‘ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ’

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ […]

ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ
ಸಾಧು ಶ್ರೀನಾಥ್​

Updated on: Feb 26, 2020 | 11:27 AM

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ.

ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿಲ್ಲ. ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಚರ್ಚೆ ಮಾಡಿದ್ದೇವೆ.

ಕಾಶ್ಮೀರ ವಿಚಾರದಲ್ಲಿ ಅಗತ್ಯವಿದ್ದರೆ ಮಧ್ಯಸ್ಥಿಕೆ ವಹಿಸುತ್ತೇವೆ. ಪ್ರಧಾನಿ ಮೋದಿಯವರು ಧಾರ್ಮಿಕ ಸ್ವಾತಂತ್ರ್ಯದ ಪರವಾಗಿದ್ದಾರೆ. ಭಾರತದಲ್ಲಿ ಸುಮಾರು 20 ಕೋಟಿ ಮುಸಲ್ಮಾನರಿದ್ದಾರೆ. ಮುಸ್ಲಿಮರ ಪರವಾಗಿ ಇದ್ದೇವೆಂದು ಮೋದಿ ಹೇಳಿದ್ದಾರೆ. ಆದರೆ ನಮ್ಮ ಎರಡು ದಿನದ ಪ್ರವಾಸದಲ್ಲಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Published On - 6:38 pm, Tue, 25 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us