Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

ಭಾರತದ ಪ್ರಸಿದ್ಧ ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಅಮರನಾಥ ಯಾತ್ರೆಗೆ ದಿನಗಣನೆ ಶುರುವಾಗಿದೆ. ಅಮರನಾಥ ಯಾತ್ರೆಯ ಪ್ರದೇಶದಲ್ಲಿ ಭಯೋತ್ಪಾದಕ ದಾಳಿಗಳ ನಂತರ ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಅಧಿಕಾರಿಗಳು ಇಂದು ಪರಿಶೀಲಿಸಿದ್ದಾರೆ.

Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ
ಅಮರನಾಥ ಯಾತ್ರೆ
Follow us
|

Updated on: Jun 13, 2024 | 9:43 PM

ನವದೆಹಲಿ: ವಾರ್ಷಿಕವಾಗಿ ನಡೆಯುವ ಅಮರನಾಥ ಯಾತ್ರೆಯು (Amarnath Yatra) ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿದ್ದು, ಇತ್ತೀಚಿನ ಭಯೋತ್ಪಾದಕ ದಾಳಿಗಳಿಗೆ (Terrorists Attack) ಪ್ರತಿಕ್ರಿಯೆಯಾಗಿ ಅಧಿಕಾರಿಗಳು ಇಂದು (ಗುರುವಾರ) ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಭಾರತೀಯ ರೈಲ್ವೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶೈಲೇಂದರ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಸರ್ಕಾರಿ ರೈಲ್ವೆ ಪೊಲೀಸ್, ಜಮ್ಮು ಮತ್ತು ಇತರ ಭದ್ರತಾ ಏಜೆನ್ಸಿಗಳ ಅಧಿಕಾರಿಗಳು ಭಾಗವಹಿಸಿದ್ದರು.

ಕಳೆದ ನಾಲ್ಕು ದಿನಗಳಲ್ಲಿ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಸತತ 4 ಭಯೋತ್ಪಾದಕ ದಾಳಿಗಳ ನಂತರ ಜಮ್ಮುವಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಈ ದಾಳಿಯಲ್ಲಿ 9 ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಜವಾನ ಸಾವನ್ನಪ್ಪಿದ್ದರು. 7 ಭದ್ರತಾ ಸಿಬ್ಬಂದಿ ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ಇದಲ್ಲದೆ, ಅಮರನಾಥ ಯಾತ್ರೆಯ ಸಮಯದಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರೈಲ್ವೆ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುವ ಬಗ್ಗೆ ಈ ಸಭೆಯು ಗಮನಹರಿಸಿದೆ ಎಂಬುದು ಗಮನಿಸಬೇಕಾದ ಸಂಗತಿ. ದಕ್ಷಿಣ ಕಾಶ್ಮೀರ ಹಿಮಾಲಯದ ಅಮರನಾಥದ 3,880 ಮೀಟರ್ ಎತ್ತರದ ಪವಿತ್ರ ಗುಹಾ ದೇಗುಲಕ್ಕೆ 52 ದಿನಗಳ ತೀರ್ಥಯಾತ್ರೆ ಜೂನ್ 29ರಂದು ಪ್ರಾರಂಭವಾಗುತ್ತದೆ.

ಇದನ್ನೂ ಓದಿ: PM Modi: ಇಟಲಿಯ ಜಿ7 ಶೃಂಗಸಭೆಗೆ ತೆರಳಿದ ನರೇಂದ್ರ ಮೋದಿ; 3ನೇ ಅವಧಿಯ ಮೊದಲ ವಿದೇಶ ಪ್ರವಾಸ

ಮೊದಲ ಬ್ಯಾಚ್ ಯಾತ್ರಿಕರು ಜಮ್ಮು ಬೇಸ್ ಕ್ಯಾಂಪ್‌ನಿಂದ ಕಣಿವೆಗೆ ಒಂದು ದಿನ ಮುಂಚಿತವಾಗಿ ಹೊರಡುತ್ತಾರೆ. ಜಮ್ಮು ರೈಲು ನಿಲ್ದಾಣದಲ್ಲಿ ಜಂಟಿ ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ