ ಇದು ಅವಕಾಶ ನೀಡಿದೆ.

ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಏಪ್ರಿಲ್ 28 ರ ಉನ್ನತ ನ್ಯಾಯಾಲಯದ ಆದೇಶದ ಪ್ರಕಾರ, ದೂರುದಾರರಿಗೆ ಬೆದರಿಕೆ ಗ್ರಹಿಕೆಯ ಮೌಲ್ಯಮಾಪನವನ್ನು ಪೊಲೀಸರು ನಡೆಸಿದ್ದರು ಎಂದು ಪೀಠಕ್ಕೆ ತಿಳಿಸಿದರು.

ಅಪ್ರಾಪ್ತ ದೂರುದಾರರಿಗೆ ಹಾಗೂ ಇತರ ಆರು ಮಹಿಳಾ ಕುಸ್ತಿಪಟುಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಇದನ್ನೂ ಓದಿ: ಇಷ್ಟೊಂದು ಅವಮಾನ ಮಾಡಿದ್ರು, ನಮ್ಮ ಪದಕ, ಪ್ರಶಸ್ತಿಗಳನ್ನು ವಾಪಸ್ ತೆಗೆದುಕೊಳ್ಳಿ: ನೊಂದು ನುಡಿದ ಕುಸ್ತಿಪಟುಗಳು

ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರು ದೂರುದಾರರ ಹೇಳಿಕೆಗಳನ್ನು ಸಿಆರ್‌ಪಿಸಿಯ ಸೆಕ್ಷನ್ 161 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಮೆಹ್ತಾ ಹೇಳಿದ್ದಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ಸಂಶೋಧನೆಗಳನ್ನು ಸರ್ಕಾರವು ಸಾರ್ವಜನಿಕಗೊಳಿಸಬೇಕೆಂದು ಒತ್ತಾಯಿಸಿ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಗೆದ್ದ ಹಲವಾರು ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಸಂಸದರ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನಾ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 4 May 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ