Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು

ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ.

Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು
ಅಮರನಾಥ ಯಾತ್ರೆ ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 11, 2022 | 4:23 PM

ಕೊವಿಡ್ 19 ಸಾಂಕ್ರಾಮಿಕದ ಕಾರಣ ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಕಳೆದ ಎರಡು ವರ್ಷಗಳಿಂದಲೂ ನಿರ್ಬಂಧ ವಿಧಿಸಲಾಗಿತ್ತು. ಕಳೆದ ವರ್ಷ ಎರಡು ಬಾರಿ ಮುಂದೂಡಿ ಮತ್ತೆ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು. ಆದರೆ ಈ ವರ್ಷ ಜೂನ್​ 30ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಆಗಸ್ಟ್​ 11ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್​ನಿಂದ ಯಾತ್ರೆ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಅದರ ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದ (ಏಪ್ರಿಲ್​ 11) ಶುರು ಮಾಡಲಾಗಿದೆ ಎಂದು ಅಮರನಾಥ ದೇವಾಲಯ ಮಂಡಳಿ ಸಿಇಒ ನಿತೀಶ್ವರ್ ಕುಮಾರ್ ತಿಳಿಸಿದ್ದಾರೆ. ಜೂನ್​ 30ರಿಂದ ಪ್ರಾರಂಭವಾಗಿ ಆಗಸ್ಟ್​ 11ವರೆಗೆ ಅಂದರೆ 43 ದಿನಗಳ ಕಾಲ ನಡೆಯುವ ಈ ಸುದೀರ್ಘ ಯಾತ್ರೆಗಾಗಿ ಭಕ್ತರು ಅಮರನಾಥ ದೇಗುಲದ ವೆಬ್​ಸೈಟ್​ನಲ್ಲಿ ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಯಲ್ಲಿ ಐದು ವಿಧಾನಗಳಿದ್ದು, ಅವು ಹೀಗಿವೆ: 1) ಮುಂಗಡ ಕಾಯ್ದಿರಿಸುವಿಕೆ 2)ಆನ್​ಲೈನ್​ ಮೂಲಕ ರಿಜಿಸ್ಟ್ರೇಶನ್​ 3)ಗ್ರೂಪ್​ ರಿಜಿಸ್ಟ್ರೇಶನ್​ 4)ಎನ್​ಆರ್​ಐ ನೋಂದಣಿ (ಭಾರತದ ನಿವಾಸಿಗಳು ಅಲ್ಲದವರಿಗೆ ನೋಂದಣಿ ಅವಕಾಶ) 5)ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ. 

13 ವರ್ಷ ಮೇಲ್ಪಟ್ಟು, 75 ವರ್ಷದ ಒಳಗಿನವರು ಯಾತ್ರೆಗಾಗಿ ವೆಬ್​ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದ್ದು ಅದಕ್ಕಾಗಿ ಮೊದಲು  ಮೊದಲು ಶ್ರೀ ಅಮರನಾಥಜಿ ದೇಗುಲ ಮಂಡಳಿ ವೆಬ್​ಸೈಟ್​ (SASB)ಗೆ ಭೇಟಿ ನೀಡಬೇಕು. ಅಲ್ಲಿ Registration for Amarnath Yatra 2022 ಎಂಬ ಲಿಂಕ್ ಕಾಣಿಸುತ್ತದೆ, ಅಲ್ಲಿ ಕ್ಲಿಕ್ ಮಾಡಿ ವಿವರಗಳನ್ನು ತುಂಬಬೇಕು. ವೈದ್ಯಕೀಯ ಪ್ರಮಾಣ ಪತ್ರ, ನಾಲ್ಕು ಪಾಸ್​ಪೋರ್ಟ್ ಅಳತೆಯ ಫೋಟೋಗಳೂ ಬೇಕಾಗುತ್ತವೆ. ಇನ್ನು ಗ್ರೂಪ್​ ನೋಂದಣಿ ಮಾಡಿಕೊಳ್ಳುವವರ ಗುಂಪಿನಲ್ಲಿ 5ಕ್ಕಿಂತ ಹೆಚ್ಚು ಮತ್ತು 50ಕ್ಕಿಂತಲೂ ಕಡಿಮೆ ಜನರು ಇರಬೇಕು.

ಇನ್ನು ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ. ಹಾಗೇ ಕುದುರೆಗಳ ಮೂಲಕ ಯಾತ್ರಿಗಳನ್ನು ಬೆಟ್ಟ ಹತ್ತಿಸುವವರಿಗೆ ವಿಮಾ ಅವಧಿಯನ್ನು ಒಂದು ವರ್ಷಕ್ಕೆ ಏರಿಸಲಾಗಿದೆ. ಅಷ್ಟೇ ಅಲ್ಲ, ಇನ್ಶೂರೆನ್ಸ್ ಹಣವನ್ನು 3 ಲಕ್ಷ ರೂ.ದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ