ಗಡಿ ವಿವಾದದ ನಡುವೆ ಭಾರತ ತಿರುಗೇಟು; ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್​

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಗಡಿ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಭಾನುವಾರ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾರತದ ಹೈಕಮಿಷನರ್​ ಪ್ರಣಯ್ ವರ್ಮ ಅವರಿಗೆ ಸಮನ್ಸ್​ ನೀಡಿತ್ತು. ಬಾಂಗ್ಲಾದ ಈ ಕ್ರಮಕ್ಕೆ ಭಾರತ ಇಂದು ತಿರುಗೇಟು ನೀಡಿದ್ದು, ಭಾರತ ಕೂಡ ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದೆ. ನವದೆಹಲಿ ಮತ್ತು ಢಾಕಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಚರ್ಚಿಸಲು ಭಾರತೀಯ ವಿದೇಶಾಂಗ ಸಚಿವಾಲಯವು ಇಂದು ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಬರಲು ಸೂಚಿಸಿದೆ.

ಗಡಿ ವಿವಾದದ ನಡುವೆ ಭಾರತ ತಿರುಗೇಟು; ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್​
India Bangladesh Border
Follow us
ಸುಷ್ಮಾ ಚಕ್ರೆ
|

Updated on: Jan 13, 2025 | 5:57 PM

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಚರ್ಚಿಸಲು ಭಾರತೀಯ ವಿದೇಶಾಂಗ ಸಚಿವಾಲಯವು ಇಂದು ಬಾಂಗ್ಲಾದೇಶದ ಉಪ ಹೈಕಮಿಷನರ್ ನುರಾಲ್ ಇಸ್ಲಾಂ ಅವರನ್ನು ಕರೆಸಿದೆ. ಗಡಿ ಉದ್ವಿಗ್ನತೆ ಕುರಿತು ಬಾಂಗ್ಲಾದೇಶ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್​ ನೀಡಿದ ನಂತರ ಭಾರತ ಕೂಡ ಬಾಂಗ್ಲಾ ರಾಯಭಾರಿಗೆ ಸಮನ್ಸ್​ ನೀಡಿದೆ. ಈ ಮೂಲಕ ಬಾಂಗ್ಲಾಕ್ಕೆ ಭಾರತ ತಿರುಗೇಟು ನೀಡಿದೆ. ಇದಕ್ಕೂ ಮೊದಲು ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಭಾರತ-ಬಾಂಗ್ಲಾ ಗಡಿಯಲ್ಲಿ 5 ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಬಾಂಗ್ಲಾದೇಶ ಆರೋಪಿಸಿತ್ತು.

ಬಾಂಗ್ಲಾದೇಶದ ಉಪ ಹೈಕಮಿಷನರ್ ನುರಾಲ್ ಇಸ್ಲಾಂ ಭಾರತದ ವಿದೇಶಾಂಗ ಸಚಿವಾಲಯದಿಂದ ಸಮನ್ಸ್ ಪಡೆದ ನಂತರ ಕಾರಿನಲ್ಲಿ ಹೋಗುತ್ತಿರುವ ವಿಡಿಯೋ ಲಭ್ಯವಾಗಿದೆ. ಗಡಿ ಭಾಗದಲ್ಲಿ ಭಾರತ 5 ಸ್ಥಳಗಳಲ್ಲಿ ಬೇಲಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಬಾಂಗ್ಲಾದೇಶ ಆರೋಪಿಸಿತ್ತು. ಆದರೆ, ಬಿಎಸ್​ಎಫ್ ಮತ್ತು ಬಾಂಗ್ಲಾದೇಶದ ಬಿಜಿಬಿ ಈ ಬಗ್ಗೆ ಸಂವಹನ ನಡೆಸುತ್ತಿವೆ. ಗಡಿಯಲ್ಲಿ ಅಪರಾಧಗಳನ್ನು ತಡೆಯಲು ಸಹಕಾರಿ ವಿಧಾನವನ್ನು ಅನುಸರಿಸಲಾಗುತ್ತದೆ ಎಂದು ಭಾರತೀಯ ರಾಯಭಾರಿ ಪ್ರಣಯ್ ವರ್ಮ ಬಾಂಗ್ಲಾಕ್ಕೆ ಹೇಳಿದ್ದರು.

ಇದನ್ನೂ ಓದಿ: ಶೇಖ್ ಹಸೀನಾಗೆ ಮತ್ತೊಂದು ಶಾಕ್; ಬಾಂಗ್ಲಾದೇಶದಿಂದ ಮಾಜಿ ಪ್ರಧಾನಿ ವಿರುದ್ಧ 2ನೇ ಬಂಧನ ವಾರಂಟ್ ಜಾರಿ

4,156 ಕಿಲೋಮೀಟರ್ ಉದ್ದದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 5 ಗೊತ್ತುಪಡಿಸಿದ ಸ್ಥಳಗಳಲ್ಲಿ ಭಾರತ ಬೇಲಿಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂಬ ಬಾಂಗ್ಲಾದೇಶದ ಆರೋಪದ ನಂತರ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಭಾನುವಾರದಂದು ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರನ್ನು ಕರೆಸಿತ್ತು. ಈ ಕ್ರಮಗಳು ಎರಡೂ ದೇಶಗಳ ಗಡಿ ಚಟುವಟಿಕೆಗಳನ್ನು ನಿಯಂತ್ರಿಸುವ ದ್ವಿಪಕ್ಷೀಯ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಪ್ರಣಯ್ ವರ್ಮಾ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆ ಸುಮಾರಿಗೆ ಢಾಕಾದಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಗೆ ತೆರಳಿದರು. ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಶಿಮ್ ಉದ್ದೀನ್ ಅವರೊಂದಿಗಿನ ಅವರ ಸಭೆ ಸುಮಾರು 45 ನಿಮಿಷಗಳ ಕಾಲ ನಡೆಯಿತು ಎಂದು ಸರ್ಕಾರಿ ಸ್ವಾಮ್ಯದ ಬಾಂಗ್ಲಾದೇಶ ಸಂಗ್ಬಾದ್ ಸಂಗ್ಸ್ಥಾ (ಬಿಎಸ್ಎಸ್) ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ವೀಸಾ ವಿಸ್ತರಣೆ ಬೆನ್ನಲ್ಲೇ ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ಈ ಸಭೆಯ ನಂತರ, ಪ್ರಣಯ್ ವರ್ಮಾ ಮಾಧ್ಯಮಗಳಿಗೆ ಮಾತನಾಡಿ, ಭದ್ರತಾ ಕಾರಣಗಳಿಗಾಗಿ ಢಾಕಾ ಮತ್ತು ನವದೆಹಲಿ ಎರಡೂ ಗಡಿ ಬೇಲಿ ಹಾಕುವ ಬಗ್ಗೆ ಒಪ್ಪಂದಗಳನ್ನು ಮಾಡಿಕೊಂಡಿವೆ ಎಂದು ಹೇಳಿದರು. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಬಾಂಗ್ಲಾದೇಶ ಗಡಿ ಕಾವಲು ಪಡೆ (ಬಿಜಿಬಿ) ಈ ವಿಷಯದ ಬಗ್ಗೆ ನಿಯಮಿತವಾಗಿ ಸಂವಹನ ನಡೆಸುತ್ತಿವೆ. ಗಡಿ ಸಂಬಂಧಿತ ಅಪರಾಧಗಳನ್ನು ಪರಿಹರಿಸಲು ಸಹಯೋಗದ ವಿಧಾನವನ್ನು ಉತ್ತೇಜಿಸುವ ಮೂಲಕ ಈ ಒಪ್ಪಂದಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗುವುದು ಎಂದು ವರ್ಮಾ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಶಿವಕುಮಾರ್ ಸ್ಥಿತಿ ನೋಡಿದರೆ ನನ್ನಲ್ಲಿ ಕರುಣೆ ಹುಟ್ಟುತ್ತದೆ: ಆರ್ ಅಶೋಕ
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘
ಸುರ್ಜೆವಾಲಾ ಭೇಟಿ ನಾಯಕರ ಆಂತರಿಕ ಕಾದಾಟವನ್ನು ತಹಬದಿಗೆ ತರುವುದೆ?‘
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ