Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on: Jun 21, 2021 | 5:39 PM

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ