Alt News: ದೆಹಲಿ ಪೊಲೀಸರಿಂದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಬಂಧನ
mohammed zubair arrest: ಹಿಂದೂ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಡಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಬಂಧನಕ್ಕೀಡಾಗಿದ್ದಾರೆ.
ದೆಹಲಿ: ದೆಹಲಿ ಪೊಲೀಸರು (delhi police) ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ (Alt News co founder ) ಮೊಹಮ್ಮದ್ ಝುಬೇರ್ (mohammed zubair) ನನ್ನು ಬಂಧಿಸಿದ್ದಾರೆ. ಮೊಹಮ್ಮದ್ ಝುಬೇರ್ ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಅರೆಸ್ಟ್ ಮಾಡಲಾಗಿದೆ. ಹಿಂದೂ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಡಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಬಂಧನಕ್ಕೀಡಾಗಿದ್ದಾರೆ.
ಪತ್ರಕರ್ತ ಮೊಹಮ್ಮದ್ ಝುಬೇರ್ ವಿರುದ್ಧ ಆರೋಪಗಳೇನು: ಪತ್ರಕರ್ತ ಮೊಹಮ್ಮದ್ ಝುಬೇರ್ ವಿರುದ್ಧ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು-ಗಲಭೆ ನಡೆಸಿದರೆ -ಒಪ್ಪಿಕೊಳ್ಳದಿದ್ದರೆ) ಮತ್ತು 295A (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವಂತಹ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ (under sections 153/295 IPC) ಆರೋಪ ಹೊರಿಸಲಾಗಿದೆ.
ಇದನ್ನೂ ಓದಿ:
Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್..!
ಇದನ್ನೂ ಓದಿ:
ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ನ್ಯಾಯಾಂಗ ಬಂಧನ 14 ದಿನಗಳವರೆಗೆ ವಿಸ್ತರಣೆ
Published On - 8:18 pm, Mon, 27 June 22