ಅಮರನಾಥ ಯಾತ್ರೆಯು (Amarnath Yatra) ದೇಶದ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಸಮುದ್ರ ಮಟ್ಟದಿಂದ 13,600 ಅಡಿ ಎತ್ತರದಲ್ಲಿರುವ ಅಮರನಾಥ ಕ್ಷೇತ್ರಕ್ಕೆ ಈ ವರ್ಷ ಜುಲೈ 1 ರಿಂದ ಆಗಸ್ಟ್ 31 ರವರೆಗೆ ಯಾತ್ರೆ ನಡೆಯಲಿದೆ. ಒಟ್ಟು 62 ದಿನಗಳ ಕಾಲ ನಡೆಯಲಿರುವ ಈ ಅಮರನಾಥ ಯಾತ್ರೆಯ ನೋಂದಣಿ ಪ್ರಕ್ರಿಯೆ ಏಪ್ರಿಲ್ 17ರಂದೇ ಆರಂಭಗೊಂಡಿತ್ತು. ಪರಮಾತ್ಮನಾದ ಶಿವನು ನೆಲೆಸಿರುವ ಈ ಅಮರನಾಥ ದೇಗುಲದ ಬಗ್ಗೆ ಅನೇಕ ಕುತೂಹಲಕಾರಿ ವಿಷಯಗಳಿವೆ. ಅವುಗಳನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: Amarnath Yatra: ಅಮರನಾಥ ಯಾತ್ರೆಗೆ ಹೈ ಅಲರ್ಟ್; ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಿತು ಉನ್ನತ ಮಟ್ಟದ ಸಭೆ
ಕಳೆದ ವರ್ಷ ಅಮರನಾಥ ಯಾತ್ರೆ ವೇಳೆ ಮೇಘಸ್ಫೋಟ ಹಾಗೂ ಭೂಕುಸಿತ ಸಂಭವಿಸಿ 15 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಈ ವರ್ಷ ಯಾತ್ರೆಗೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾತ್ರೆಗೆ ಭಯೋತ್ಪಾದಕ ದಾಳಿ ಭೀತಿಯೂ ಇದ್ದು, ಕೇಂದ್ರ ಸರ್ಕಾರ ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು, ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ