ರೈಲುಗಳ ಮೂಲಕ ವೈದ್ಯಕೀಯ ಆಕ್ಸಿಜನ್​ ಸಾಗಣೆಗೆ ಅವಕಾಶ ಕೊಡಿ; ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರದ ಮನವಿ

|

Updated on: Apr 18, 2021 | 4:15 PM

ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಅದರಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಬೇಡಿಕೆ ಮುಂದಿಟ್ಟಿದ್ದಾರೆ.

ರೈಲುಗಳ ಮೂಲಕ ವೈದ್ಯಕೀಯ ಆಕ್ಸಿಜನ್​ ಸಾಗಣೆಗೆ ಅವಕಾಶ ಕೊಡಿ; ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರದ ಮನವಿ
ಪ್ರಾತಿನಿಧಿಕ ಚಿತ್ರ
Follow us on

ಮುಂಬೈ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ ಎಂಬ ಕೂಗು ಕೇಳಿಬರುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಇದೇ ಸಮಸ್ಯೆಯನ್ನು ಹೇಳಿದ್ದಾರೆ. ಈ ಮಧ್ಯೆ, ಆಕ್ಸಿಜನ್​ ಸಿಲಿಂಡರ್​ಗಳನ್ನು ರೈಲುಗಳ ಮೂಲಕ ಸಾಗಿಸಲು ಅವಕಾಶ ನೀಡುವಂತೆ ಮಹಾರಾಷ್ಟ್ರ ಸರ್ಕಾರ, ಕೇಂದ್ರ ಸರ್ಕಾರದ ಅನುಮತಿ ಕೇಳಿದೆ.

ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಅದರಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ರೈಲುಗಳ ಮೂಲಕ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ಗಳ ಸಾಗಣೆಗೆ ಅವಕಾಶ ನೀಡಿದರೆ ಖರ್ಚು ಮತ್ತು ಸಮಯ ಎರಡನ್ನೂ ಉಳಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಶ್ ಟೋಪೆ ಈ ವಿಚಾರವನ್ನು ತಿಳಿಸಿದ್ದಾರೆ.

ಕೊವಿಡ್​ 19 ರೋಗಿಗಳ ಚಿಕಿತ್ಸೆಗೆ ಅಗತ್ಯ ಇರುವ ದ್ರವರೂಪದ ಆಕ್ಸಿಜನ್​ ಸಿಲಿಂಡರ್​ಗಳನ್ನು ರೈಲುಗಳ ಮೂಲಕ ಸಾಗಿಸಿದರೆ ಸಾಗಣೆಯ ವೆಚ್ಚ ಕಡಿಮೆ ಇರುತ್ತದೆ. ಇದಕ್ಕೆ ಅವಕಾಶ ಮಾಡಿಕೊಡುವ ಜತೆ, ಆಕ್ಸಿಜನ್​ ಸಾಗಣೆ ಸಂಬಂಧ ಸೂಕ್ತ ನಿಯಮಗಳನ್ನು, ನಿರ್ದೇಶನಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ತಾವು ಹರ್ಷವರ್ಧನ್​ ಅವರಿಗೆ ಮನವಿ ಮಾಡಿದ್ದಾಗಿ ಮಹಾ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಗಾಳಿಯಿಂದಲೇ ಆಮ್ಲಜನಕ ಹೀರುವ ಸಾಮರ್ಥ್ಯವುಳ್ಳ 113 ಸ್ಥಾವರಗಳನ್ನು ಅಳವಡಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಅದರಲ್ಲಿ ಗರಿಷ್ಠ ಮಟ್ಟದ ಸ್ಥಾವರಗಳನ್ನು ಪಡೆಯಲು ಮಹಾರಾಷ್ಟ್ರ ಸರ್ಕಾರ ಪ್ರಯತ್ನಿಸುತ್ತಿದೆ. ಹೀಗೆ ಗಾಳಿಯಿಂದ ಹೀರಲ್ಪಡುವ ಆಕ್ಸಿಜನ್​​ನ್ನು ಸಂಸ್ಕರಿಸುವ ಮೂಲಕ ವೈದ್ಯಕೀಯ ಆಕ್ಸಿಜನ್​ ಆಗಿ ಪರಿವರ್ತಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: Coronavirus News Live Updates: ಬೆಂಗಳೂರಿನಲ್ಲಿ ನೋ ಲಾಕ್​ಡೌನ್ ಎಂದ ಆರ್.ಅಶೋಕ್

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!