AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 27, 2023 | 1:19 PM

Share

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ