AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು: ಗೋವಾ ಸಿಎಂ

Sonali Phogat Death ನಾನು ರಾಜ್ಯ ಪೊಲೀಸರ ಬಗ್ಗೆ ಸಂಪೂರ್ಣ ವಿಶ್ವಾಸ ಹೊಂದಿದ್ದು ಮತ್ತು ತನಿಖೆ ಉತ್ತಮವಾಗಿ ನಡೆಯುತ್ತಿದೆ ಎಂದು ಸಾವಂತ್ ಹೇಳಿದ್ದಾರೆ. ಆದರೆ ಹರ್ಯಾಣದ ಜನರಿಂದ ಪುನರಾವರ್ತಿತ ಬೇಡಿಕೆಗಳ ನಂತರ ಪ್ರಕರಣದ ತನಿಖೆಯನ್ನು...

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು: ಗೋವಾ ಸಿಎಂ
ಸೋನಾಲಿ ಫೋಗಟ್
TV9 Web
| Edited By: |

Updated on:Sep 12, 2022 | 2:01 PM

Share

ಚಂಡೀಗಢ: ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಾಟ್ (Sonali Phogat) ಅವರ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ಶಿಫಾರಸು ಮಾಡಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant )ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಹರ್ಯಾಣದಲ್ಲಿ ‘ಮಹಾಪಂಚಾಯತ್ ‘ ನಡೆಸಿದ ಒಂದು ದಿನದ ನಂತರ ಈ ಕ್ರಮ ಬಂದಿದೆ. ನಾನು ರಾಜ್ಯ ಪೊಲೀಸರ ಬಗ್ಗೆ ಸಂಪೂರ್ಣ ವಿಶ್ವಾಸ ಹೊಂದಿದ್ದು, ತನಿಖೆ ಉತ್ತಮವಾಗಿ ನಡೆಯುತ್ತಿದೆ ಎಂದು ಸಾವಂತ್ ಹೇಳಿದ್ದಾರೆ. ಆದರೆ ಹರ್ಯಾಣದ ಜನರಿಂದ ಪುನರಾವರ್ತಿತ ಬೇಡಿಕೆಗಳ ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ . ಫೋಗಟ್ ಸಾವು ಹೇಗೆ ಸಂಭವಿಸಿತು ಎಂದು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದ ಕುಟುಂಬ ಈ ಪ್ರಕರಣದ ಬಗ್ಗೆ ಕೇಂದ್ರ ಏಜೆನ್ಸಿ ತನಿಖೆಗೆ ಒತ್ತಾಯಿಸುತ್ತಿದ್ದಾರೆ.

ಗೋವಾ ಪೊಲೀಸರು ಪ್ರಕರಣದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ತನಿಖೆ ಮಾಡಿದ್ದು ಕೆಲವು ಪ್ರಮುಖ ಸುಳಿವುಗಳನ್ನು ಸಹ ಪಡೆದಿದ್ದಾರೆ ಎಂದು ಸಾವಂತ್ ಪಣಜಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ಹರ್ಯಾಣದ ಜನರು ಮತ್ತು ಸೋನಾಲಿ ಫೋಗಟ್ ಅವರ ಮಗಳ ಬೇಡಿಕೆಯಿಂದಾಗಿ, ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಸಾವಂತ್ ಹೇಳಿದ್ದಾರೆ. ಅದೇ ವೇಳೆ ಕೇಂದ್ರ ಗೃಹ ಸಚಿವಾಲಯಕ್ಕೆ ಖುದ್ದಾಗಿ ಪತ್ರ ಬರೆಯುತ್ತೇನೆ ಎಂದಿದ್ದಾರೆ ಗೋವಾ ಸಿಎಂ.

42 ವರ್ಷದ ಬಿಜೆಪಿ ನಾಯಕಿ ಫೋಗಟ್ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ಪೊಲೀಸರು ಆರಂಭದಲ್ಲಿ ಹೇಳಿದ್ದರು. ಆಮೇಲೆ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಆದರೆ, ಸೋನಾಲಿ ಫೋಗಟ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಹೋದರಿಯರು ಹೇಳಿದ್ದಾರೆ. ಅವಳು ಫೋನ್‌ನಲ್ಲಿ “ಏನೋ ಹೇಳುವವಳಿದ್ದಳು” ಎಂದು ಅವರು ಹೇಳಿದ್ದಾರೆ.

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಧ್ಯಪ್ರವೇಶಿಸಿದ ನಂತರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದರು. ಆಕೆಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, “ದೇಹದ ಮೇಲೆ ಅನೇಕ ಗಾಯಗಳಿವೆ” ಎಂದು ಬೆಳಕಿಗೆ ಬಂದಿದೆ. ಸಾವಿನ ಕಾರಣವನ್ನು ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ವರದಿ ಹೇಳಿದೆ.

ಎರಡು ಭದ್ರತಾ ಕ್ಯಾಮರಾ ವಿಡಿಯೊಗಳು ಆಕೆಯ ಸಾವಿನ ಸಂದರ್ಭಗಳ ಬಗ್ಗೆ ಊಹಾಪೋಹಗಳಿಗೆ  ಒತ್ತು ನೀಡುವಂತೆ ಮಾಡಿದೆ. ಒಂದು ವಿಡಿಯೊದಲ್ಲಿ ಗೋವಾದ ನೈಟ್‌ಕ್ಲಬ್‌ನಿಂದ ಹೊರಬರುವ ದಾರಿಯಲ್ಲಿ ಸೋನಾಲಿ ಫೋಗಟ್ ಒದ್ದಾಡುತ್ತಿರುವುದನ್ನು ತೋರಿಸುತ್ತಿದೆ. ಇನ್ನೊಂದು ಕ್ಯಾಮೆರಾದಲ್ಲಿ ಡ್ಯಾನ್ಸ್ ಫ್ಲೋರ್‌ನಲ್ಲಿ ಫೋಗಟ್ ಅವರಿಗೆ ಬಲವಂತವಾಗಿ ಏನೋ ಕುಡಿಸುತ್ತಿರುವುದನ್ನು ತೋರಿಸಿದೆ.

ಈ ಹಿಂದೆ ಗೋವಾದಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಯುವುದಿಲ್ಲ ಎಂಬ ಷರತ್ತಿನ ಮೇಲೆ, ಕರ್ಲೀಸ್ ರೆಸ್ಟೋರೆಂಟ್ ಅನ್ನು ಕೆಡವಲು ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೇ ರೆಸ್ಟೋರೆಂಟ್ ನಲ್ಲಿ ಸೋನಾಲಿ ಫೋಗಟ್ ಮಾದಕ ದ್ರವ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಗಟ್ ಅವರ ಇಬ್ಬರು ಸಹಾಯಕರು ಸೇರಿದಂತೆ ಐವರನ್ನು ಗೋವಾ ಪೊಲೀಸರು ಬಂಧಿಸಿದ್ದರು. ಆಕೆಯ ಇಬ್ಬರು ಸಹಾಯಕರ ವಿರುದ್ಧ ಪೊಲೀಸರು ಕೊಲೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Published On - 1:06 pm, Mon, 12 September 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?