Amarinder Singh: ಕೃಷಿ ತಜ್ಞರ ಜೊತೆ ನಾಳೆ ಅಮರೀಂದರ್ ಸಿಂಗ್ ಅವರಿಂದ ಅಮಿತ್ ಶಾ ಭೇಟಿ

| Updated By: ಸುಷ್ಮಾ ಚಕ್ರೆ

Updated on: Oct 27, 2021 | 8:32 PM

ನಾಳೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ನನ್ನೊಂದಿಗೆ 25-30 ಜನರು ಕೂಡ ಬರಲಿದ್ದಾರೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

Amarinder Singh: ಕೃಷಿ ತಜ್ಞರ ಜೊತೆ ನಾಳೆ ಅಮರೀಂದರ್ ಸಿಂಗ್ ಅವರಿಂದ ಅಮಿತ್ ಶಾ ಭೇಟಿ
ಅಮರೀಂದರ್ ಸಿಂಗ್- ಅಮಿತ್ ಶಾ
Follow us on

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಗೆ ಸಂಭವನೀಯ ಪರಿಹಾರಗಳನ್ನು ಚರ್ಚಿಸಲು ನಾಳೆ (ಗುರುವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಕೆಲವು ಕೃಷಿ ತಜ್ಞರೊಂದಿಗೆ ನಾಳೆ ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

“ನಾಳೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ನನ್ನೊಂದಿಗೆ 25-30 ಜನರು ಕೂಡ ಬರಲಿದ್ದಾರೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ. ನಾನು ಪಂಜಾಬ್‌ನ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಕೃಷಿಕನಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ನಾಳೆ ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದರು. ಸಿಎಂ ಸ್ಥಾನದಿಂದ ಕೆಳಗಿಳದ ನಂತರ ಇದು ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಅವರ ಮೂರನೇ ಭೇಟಿಯಾಗಿದೆ.

ನಾನು ಈ ವಿಚಾರವಾಗಿ ಯಾವುದೇ ರೈತ ಮುಖಂಡರನ್ನು ಭೇಟಿ ಮಾಡಿಲ್ಲ ಎಂದು ಅಮರೀಂದರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಹಾಗೇ, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಿಎಂ ಅಮರೀಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಇಂದು ಘೋಷಿಸಿದ್ದಾರೆ. ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತೂ ಕ್ಯಾ. ಅಮರೀಂದರ್ ಸಿಂಗ್ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸುಳಿವು ನೀಡಿದ್ದಾರೆ.

ನಾನು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ. ನನ್ನ ವಕೀಲರು ಈ ಕುರಿತಂತೆ ಕೆಲಸದಲ್ಲಿ ತೊಡಗಿದ್ದಾರೆ. ಸಮಯ ಬಂದಾಗ 117 ವಿಧಾನಸಭಾ ಕ್ಷೇತ್ರಗಳಲ್ಲಿ ನಾವು ಸ್ಪರ್ಧಿಸುತ್ತೇವೆ. ಸೀಟು ಹಂಚಿಕೆ ಅಥವಾ ನಾವೇ ಸ್ವಂತವಾಗಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸುವುದೇ ಎಂದು ನೋಡಬೇಕು ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Amit Shah: ಗಡಿ ನಿರ್ಣಯ, ಚುನಾವಣೆ ಬಳಿಕ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಾಸ್; ಅಮಿತ್ ಶಾ ಭರವಸೆ

Amit Shah: ಶ್ರೀನಗರ- ಶಾರ್ಜಾ ನೇರ ವಿಮಾನ ಸೇವೆಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್ ಶಾ

Published On - 8:31 pm, Wed, 27 October 21