Amarinder Singh: ನಾನು ಬಿಜೆಪಿ ಸೇರುತ್ತಿಲ್ಲ, ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತೇನೆ; ಅಮರೀಂದರ್ ಸಿಂಗ್ ಸ್ಪಷ್ಟನೆ

Punjab Crisis | ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ಆದರೆ, ನನಗೆ ಆಗಿರುವ ಅವಮಾನವನ್ನು ಸಹಿಸಲಾಗದೆ ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತಿದ್ದೇನೆ. ಇನ್ನು ಈ ಪಕ್ಷದಲ್ಲಿ ಉಳಿಯಲಾರದೆ ಎಂದು ಅಮರೀಂದರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

Amarinder Singh: ನಾನು ಬಿಜೆಪಿ ಸೇರುತ್ತಿಲ್ಲ, ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತೇನೆ; ಅಮರೀಂದರ್ ಸಿಂಗ್ ಸ್ಪಷ್ಟನೆ
ಅಮರೀಂದರ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 30, 2021 | 1:55 PM

ನವದೆಹಲಿ: ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಪಂಜಾಬ್​ನ ಮಾಜಿ ಸಿಎಂ ಅಮರೀಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಸೇರುವುದು ಪಕ್ಕಾ ಎನ್ನಲಾಗಿತ್ತು. ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಬಂದಿರುವುದಾಗಿ ಹೇಳಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಮರೀಂದರ್ ಸಿಂಗ್ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವುದು ನಿಜ. ಆದರೆ, ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ನನಗೆ ಆಗಿರುವ ಅವಮಾನವನ್ನು ಸಹಿಸಲಾಗದೆ ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತಿದ್ದೇನೆ. ಇನ್ನು ಈ ಪಕ್ಷದಲ್ಲಿ ಉಳಿಯಲಾರದೆ ಎಂದಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವಾಗಲೇ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಬೇಸರವಿದೆ. ಇಲ್ಲಿಯವರೆಗೂ ನಾನು ಕಾಂಗ್ರೆಸ್​ನಲ್ಲಿಯೇ ಇದ್ದೇನೆ. ಆದರೆ, ಇನ್ನು ಈ ಪಕ್ಷದಲ್ಲಿ ಮುಂದುವರೆಯಲು ನನಗೆ ಇಷ್ಟವಿಲ್ಲ. ನನ್ನನ್ನು ಸೂಕ್ತ ರೀತಿಯಲ್ಲಿ ಪಕ್ಷ ನಡೆಸಿಕೊಂಡಿಲ್ಲ. ಇದರಿಂದ ನನಗೆ ಅವಮಾನ ಹಾಗೂ ಬೇಸರವಾಗಿದೆ. ನವಜೋತ್​ ಸಿಂಗ್ ಸಿಧು ರೀತಿಯ ಚೈಲ್ಡಿಶ್ ವ್ಯಕ್ತಿಗೆ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಿದರು. ಆದರೆ, ಆತ ಅದನ್ನು ಉಳಿಸಿಕೊಳ್ಳಲಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿರುವ ನಮ್ಮಂತಹವರಿಗೆ ಸೂಕ್ತ ಗೌರವ ಸಿಗುತ್ತಿಲ್ಲ. ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮುಖ್ಯಮಂತ್ರಿಯಾಗಿದ್ದ ನನಗೆ ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷರು ಫೋನ್ ಮಾಡಿ ರಾಜೀನಾಮೆ ನೀಡಲು ಸೂಚಿಸಿದರು. ನಾನು ಅವರಿಗೆ ಯಾವ ಪ್ರಶ್ನೆಯನ್ನೂ ಕೇಳದೆ ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದೆ. 50 ವರ್ಷಗಳಾದರೂ ನಮ್ಮ ಪಕ್ಷದ ನಾಯಕರಿಗೆ ನನ್ನ ಮೇಲೆ ನಂಬಿಕೆ ಬಂದಿಲ್ಲ ಎಂದಾದರೆ ನಾನು ಈ ಪಕ್ಷದಲ್ಲಿದ್ದು ಏನೂ ಪ್ರಯೋಜನವಿಲ್ಲ ಎಂದೇ ಅರ್ಥ ಎಂದು ಅಮರೀಂದರ್ ಸಿಂಗ್ ಬೇಸರ ಹೊರಹಾಕಿದ್ದಾರೆ.

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಹಿರಂಗವಾಗಿಯೇ ಕಾಂಗ್ರೆಸ್ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದರು. ಪಂಜಾಬ್​ನಲ್ಲಿ ಚರಣ್​ಜೀತ್ ಸಿಂಗ್ ಛನ್ನಿ ಸಂಪುಟ ರಚನೆಯಾದ ಬೆನ್ನಲ್ಲೇ ದೆಹಲಿಗೆ ಪ್ರಯಾಣ ಬೆಳೆಸಿದ್ದ ಅಮರೀಂದರ್ ಸಿಂಗ್ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಇದರಿಂದ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿಗೆ ಇನ್ನಷ್ಟು ಪುಷ್ಠಿ ಸಿಕ್ಕಿತ್ತು.

ಆದರೆ, ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಭೇಟಿ ಕೇವಲ ಸೌಜನ್ಯದ ಭೇಟಿ ಎಂದು ಪಂಜಾಬ್​ನ ಅಮರೀಂದರ್ ಸಿಂಗ್ ಬಣದವರು ತಿಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಮರೀಂದರ್ ಸಿಂಗ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಆದರೆ, ಇದನ್ನು ಅಲ್ಲಗಳೆದಿರುವ ಅಮರೀಂದರ್ ಸಿಂಗ್ ನಾನು ಬಿಜೆಪಿ ಸೇರುವುದಿಲ್ಲ ಎಂದಿದ್ದಾರೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ದೆಹಲಿಗೆ ಹೊರಡುವ ವೇಳೆಯೂ ವಿಮಾನ ನಿಲ್ದಾಣದಲ್ಲಿ ನನ್ನ ವೈಯಕ್ತಿಕ ಕಾರಣಗಳಿಂದ ದೆಹಲಿಗೆ ತೆರಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ದೆಹಲಿಯಲ್ಲಿರುವ ನಿವಾಸವನ್ನು ಖಾಲಿ ಮಾಡಬೇಕಾಗಿದೆ. ಹೀಗಾಗಿ, ದೆಹಲಿಗೆ ಹೋಗುತ್ತಿದ್ದೇನೆ. ನಾನು ಯಾವ ರಾಜಕೀಯ ನಾಯಕರನ್ನೂ ಭೇಟಿ ಮಾಡುತ್ತಿಲ್ಲ ಎಂದು ಅಮರೀಂದರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ, ದೆಹಲಿಗೆ ಬಂದ ನಂತರ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಹೀಗಾಗಿ, ಈಗ ನಾನು ಬಿಜೆಪಿ ಸೇರುತ್ತಿಲ್ಲ ಎಂಬ ಅಮರೀಂದರ್ ಸಿಂಗ್ ಅವರ ಹೇಳಿಕೆ ಎಷ್ಟರ ಮಟ್ಟಿಗೆ ಸತ್ಯ ಎಂಬ ಅನುಮಾನವೂ ವ್ಯಕ್ತವಾಗಿದೆ.

ಇದನ್ನೂ ಓದಿ: ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ

Amarinder Singh: ರಾಜೀವ್ ಗಾಂಧಿಯ ಗೆಳೆಯನಾಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೇನೆ ಬಿಟ್ಟು ರಾಜಕೀಯಕ್ಕೆ ಬಂದಿದ್ದೇಕೆ?

Published On - 1:38 pm, Thu, 30 September 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್