AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್ ನ ಹಿರಿಯ ನೇತಾರ ಅಶೋಕ್ ಚವಾಣ್ ಹೇಳಿಕೆ ನೀಡಿದ್ದಾರೆ.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್
ಸಂಜಯ್ ರಾವುತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 27, 2020 | 7:19 PM

Share

ಮುಂಬೈ: ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್​ನ ಹಿರಿಯ ನೇತಾರ ಅಶೋಕ್ ಚವಾಣ್ ಭಾನುವಾರ ಹೇಳಿದ್ದಾರೆ. ಶಿವಸೇನೆಯು ಯುಪಿಎ ಮೈತ್ರಿಕೂಟದ ಭಾಗವಾಗಬೇಕಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗಿನ ನಮ್ಮ ಮೈತ್ರಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಆಧಾರದಲ್ಲಿದ್ದು, ಇದು ಮಹಾರಾಷ್ಟ್ರಕಷ್ಟೇ ಸೀಮಿತ ಎಂದಿದ್ದಾರೆ ಚವಾಣ್.

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಚವಾಣ್ ಈ ಹೇಳಿಕೆ ನೀಡಿದ್ದಾರೆ. ಹಲವಾರು ಪಕ್ಷಗಳ ಒಕ್ಕೂಟ ಯುಪಿಎಯ ನೇತೃತ್ವ ವಹಿಸಿದ ಸೋನಿಯಾ ಗಾಂಧಿಯನ್ನು ರಾವುತ್ ಶ್ಲಾಘಿಸಿದ್ದರು.

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ನೇತೃತ್ವ ವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಈ ದೇಶದಲ್ಲಿ ನಾಯಕರ ಅಭಾವವಿಲ್ಲ ಎಂದು ಉತ್ತರಿಸಿದ ಅವರು ಜನರ ಬೆಂಬಲ ತುಂಬಾ ಮುಖ್ಯ. ಸೋನಿಯಾ ಗಾಂಧಿಯವರ ಹೊರತಾಗಿ ಎಲ್ಲ ವಿಭಾಗದ ಜನರಿಂದಲೂ ಬೆಂಬಲ ಸಿಗುವ ವ್ಯಕ್ತಿ ಶರದ್ ಪವಾರ್ ಎಂದಿದ್ದಾರೆ.

ಆದಾಗ್ಯೂ, ಯುಪಿಎ ನೇತೃತ್ವದ ಬಗ್ಗೆ ಉದ್ದವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿಕೆ ನೀಡುವುದು ಸರಿಯಲ್ಲ. ಯುಪಿಎ ಅಧ್ಯಕ್ಷ ಸ್ಥಾನಕ್ಕೇರಲಿದ್ದಾರೆ ಎಂಬ ವದಂತಿಯನ್ನು ಸ್ವತಃ ಶರದ್ ಪವಾರ್ ಅವರೇ ಅಲ್ಲಗೆಳೆದಿದ್ದಾರೆ. ಹಾಗಾಗಿ ಈ ಚರ್ಚೆ ಅಗತ್ಯವಿಲ್ಲ ಎಂದು ಚವಾಣ್ ಹೇಳಿದ್ದಾರೆ.

ಚಳವಳಿ ಚರ್ಚೆ ತಡೆಯಲೆಂದೇ ಚಳಿಗಾಲದ ಅಧಿವೇಶನ ರದ್ದು: ಶಿವಸೇನಾ ನಾಯಕ ಸಂಜಯ್ ರಾವುತ್ ಟೀಕೆ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!