ದೆಹಲಿಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ; 6 ಮಂದಿ ಬಂಧನ

ಆರೋಪಿಗಳನ್ನು ದೆಹಲಿಯ ಆನಂದ್ ವಿಹಾರ್ ನಿಂದ ಬಂಧಿಸಲಾಗಿದ್ದು ಅವರು 2 ಬ್ಯಾಗ್​​ನಲ್ಲಿ ಮದ್ದುಗುಂಡುಗಳನ್ನು ಕೊಂಡೊಯ್ಯುತ್ತಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ; 6 ಮಂದಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 12, 2022 | 12:51 PM

ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗಂಡುಗಳ ಕಳ್ಳ ಸಾಗಣೆಯಲ್ಲಿ (smuggling )ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ  6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 2000 ಸಜೀವ ಮದ್ದುಗುಂಡುಗಳು (cartridges) ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಗಳನ್ನು ದೆಹಲಿಯ ಆನಂದ್ ವಿಹಾರ್ ನಿಂದ ಬಂಧಿಸಲಾಗಿದ್ದು ಅವರು 2 ಬ್ಯಾಗ್​​ನಲ್ಲಿ ಮದ್ದುಗುಂಡುಗಳನ್ನು ಕೊಂಡೊಯ್ಯುತ್ತಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ ದೆಹಲಿಯಲ್ಲಿ ಸಕಲ ಸಿದ್ಧತೆ ನಡೆದಿದ್ದು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದು, ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.

ದೆಹಲಿಯ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 10,000ಕ್ಕಿಂತವೂ ಹೆಚ್ಚು ಪೊಲೀಸರನ್ನು ಕೆಂಪು ಕೋಟೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ನಾವು ಸ್ವಾತಂತ್ರ್ಯ ದಿನಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಿದ್ದೇವೆ ಎಂದು ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಆದೇಶ) ದೇಪೇಂದ್ರ ಪಾಠಕ್ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Fri, 12 August 22

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ