ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಚಾತುರ್ಯವೊಂದು ನಡೆದಿದೆ. ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್‌ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಿಲ್ಲ. ಇದರಿಂದಾಗಿ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ.
ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿನ ಮಹಿಳೆಯೊಬ್ಬರು ಯಾವುದೋ ಸಮಸ್ಯೆಯಿಂದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದರು. ಮಹಿಳೆಯ ಆತ್ಮಹತ್ಯಾ ಪ್ರಯತ್ನದ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿದುಬಂದಿತು. ಅವರು ತಕ್ಷಣ ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರು. ಆಸ್ಪತ್ರೆ ತಲುಪಿದಾಗ ಆ್ಯಂಬುಲೆನ್ಸ್ ಬಾಗಿಲು ತೆರೆದಾಗ ಅದು ತೆರೆಯಲಿಲ್ಲ. ಆ್ಯಂಬುಲೆನ್ಸ್‌ನ ಬಾಗಿಲು ಸಿಕ್ಕಿಹಾಕಿಕೊಂಡಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ: ಕೇಸ್ ಬುಕ್
ಆ್ಯಂಬುಲೆನ್ಸ್ ಬಾಗಿಲು ಓಪನ್ ಮಾಡಲು 15 ನಿಮಿಷ ಪ್ರಯತ್ನಪಟ್ಟರೂ ಸಾಧ್ಯವಾಗದೆ ಇದ್ದಾಗ ಕಿಟಕಿ ಒಡೆದು ಒಳಗಿದ್ದ ಆ ಮಹಿಳೆಯನ್ನು ಹೊರಗೆಳೆದರು. ಅಷ್ಟರಲ್ಲಿ ಆ ಮಹಿಳೆ ಸಾವನ್ನಪ್ಪಿದ್ದರು. ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಕೂಡ ಇರಲಿಲ್ಲ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗೆ ಆಸ್ಪತ್ರೆಗೆ ಹೋಗುವ ದಾರಿಯೂ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಇದರಿಂದಾಗಿ, ಆ ಮಹಿಳೆಗೆ ಚಿಕಿತ್ಸೆ ನೀಡಲು ಹೆಚ್ಚಿನ ವಿಳಂಬವಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ