ಅಮರೀಂದರ್ ಸಿಂಗ್​ ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ; ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಸ್ಪಷ್ಟನೆ

ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆ ಅಮರೀಂದರ್ ಸಿಂಗ್ ನೇತೃತ್ವದಲ್ಲೇ ನಡೆಯಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸುವ ಮೂಲಕ ಮುಖ್ಯಮಂತ್ರಿ ಬದಲಾವಣೆಯ ವದಂತಿಗಳಿಗೆ ತೆರೆ ಎಳೆದಿದೆ.

ಅಮರೀಂದರ್ ಸಿಂಗ್​ ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ; ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಸ್ಪಷ್ಟನೆ
ಪಂಜಾಬ ಮುಖ್ಯಮಂತ್ರಿ ಅಮರಿಂದರ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 25, 2021 | 3:49 PM

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಪಂಜಾಬ್​ನ ಕಾಂಗ್ರೆಸ್​ನಲ್ಲಿ ನವಜೋತ್ ಸಿಂಗ್ ಸಿಧು ಮತ್ತು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನಡುವಿನ ಮುಸುಕಿನ ಗುದ್ದಾಟಕ್ಕೆ ಪೂರ್ಣ ವಿರಾಮ ಬಿದ್ದಿತ್ತು. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧು ಅಧಿಕಾರ ಸ್ವೀಕರಿಸುವಾಗ ಸಿಎಂ ಅಮರೀಂದರ್ ಸಿಂಗ್ ಕೂಡ ಹಾಜರಾಗಿದ್ದರು. ಈ ನಡುವೆ ಪಂಜಾಬ್ ಕಾಂಗ್ರೆಸ್​ನಲ್ಲಿ ಮತ್ತೆ ಬಂಡಾಯವೆದ್ದಿದ್ದು, 4 ಸಚಿವರು ಹಾಗೂ 23 ಶಾಸಕರು ಅಮರೀಂದರ್ ಸಿಂಗ್ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಆದರೆ, ಮುಂದಿನ ವಿಧಾನಸಭಾ ಚುನಾವಣೆ ಅಮರೀಂದರ್ ಸಿಂಗ್ ನೇತೃತ್ವದಲ್ಲೇ ನಡೆಯಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸುವ ಮೂಲಕ ಈ ಅನುಮಾನಗಳಿಗೆ ತೆರೆ ಎಳೆದಿದೆ.

ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್, 2022ರ ಪಂಜಾಬ್ ವಿಧಾನಸಭಾ ಚುನಾವಣೆಯ ಜವಾಬ್ದಾರಿಯನ್ನು ಕ್ಯಾಪ್ಟನ್ ಅಮರೀಂದರ್ ಸಿಂಗ್ ವಹಿಸಿಕೊಳ್ಳಲಿದ್ದಾರೆ ಎಂದು ಘೋಷಿಸಿದ್ದಾರೆ. ಹಲವು ಭಿನ್ನಾಭಿಪ್ರಾಯಗಳ ನಡುವೆಯೂ ಹೈಕಮಾಂಡ್ ನಿರ್ಧಾರಕ್ಕೆ ಬೆಲೆ ನೀಡಿ ನವಜೋತ್ ಸಿಂಗ್ ಸಿಧು ಅವರಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದನ್ನು ಸಿಎಂ ಅಮರೀಂದರ್ ಸಿಂಗ್ ಸ್ವಾಗತಿಸಿದ್ದರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ರಾವತ್ ತಿಳಿಸಿದ್ದಾರೆ.

2017ರ ವಿಧಾನಸಭೆ ಚುನಾವಣೆಗೂ ಮುನ್ನ ಅಮರಿಂದರ್ ಸಿಂಗ್ ನೀಡಿದ್ದ ಭರವಸೆಗಳ ಪೈಕಿ ಯಾವುದೇ ಭರವಸೆಗಳೂ ಈಡೇರಿಲ್ಲದ ಕಾರಣ ಅವರ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ನಾಲ್ವರು ಸಚಿವರು ಸೇರಿದಂತೆ 23 ಶಾಸಕರು ಅಸಮಾಧಾನ ಹೊರಹಾಕಿದ್ದರು. ಈ ಕುರಿತು ಹೈಕಮಾಂಡ್ಗೆ ಪತ್ರ ಬರೆಯುವುದಾಗಿಯೂ ಘೋಷಿಸಿದ್ದರು.

ನಾಲ್ವರು ಸಚಿವರಾದ ತೃಪ್ತ ರಾಜಿಂದರ್ ಸಿಂಗ್ ಬಾಜ್ವ, ಸುಖ್ಬಿಂದರ್ ಸಿಂಗ್ ಸರ್ಕಾರಿಯಾ, ಸುಖ್ಜಿಂದರ್ ಸಿಂಗ್ ರಾಂಧವಾ ಹಾಗೂ ಚರಣ್ ಜಿತ್ ಸಿಂಗ್ ಚನ್ನಿ ಹಾಗೂ 23 ಶಾಸಕರು ಸಿಎಂ ಅಮರಿಂದರ್ ಸಿಂಗ್ ವಿರುದ್ಧ ಸಭೆ ನಡೆಸಿದ್ದರು. ಪಂಜಾಬ್​ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವಂತೆ ಕಾಂಗ್ರೆಸ್ ಹೈಕಮಾಂದ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದರು.

ಇದನ್ನೂ ಓದಿ: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ; ಅಮರೀಂದರ್ ಸಿಂಗ್​ಗೆ ಭಾರೀ ಹಿನ್ನಡೆ

ನವಜೋತ್ ಸಿಂಗ್ ಸಿಧು- ಅಮರೀಂದರ್ ಸಿಂಗ್ ನಡುವಿನ ಶೀತಲ ಸಮರ ಅಂತ್ಯ; ನಾಳೆಯ ಟೀ ಪಾರ್ಟಿಗೆ ಹೋಗ್ತಾರಂತೆ ಪಂಜಾಬ್ ಸಿಎಂ

(Amarinder Singh to Lead 2022 Punjab Polls Congress Leader Harish Rawat Clarifies Amid Demands of CM Removal)

Published On - 3:46 pm, Wed, 25 August 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್