Gyanvapi Mosque: ಜ್ಞಾನವಾಪಿ ಮಸೀದಿಯೊಳಗೆ ವುಝುಗೆ ಅವಕಾಶ: ಆಡಳಿತ, ಎಲ್ಲಾ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸುಪ್ರೀಂ ಸೂಚನೆ

ಜ್ಞಾನವಾಪಿ ಮಸೀದಿಯಲ್ಲಿ ರಂಜಾನ್ ಸಮಯದಲ್ಲಿ ವುಝು (ಅಭ್ಯರ್ಥನ) ಕ್ಕೆ ಸೂಕ್ತ ವ್ಯವಸ್ಥೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮನವಿಗೆ ಸೌಹಾರ್ದಯುತ ತೀರ್ಮಾನಕ್ಕೆ ಬರುವಂತೆ ಸುಪ್ರೀಂ ಕೋರ್ಟ್​ ತಿಳಿಸಿದೆ.

Gyanvapi Mosque: ಜ್ಞಾನವಾಪಿ ಮಸೀದಿಯೊಳಗೆ ವುಝುಗೆ ಅವಕಾಶ: ಆಡಳಿತ, ಎಲ್ಲಾ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸುಪ್ರೀಂ ಸೂಚನೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 4:51 PM

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ರಂಜಾನ್ ಸಮಯದಲ್ಲಿ ವುಝು (ಅಭ್ಯರ್ಥನ) ಕ್ಕೆ ಸೂಕ್ತ ವ್ಯವಸ್ಥೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮನವಿಗೆ ಸೌಹಾರ್ದಯುತ ತೀರ್ಮಾನಕ್ಕೆ ಬರುವಂತೆ ಸುಪ್ರೀಂ ಕೋರ್ಟ್​ ತಿಳಿಸಿದೆ. ಇದಕ್ಕಾಗಿ ನಾಳೆ (ಏ.18) ಸೌಹಾರ್ದಯುತ ಮಾತುಕತೆ ನಡೆಸುವಂತೆ ವಾರಣಾಸಿ ಜಿಲ್ಲಾಡಳಿತ ಮತ್ತು ಎಲ್ಲಾ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ  ಶುಕ್ರವಾರ ಮುಂದಿನ ವಿಚಾರಣೆ ನಡೆಯಲಿದೆ ಎಂದು ಹೇಳಿದೆ. ಅಲ್ಲಿ ಕಳೆದ ವರ್ಷ ನಡೆದ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿತ್ತು. ಈ ಕಾರಣಕ್ಕೆ ಅಲ್ಲಿ ಯಾರಿಗೂ ಹೋಗಲು ಅವಕಾಶ ನೀಡದ ಕಾರಣ, ಅಲ್ಲಿ ಮುಸ್ಲಿಂ ಸಮುದಾಯಕ್ಕೂ ಪ್ರವೇಶ ನೀಡಿರಲಿಲ್ಲ. ಇದೀಗ ರಂಜಾನ್ ವೇಳೆ ನಮಾಜ್ ಮಾಡಲು ಅವಕಾಶ ನೀಡಬೇಕು ಎಂದು ಕೇಳಿದ್ದಾರೆ, ಆದರೆ ಸುಪ್ರೀಂ, ಇದೀಗ ಈ ಬಗ್ಗೆ ಪ್ರಕರಣ ನಮ್ಮ ಮುಂದೆ ಇದೆ, ಒಂದು ವೇಳೆ ನಿಮಗೆ ಇಲ್ಲಿ ಪ್ರಾರ್ಥನೆ ಸಲ್ಲಿಸಲೇಬೇಕೆಂದರೆ ಸೌಹಾರ್ದಯುತ ಮಾತುಕತೆಯ ನಡೆಸಿ ಒಂದು ತೀರ್ಮಾನಕ್ಕೆ ಬನ್ನಿ ಎಂದು ಹೇಳಿದೆ.

ಮಸೀದಿ ಆಡಳಿತ ಸಮಿತಿಯ ಪ್ರತಿನಿಧಿಗಳು ಮತ್ತು ಇತರ ಮಧ್ಯಸ್ಥಗಾರರ ಜತೆ ಜಿಲ್ಲಾಧಿಕಾರಿ ಮಂಗಳವಾರ ಸಭೆ ನಡೆಸಲಿದ್ದಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಪೀಠವು, ಶುಕ್ರವಾರ ‘ವುಝು’ ವ್ಯವಸ್ಥೆಗೆ ಸೂಕ್ತ ನಿರ್ದೇಶನಗಳನ್ನು ನೀಡಿದಾಗ ಈ ವಿಷಯವನ್ನು ಮತ್ತೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ಪ್ರಕಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಇಂತೇಝಾಮಿಯಾ ಮಸೀದಿ ಪರವಾಗಿ ಪ್ರತಿನಿಧಿಸುವ ಹಿರಿಯ ವಕೀಲ ಹುಝೆಫಾ ಅಹ್ಮದಿ, ರಂಜಾನ್ ಸಮಯದಲ್ಲಿ ಭಾರೀ ಜನದಟ್ಟಣೆಯನ್ನು ಇರುವ ಕಾರಣ ಅವರು ವುಝು ಮಾಡಲು ಅಲ್ಲಿ ವ್ಯವಸ್ಥೆ ಮಾಡಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅಹ್ಮದಿ, ವಕೀಲ ಫುಜೈಲ್ ಅಹ್ಮದ್ ಅಯ್ಯುಬಿ ಕೂಡ ಈ ಬಗ್ಗೆ ಸಿಜೆಐಗೆ ಮನವಿ ಮಾಡಿದ್ದಾರೆ. ಹಿಂದಿನ ನ್ಯಾಯಾಲಯದ ಆದೇಶಗಳು ಈಗಾಗಲೇ ‘ವುಝು’ ಗಾಗಿ ಸರಿಯಾದ ವ್ಯವಸ್ಥೆಯನ್ನು ತಿಳಿಸುವಂತೆ ಜಿಲ್ಲಾಡಳಿತವನ್ನು ಕೇಳಿದೆ ಮತ್ತು ರಂಜಾನ್ ದೃಷ್ಟಿಯಿಂದ ಈ ನಿರ್ದೇಶನಗಳನ್ನು ಸೂಕ್ತ ಅನುಷ್ಠಾನಕ್ಕೆ ತರಲು ಪ್ರಯತ್ನಗಳು ನಡೆಯುತ್ತಿದೆ ಎಂದು ವಕೀಲರು ಹೇಳಿದರು.

ಇದನ್ನೂ ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಮಸೀದಿ ಆಡಳಿತ ಸಮಿತಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಬಹುದಾಗಿದೆ ಎಂದು ಹೇಳಿದರು. ಇತರ ಸಮುದಾಯದ (ಹಿಂದೂಗಳ) ಧಾರ್ಮಿಕ ಸಂವೇದನೆಗಳ ದೃಷ್ಟಿಯಿಂದ ಈ ಕ್ರಮವನ್ನು ಸರಿಯಾಗಿ ನಿರ್ಧಾರಿಸಬೇಕು ಎಂದು ಸಿಜೆಐಗೆ ತಿಳಿಸಿದ್ದಾರೆ. ಇದಕ್ಕೆ ಪೀಠವು, ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಸರಿಯಾದ ತೀರ್ಮಾನವನ್ನು ತಿಳಿಸಿ, ನಂತರ ನಮ್ಮ ಮುಂದೆ ಬನ್ನಿ ಮತ್ತು ನ್ಯಾಯಾಲಯವು ಎಲ್ಲಾ ಪಕ್ಷಗಳ ಒಮ್ಮತದ ಮೂಲಕ ಆದೇಶವನ್ನು ನೀಡಬಹುದು ಎಂದು ಹೇಳಿದರು.

ಮಸೀದಿಯ ಪಶ್ಚಿಮ ಗೋಡೆಯ ಹಿಂದೆ ಇದೆ ಎನ್ನಲಾದ ಪಾರ್ವತಿ ದೇವಿಯ ದೇಗುಲವಾದ ಮಾ ಶೃಂಗಾರ್ ಗೌರಿ ಸ್ಥಳದಲ್ಲಿ ಪೂಜೆ ಸಲ್ಲಿಸಲು ಅವಕಾಶವನ್ನು ಕೋರಿದ ಐವರು ಹಿಂದೂ ಮಹಿಳೆಯರ ಮೊಕದ್ದಮೆಯನ್ನು ವಿರೋಧಿಸಿ ಮೇ ತಿಂಗಳಲ್ಲಿ ಮಸೀದಿ ಸಮಿತಿಯು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪ್ರಸ್ತುತ ಪಡೆದುಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Mon, 17 April 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್