AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ: 39 ಅಮರನಾಥ ಯಾತ್ರಿಕರಿಗೆ ಗಾಯ, ಪವಾಡದಂತೆ ಪಾರಾದ ಜನ

ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ(Accident) ಸಂಭವಿಸಿದ್ದು, ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮನೆಗೆ ಉರುಳಿದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ.ಪವಿತ್ರ ಅಮರನಾಥ ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರ್ಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ: 39 ಅಮರನಾಥ ಯಾತ್ರಿಕರಿಗೆ ಗಾಯ, ಪವಾಡದಂತೆ ಪಾರಾದ ಜನ
ಅಪಘಾತ
ನಯನಾ ರಾಜೀವ್
|

Updated on: Jul 28, 2026 | 11:03 AM

Share

ಶ್ರೀನಗರ,ಜುಲೈ 28: ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ(Accident) ಸಂಭವಿಸಿದ್ದು, ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮನೆಗೆ ಉರುಳಿದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ.ಪವಿತ್ರ ಅಮರನಾಥ ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರ್ಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಬಸ್ ಹತ್ತಿರದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ಭಾರಿ ಪ್ರಾಣಾಪಾಯ ಹಾಗೂ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಅಪಘಾತದ ಸಮಯದಲ್ಲಿ ಮನೆಯೊಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಘಟನೆ ತಿಳಿದ ತಕ್ಷಣವೇ ಸ್ಥಳೀಯ ನಿವಾಸಿಗಳು, ಜಮ್ಮು-ಕಾಶ್ಮೀರ ಪೊಲೀಸರು, ಐಟಿಬಿಪಿ , ಸಿಆರ್‌ಪಿಎಫ್ ಹಾಗೂ ಭಾರತೀಯ ಸೇನೆಯ ಪಡೆಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳು ಹಾಗೂ ‘ಸ್ಕಿಮ್ಸ್’ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಯಾತ್ರಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಅವರು ಗಂಡೇರ್‌ಬಾಲ್ ಜಿಲ್ಲಾಧಿಕಾರಿ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿ ಗಾಯಾಳುಗಳ ಸ್ಥಿತಿಗತಿಯನ್ನು ವಿಚಾರಿಸಿದ್ದಾರೆ.

ಪೋಸ್ಟ್​

ಗಾಯಗೊಂಡ ಯಾತ್ರಿಕರಿಗೆ ಅಗತ್ಯವಿರುವ ಎಲ್ಲಾ ಸಹಾಯ ಮತ್ತು ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಲು ಸೂಚಿಸಿದ್ದೇನೆ. ಗಾಯಗೊಂಡ ಭಕ್ತರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶಿವನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿನ್ಹಾ ತಿಳಿಸಿದ್ದಾರೆ. ಜುಲೈ 2 ರಂದು ಪ್ರಾರಂಭವಾದ ಈ ವರ್ಷದ ವಾರ್ಷಿಕ ಅಮರನಾಥ ಯಾತ್ರೆಯಲ್ಲಿ ಇದುವರೆಗೆ 4.15 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಹಿಮಲಿಂಗದ ದರ್ಶನ ಪಡೆದಿದ್ದಾರೆ. 57 ದಿನಗಳ ಕಾಲ ನಡೆಯುವ ಈ ವಾರ್ಷಿಕ ತೀರ್ಥಯಾತ್ರೆಯು ಆಗಸ್ಟ್ 28 ರಂದು ಮುಕ್ತಾಯಗೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್