AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮಗಳ ಚರ್ಚೆ ಮುಂದುವರಿಕೆ: ಮೋದಿ ಜೊತೆಗಿನ ಮಾತುಕತೆಯಲ್ಲಿ ಬೈಡೆನ್ ಪುನರುಚ್ಚಾರ

ಅಮೆರಿಕ ಮತ್ತು ಭಾರತ ಸರ್ಕಾರಗಳು ರಷ್ಯಾ-ಉಕ್ರೇನ್ ಸಂಘರ್ಷದ ಪರಿಣಾಮದ ಬಗ್ಗೆ ನಿರಂತರ ಸಮಾಲೋಚನೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು.

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮಗಳ ಚರ್ಚೆ ಮುಂದುವರಿಕೆ: ಮೋದಿ ಜೊತೆಗಿನ ಮಾತುಕತೆಯಲ್ಲಿ ಬೈಡೆನ್ ಪುನರುಚ್ಚಾರ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 12, 2022 | 6:53 AM

Share

ದೆಹಲಿ: ಅಮೆರಿಕ ಮತ್ತು ಭಾರತ ಸರ್ಕಾರಗಳು ರಷ್ಯಾ-ಉಕ್ರೇನ್ ಸಂಘರ್ಷದ ಪರಿಣಾಮದ ಬಗ್ಗೆ ನಿರಂತರ ಸಮಾಲೋಚನೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಹಲವು ವಿಚಾರಗಳನ್ನು ಬೈಡೆನ್ ಚರ್ಚಿಸಿದರು. ಈ ವೇಳೆ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ನಡುವೆ ನೇರ ಮಾತುಕತೆ ನಡೆಯುವುದರಿಂದ ಮಾತ್ರ ಬಿಕ್ಕಟ್ಟು ಶಮನಗೊಳ್ಳಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಉಕ್ರೇನ್​ನ ಬುಚಾ ನಗರದಲ್ಲಿ ರಷ್ಯಾ ಪಡೆಗಳು ನಾಗರಿಕರ ಮೇಲೆ ನಡೆಸಿರುವ ದೌರ್ಜನ್ಯವನ್ನು ‘ಆತಂಕಕಾರಿ’ ಎಂದು ಹೇಳಿದ ನರೇಂದ್ರ ಮೋದಿ, ‘ಈ ಘಟನೆ ಬೆಳಕಿಗೆ ಬಂತ ತಕ್ಷಣವೇ ಭಾರತ ಖಂಡಿಸಿತ್ತು. ಈ ಬಗ್ಗೆ ತನಿಖೆ ನಡೆಯಬೇಕೆಂದು ಒತ್ತಾಯಿಸಿತ್ತು’ ಎಂದು ನರೇಂದ್ರ ಮೋದಿ ಹೇಳಿದರು. ರಷ್ಯಾ ಪರವಾಗಿದೆ ಭಾರತ ಎನ್ನುವ ಅಮೆರಿಕದ ಆರೋಪದ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ರಷ್ಯಾ ಮತ್ತು ಉಕ್ರೇನ್ ನಿಯೋಗಗಳ ನಡುವೆ ನಡೆಯುತ್ತಿರುವ ಮಾತುಕತೆಯು ಸಂಘರ್ಷ ಅಂತ್ಯಗೊಳಿಸಬಹುದು ಎಂದು ಮೋದಿ ಆಶಯ ವ್ಯಕ್ತಪಡಿಸಿದರು. ಉಕ್ರೇನ್​ನಲ್ಲಿ ಭಾರತದ ವಿದ್ಯಾರ್ಥಿ ಮೃತಪಟ್ಟ ವಿಚಾರ ಪ್ರಸ್ತಾಪಿಸಿದ ಮೋದಿ, ಸಂಘರ್ಷದಲ್ಲಿ ಸಿಲುಕಿದ್ದ 20,000 ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕರೆತರಲು ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಈ ಸಂದರ್ಭದಲ್ಲಿ ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೆ ಎಂದು ಮೋದಿ ಹೇಳಿದರು.

ಉಕ್ರೇನ್​ಗೆ ಭಾರತ ಒದಗಿಸುತ್ತಿರುವ ಮಾನವೀಯ ನೆರವನ್ನು ಬೈಡೆನ್ ಶ್ಲಾಘಿಸಿದರು. ‘ಎರಡೂ ದೇಶಗಳ ಹಲವು ಕುಟುಂಬಗಳು ಕೌಟುಂಬಿಕವಾಗಿ ಬೆಸೆದುಕೊಂಡಿವೆ. ವಿಶ್ವಾಸ ಮತ್ತು ಮೌಲ್ಯಗಳು ಭಾರತ ಮತ್ತು ಅಮೆರಿಕದ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿವೆ’ ಎಂದು ಬೈಡೆನ್ ಹೇಳಿದರು.

ಉಕ್ರೇನ್ ಮೇಲಿನ ರಷ್ಯಾ ದಾಳಿಯ ವಿಚಾರದಲ್ಲಿ ಭಾರತ ತಳೆದಿರುವ ನಿಲುವಿನ ಬಗ್ಗೆ ಅಮೆರಿಕ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದೆ. ರಷ್ಯಾದಿಂದ ಕಡಿಮೆ ದರದಲ್ಲಿ ಇಂದನ ಖರೀದಿಸುವ ಭಾರತದ ನಿರ್ಧಾರದ ಬಗ್ಗೆಯೂ ಅಮೆರಿಕ ಕೆಂಗಣ್ಣು ಬೀರಿದೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಾಯಕರ ನೇರ ಮಾತುಕತೆ ಮಹತ್ವ ಪಡೆದುಕೊಂಡಿತ್ತು. ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶಗಳಾಗಿರುವ ಭಾರತ ಮತ್ತು ಅಮೆರಿಕ ಸಹಜವಾಗಿಯೇ ಶಾಂತಿ ಸ್ಥಾಪನೆ ವಿಚಾರದಲ್ಲಿ ಪಾಲುದಾರ ದೇಶಗಳಾಗಿವೆ’ ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: ಮೋದಿ- ಬೈಡನ್ ವರ್ಚುವಲ್ ಸಭೆ: ಉಕ್ರೇನ್ ಜನರಿಗೆ ಭಾರತ ನೀಡಿದ ಮಾನವೀಯ ಬೆಂಬಲವನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ

ಇದನ್ನೂ ಓದಿ: ಚೀನಾದ ದೋಸ್ತ್, ಅಮೆರಿಕಾಗೂ ಬೇಕು ಪಾಕ್​ನ ಭಾವಿ ಪ್ರಧಾನಿ ಷರೀಫ್​ ಖಾಂದಾನ್​ನ ಶೋಕಿಲಾಲ ಶೆಹಬಾಜ್

Published On - 6:51 am, Tue, 12 April 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!