ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗಂಡುಗಳ ಕಳ್ಳ ಸಾಗಣೆಯಲ್ಲಿ (smuggling )ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 2000 ಸಜೀವ ಮದ್ದುಗುಂಡುಗಳು (cartridges) ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಗಳನ್ನು ದೆಹಲಿಯ ಆನಂದ್ ವಿಹಾರ್ ನಿಂದ ಬಂಧಿಸಲಾಗಿದ್ದು ಅವರು 2 ಬ್ಯಾಗ್ನಲ್ಲಿ ಮದ್ದುಗುಂಡುಗಳನ್ನು ಕೊಂಡೊಯ್ಯುತ್ತಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ ದೆಹಲಿಯಲ್ಲಿ ಸಕಲ ಸಿದ್ಧತೆ ನಡೆದಿದ್ದು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದು, ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.
Delhi Police busts a syndicate involved in the smuggling of ammunition, recovers a huge quantity of ammunition including around 2000 live cartridges; 6 persons arrested.
— ANI (@ANI) August 12, 2022
ದೆಹಲಿಯ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 10,000ಕ್ಕಿಂತವೂ ಹೆಚ್ಚು ಪೊಲೀಸರನ್ನು ಕೆಂಪು ಕೋಟೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ನಾವು ಸ್ವಾತಂತ್ರ್ಯ ದಿನಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಿದ್ದೇವೆ ಎಂದು ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಆದೇಶ) ದೇಪೇಂದ್ರ ಪಾಠಕ್ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:32 pm, Fri, 12 August 22