Ayodhya Ram Mandir: ರಾಮಲಲ್ಲಾನ ದರ್ಶನಕ್ಕೆ ಭಕ್ತರ ನೂಕುನುಗ್ಗಲು, ಬಾಗಿಲು ಮುಚ್ಚಿದ ರಾಮ ಮಂದಿರ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಕಾರಣ, ನೂಕುನುಗ್ಗಲು ಉಂಟಾಗಿದ್ದು, ಮಂದಿರದ ಬಾಗಿಲನ್ನು ಮುಚ್ಚಲಾಗಿದೆ.

Ayodhya Ram Mandir: ರಾಮಲಲ್ಲಾನ ದರ್ಶನಕ್ಕೆ ಭಕ್ತರ ನೂಕುನುಗ್ಗಲು, ಬಾಗಿಲು ಮುಚ್ಚಿದ ರಾಮ ಮಂದಿರ
ರಾಮ ಭಕ್ತರು Image Credit source: India TV
Follow us
ನಯನಾ ರಾಜೀವ್
|

Updated on:Jan 23, 2024 | 11:56 AM

ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಕಾರಣ, ನೂಕುನುಗ್ಗಲು ಉಂಟಾಗಿದ್ದು, ಮಂದಿರದ ಬಾಗಿಲನ್ನು ಮುಚ್ಚಲಾಗಿದೆ.  ಪ್ರಧಾನಿ ನರೇಂದ್ರ ಮೋದಿ, ಭಾರತದ ಪ್ರಮುಖ ರಾಜಕಾರಣಿಗಳು, ಕ್ರೀಡಾಪಟುಗಳು, ಉದ್ಯಮಿಗಳು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಜನವರಿ 22 ರಂದು ಆಯೋಜಿಸಲಾದ ಭವ್ಯವಾದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರುವ ಕಾರಣ ರಾಮ ಮಂದಿರದ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕೊರೆಯುವ ಚಳಿಯಲ್ಲೂ ತನ್ನ ದೇವರನ್ನು ನೋಡಬೇಕೆಂಬ ತವಕ ಅವರನ್ನು ಅಲ್ಲಿಗೆ ತಂದು ನಿಲ್ಲಿಸಿತ್ತು, ರಾತ್ರಿ ವೇಳೆಯೂ ದೇಗುಲದ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಜನರು ನಿರಂತರವಾಗಿ ಜೈ ಶ್ರೀ ರಾಮ್ ಮತ್ತು ಸಿಯಾವರ ರಾಮ್ ಚಂದ್ರ ಕೀ ಜೈ ಎಂದು ಘೋಷಣೆಗಳನ್ನು ಕೇಳಿದರು.

ಭಕ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ರಾಮಮಂದಿರ ಉದ್ಘಾಟನೆಯ ನಂತರ ಜನರ ಮನದಲ್ಲಿ ಭಕ್ತಿಯ ಮಹಾಪೂರವೇ ಹರಿದಿದೆ. ರಾಮ ಮಂದಿರದ ಮುಖ್ಯ ದ್ವಾರ ತೆರೆಯುತ್ತಿದ್ದಂತೆಯೇ ಭಕ್ತರ ದಂಡು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಿದ್ದು, ರಾಮಲಲ್ಲಾ ದರ್ಶನ ಹಾಗೂ ದೇಗುಲದಲ್ಲಿ ಪೂಜೆ ಸಲ್ಲಿಸಲು ಉತ್ಸುಕರಾಗಿದ್ದರು.

ಮತ್ತಷ್ಟು ಓದಿ: ಅಯೋಧ್ಯೆ: ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಆಗಮನ, ನೂಕುನುಗ್ಗಲು

ದೇವಾಲಯವು ಭಕ್ತರಿಗೆ ಬೆಳಗ್ಗೆ 7.00 ಕ್ಕೆ ಬಾಗಿಲು ತೆರೆಯುತ್ತದೆ ಮತ್ತು 11.30 ರವರೆಗೆ ಪ್ರವೇಶಿಸಬಹುದಾಗಿದೆ. ಮಧ್ಯಾಹ್ನ 2 ರಿಂದ 7ರವರೆಗೆ ಪ್ರವೇಶಕ್ಕೆ ಅವಕಾಶವಿರಲಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ದೇವಾಲಯದ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ, ಶ್ರೀರಾಮನಿಗೆ ಪ್ರತಿ ಗಂಟೆಗೆ ಹಣ್ಣುಗಳು ಮತ್ತು ಹಾಲು ನೀಡಲಾಗುತ್ತದೆ.

ಪ್ರಾಣ ಪ್ರತಿಷ್ಠಾ ವಿಧಿ ವಿಧಾನಗಳ ನಂತರ ನಡೆದ ರಾಮಲಲ್ಲಾ ಮೂರ್ತಿಯ ಅನಾವರಣ ಸಮಾರಂಭದ ವಿಶೇಷವಾಗಿತ್ತು. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರವು ಭವ್ಯವಾದ ರಚನೆಯಾಗಿ ನಿಂತಿದೆ. ಇದು 380 ಅಡಿ ಉದ್ದ (ಪೂರ್ವ-ಪಶ್ಚಿಮ) ಮತ್ತು 250 ಅಡಿ ಅಗಲವನ್ನು ಹೊಂದಿದೆ. ನೆಲದಿಂದ 161 ಅಡಿ ಎತ್ತರದಲ್ಲಿರುವ ಈ ದೇವಾಲಯವು 392 ಕಂಬಗಳಿಂದ ಬೆಂಬಲಿತವಾಗಿದೆ ಮತ್ತು 44 ಬಾಗಿಲುಗಳನ್ನು ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:49 am, Tue, 23 January 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ