ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್​​​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿರುದ್ಧ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 

ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್​​​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Mohammad Zubair
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 12:53 PM

ಆಲ್ಟ್ ನ್ಯೂಸ್‌ನ (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್(Mohammed Zubair) ಅವರ ವಿರುದ್ಧ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್(Supreme Court )ಮಧ್ಯಂತರ ಜಾಮೀನು ನೀಡಿದೆ.  ಅಲಹಾಬಾದ್ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿರುವ ಅರ್ಜಿಯ ಮೇಲೆ ಯುಪಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. 2018ರಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎಂಬ ಆರೋಪದಲ್ಲಿ ದೆಹಲಿ ಪೊಲೀಸರಿಂದ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್​​ಗೆ ಸುಪ್ರೀಂಕೋರ್ಟ್ ಕೆಲವು ದಿನಗಳಿಗೆ ಮಧ್ಯಂತರ ಜಾಮೀನು ಅನುಮತಿಸಿದೆ. ಜುಬೇರ್ ಪರ ವಾದಿಸಿದ ಹಿರಿಯ ವಕೀಲ ಕೊಲೀನ್ ಗೋನ್ಸ್ಲೇವ್ಸ್, ಜುಬೇರ್ ವಿರುದ್ಧ ಯಾವುದೇ ಕ್ರಿಮಿನಲ್ ಕೇಸುಗಳಿಲ್ಲ ಎಂದು ವಾದಿಸಿದ್ದಾರೆ. ಈ ಪ್ರಕರಣ ದಾಖಲಿಸಿದ್ದು ಒಂದು ಟ್ವೀಟ್​​ನ ಆಧಾರದ ಮೇಲೆ. ಪೊಲೀಸರ ವಿಚಾರಣೆ ಅಥವಾ ನ್ಯಾಯಾಂಗ ಬಂಧನ ಈಗ ಅಪ್ರಸ್ತುತ ಆಗಿರುವುದರಿಂದ ನಾವು ಈ ಪ್ರಕ್ರಿಯೆಯನ್ನು ರದ್ದು ಮಾಡಲು ಬಯಸುತ್ತೇವೆ ಎಂದಿದ್ದಾರೆ. ದೇಶ ಎಲ್ಲಿಗೆ ಬಂದಿದೆ ನೋಡಿ,  ಸುಳ್ಳುಗಳನ್ನು ಬಹಿರಂಗಡಿಸುವ ವ್ಯಕ್ತಿಯೊಬ್ಬರು ಜೈಲಿನಲ್ಲಿದ್ದು ಜಾಮೀನಿಗಾಗಿ ಕಾಯಬೇಕಿದೆ. ದ್ವೇಷ ಪ್ರಚೋದನೆ ಮಾಡುವವರು ಸಂವಿಧಾನ ಮತ್ತು ನ್ಯಾಯಾಧೀಶರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಜುಬೇರ್ ಅವರು ಇಂಥಾ ವಿಷ ಕಾರುವವರನ್ನು ಬಹಿರಂಗ ಪಡಿಸಿದ್ದಾರೆ. ಆದರೆ ಇದಕ್ಕಾಗಿ ಅವರು ಜೈಲು ಶಿಕ್ಷೆ ಅನುಭವಿಸಬೇಕಾಗಿ ಬಂದಿದೆ ಎಂದ ಗೋನ್ಸ್ಲೇವ್ಸ್ ಹೇಳಿದ್ದಾರೆ.

ಏತನ್ಮಧ್ಯೆ, ಜುಬೇರ್ ಅವರು ಸತ್ಯಗಳನ್ನು ಮರೆ ಮಾಚುತ್ತಿದ್ದಾರೆ ಎಂದು ಆರೋಪಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸೀತಾಪುರ್ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ನಿನ್ನೆ ವಜಾ ಮಾಡಿದೆ ಎಂದು ಪತ್ರಕರ್ತ ತಮ್ಮ ಅರ್ಜಿಯಲ್ಲಿ ಹೇಳಿಲ್ಲ ಎಂದಿದ್ದಾರೆ. ಆದರೆ ಅರ್ಜಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ ಎಂದು ಜುಬೇರ್ ಪರ ವಕೀಲರು ಉತ್ತರಿಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಉತ್ತರ ಪ್ರದೇಶ ಪೊಲೀಸರ ಪರವಾಗಿ ಹಾಜರಾದ ಎಸ್​​ಜಿ ಮೆಹ್ತಾ, ಇಲ್ಲಿರುವುದು ಟ್ವೀಟ್ ವಿಷಯ ಅಲ್ಲ. ಜುಬೇರ್ ಅವರು ಸಮಾಜವನ್ನು ಅಸ್ಥಿರಗೊಳಿಸಲಿರುವ ಭಾಗವಾಗಿ ಇಂಥಾ ಟ್ವೀಟ್ ಗಳನ್ನು ಮಾಡಿದ್ದಾರೆ ಎಂದು ಹೇಳಿರುವುದಾಗಿ ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಜುಬೇರ್ ಅವರನ್ನು ಸಾಮಾನ್ಯ ಅಪರಾಧಿ ಎಂದ ಮೆಹ್ತಾ, ಈ ಪ್ರಕರಣದಲ್ಲಿ ಹಣ ವ್ಯವಹಾರದ ಬಗ್ಗೆಯೂ ಆರೋಪವಿದೆ ಎಂದಿದ್ದಾರೆ. ವಿದೇಶದಿಂದ ಬಂದ ಹಣದ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದ ಮೆಹ್ತಾ, ದೆಹಲಿ ಹೈಕೋರ್ಟ್ ಜುಬೇರ್​​ಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತ್ತು ಎಂದಿದ್ದಾರೆ.

Published On - 12:31 pm, Fri, 8 July 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್