ಕಾಶ್ಮೀರ ಬಗ್ಗೆ ಹೇಳಿಕೆ ವಿವಾದದ ಬೆನ್ನಲ್ಲೇ ದೆಹಲಿಗೆ ಬಂದಿಳಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು  ವಾಂಗ್ ಯಿ ನಾಳೆ (ಶುಕ್ರವಾರ) ಭೇಟಿಯಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರ ಬಗ್ಗೆ ಹೇಳಿಕೆ ವಿವಾದದ ಬೆನ್ನಲ್ಲೇ ದೆಹಲಿಗೆ ಬಂದಿಳಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ
ಜೈ ಶಂಕರ್- ವಾಂಗ್ ಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 24, 2022 | 10:47 PM

ದೆಹಲಿ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ (Wang Yi )ಅವರು ಗುರುವಾರ ದೆಹಲಿಗೆ ಬಂದಿಳಿದಿದ್ದಾರೆ. ಲಡಾಖ್‌ ಸಂಘರ್ಷದ ಎರಡು ವರ್ಷಗಳ ನಂತರ ಚೀನಾ ಸಚಿವರ ಭಾರತಕ್ಕೆ ಮೊದಲ ಭೇಟಿಯಾಗಿದೆ ಇದು. ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರನ್ನು  ವಾಂಗ್ ಯಿ ನಾಳೆ (ಶುಕ್ರವಾರ) ಭೇಟಿಯಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ವಾಂಗ್ ಯಿ ಅವರ ಭೇಟಿಯ ಉದ್ದೇಶವು ಸಂವಾದವನ್ನು ಪುನರಾರಂಭಿಸುವುದು ಮತ್ತು ಈ ವರ್ಷದ ಕೊನೆಯಲ್ಲಿ ಬೀಜಿಂಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವುದಾಗಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಕೊನೆಯ ಕ್ಷಣದವರೆಗೂ ಭೇಟಿಯ ಬಗ್ಗೆ ಸಸ್ಪೆನ್ಸ್ ಮುಂದುವರಿದಿದ್ದು, ಚೀನಾ ಸಚಿವರು ದೆಹಲಿಗೆ ಬಂದಿಳಿದಾಗಲೂ ಭೇಟಿಯ ಅಧಿಕೃತ ದೃಢೀಕರಣ ಸಿಕ್ಕಿರಲಿಲ್ಲ. ಅಫ್ಘಾನಿಸ್ತಾನದಿಂದ ಹೊರಟ ಅವರ ವಿಮಾನದ ಹಾರಾಟದ ಮಾರ್ಗವನ್ನು ಪತ್ತೆಹಚ್ಚುವ ಮೂಲಕ ಮಾತ್ರ ಲ್ಯಾಂಡಿಂಗ್ ಅನ್ನು ಖಚಿತಪಡಿಸಲು ಸಾಧ್ಯವಾಯಿತು ಎಂದು ಎನ್​​ಡಿಟಿವಿ ವರದಿಮಾಡಿದೆ.  ಲಡಾಖ್‌ನಲ್ಲಿ ಚೀನಾದ ಆಕ್ರಮಣಗಳು ಆಗಾಗ್ಗೆ ಆಗುತ್ತಿದ್ದರೂ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯರು ಹುತಾತ್ಮರಾಗಿದ್ದರು. ಇದಾದ ನಂತರ ಭಾರತ-ಚೀನಾ ಸಂಬಂಧಗಳು ಕುಸಿತ ಕಂಡಿವೆ.  ಪುನರಾವರ್ತಿತ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆಗಳು ಸೇನಾ ಪಡೆಗಳ ಹಿಂತಗೆತಕ್ಕೆ ಕಾರಣವಾಗಿದೆ. ಕಳೆದ ವರ್ಷ ಪಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳಲ್ಲಿ ಮತ್ತು ಗೋಗ್ರಾ ಪ್ರದೇಶದಲ್ಲಿ ಎರಡು ಕಡೆಯವರು ಹಿಂಪಡೆಯುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಆದರೆ 2020ರ ಮೊದಲು ಇದ್ದ ಯಥಾಸ್ಥಿತಿಗೆ ಹಿಂತಿರುಗಿಲ್ಲ.

ಮಾರ್ಚ್ 11 ರಂದು  ಭಾರತ ಮತ್ತು ಚೀನಾ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು 15 ನೇ ಸುತ್ತಿನ ಮಿಲಿಟರಿ ಮಾತುಕತೆಯನ್ನು ನಡೆಸಿತು. ಉದ್ವಿಗ್ನತೆಯನ್ನು ಶಮನಗೊಳಿಸಲು  ಜೈಶಂಕರ್ ಅವರು ಮಾಸ್ಕೋ ಮತ್ತು ದುಶಾನ್ಬೆಯಲ್ಲಿ ವಾಂಗ್ ಯಿ ಅವರೊಂದಿಗೆ ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಿದರು.

ಬುಧವಾರ ದೆಹಲಿ ಬೀಜಿಂಗ್‌ನಲ್ಲಿನ ನಾಯಕತ್ವಕ್ಕೆ “ಭಾರತವು ತಮ್ಮ ಆಂತರಿಕ ಸಮಸ್ಯೆಗಳ ಸಾರ್ವಜನಿಕ ತೀರ್ಪಿನಿಂದ ದೂರವಿರುತ್ತದೆ” ಎಂದು ನೆನಪಿಸಿತ್ತು. ಇಸ್ಲಾಮಾಬಾದ್‌ನಲ್ಲಿ ಒಐಸಿ ಸಭೆಯಲ್ಲಿ ವಾಂಗ್ ಅವರು “ಕಾಶ್ಮೀರದ ಬಗ್ಗೆ, ನಮ್ಮ ಅನೇಕ ಇಸ್ಲಾಮಿಕ್ ಸ್ನೇಹಿತರ ಕರೆಗಳನ್ನು ನಾವು ಇಂದು ಮತ್ತೆ ಕೇಳಿದ್ದೇವೆ. ಚೀನಾ ಅದೇ ಭರವಸೆಯನ್ನು ಇರಿಸಿಕೊಂಡಿದೆ ಎಂದಿದ್ದರು.

ಇದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಖಾರವಾಗಿ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ “ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಉದ್ಘಾಟನಾ ಸಮಾರಂಭದಲ್ಲಿ (ಒಐಸಿ ಸಭೆಯ) ಭಾಷಣದಲ್ಲಿ ಭಾರತದ ಬಗ್ಗೆ ಮಾಡಿದ ಉಲ್ಲೇಖವನ್ನು ನಾವು ತಿರಸ್ಕರಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್​​​ ತೆರಿಗೆ ಮುಕ್ತ ಮಾಡುವುದಕ್ಕಿಂತ ಯೂಟ್ಯೂಬ್​​ನಲ್ಲೇ ಹಾಕಿಬಿಡಿ, ಎಲ್ಲರೂ ನೋಡಲಿ: ಅರವಿಂದ ಕೇಜ್ರಿವಾಲ್

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್