BJP Meet: ಸಚಿವ ಸಂಪುಟ ವಿಸ್ತರಣೆ, ಲೋಕಸಭಾ ಚುನಾವಣೆ ವಿಚಾರವಾಗಿ ಹೈದರಾಬಾದ್​ನಲ್ಲಿ ಬಿಜೆಪಿ ಪ್ರಮುಖರ ಸಭೆ

|

Updated on: Jul 09, 2023 | 12:47 PM

ವಿವಿಧ ರಾಜ್ಯಗಳ ಚುನಾವಣೆಗಳು ಹಾಗೂ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಹೈದರಾಬಾದ್​ನಲ್ಲಿ ಬಿಜೆಪಿ ಇಂದು ಸಭೆಯನ್ನು ಆಯೋಜಿಸಿದೆ.

BJP Meet: ಸಚಿವ ಸಂಪುಟ ವಿಸ್ತರಣೆ, ಲೋಕಸಭಾ ಚುನಾವಣೆ ವಿಚಾರವಾಗಿ ಹೈದರಾಬಾದ್​ನಲ್ಲಿ ಬಿಜೆಪಿ ಪ್ರಮುಖರ ಸಭೆ
ನರೇಂದ್ರ ಮೋದಿ
Image Credit source: OpIndia
Follow us on

ವಿವಿಧ ರಾಜ್ಯಗಳ ಚುನಾವಣೆಗಳು ಹಾಗೂ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಹೈದರಾಬಾದ್​ನಲ್ಲಿ ಬಿಜೆಪಿ ಇಂದು ಸಭೆಯನ್ನು ಆಯೋಜಿಸಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ತೆಲಂಗಾಣಕ್ಕೆ ಭೇಟಿ ನೀಡಿದ ಒಂದು ದಿನದ ಬಳಿಕ ಸಭೆ ಆಯೋಜನೆಗೊಂಡಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಪಕ್ಷದ 11 ರಾಜ್ಯಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ವಿಶೇಷವಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲನ್ನು ಅನುಭವಿಸಿದ್ದು, ಬೇರೆ ಯಾವ ರಾಜ್ಯಗಳಲ್ಲೂ ಇಂತಹ ತಪ್ಪು ಆಗದಂತೆ ತಡೆಯಲು ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಅಂತರವನ್ನು ಗುರುತಿಸಲು ಮತ್ತು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಪಕ್ಷವು ಯೋಜಿಸಿದೆ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಇತ್ತೀಚೆಗೆ ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನಾಯಕತ್ವದಲ್ಲಿನ ಈ ಬದಲಾವಣೆಯು ಬಂಡಿ ಸಂಜಯ್ ಬದಲಿಗೆ ರೆಡ್ಡಿಗೆ ಅಧಿಕಾರ ನೀಡಲಾಗಿದೆ.

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪಕ್ಷವು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ತೆಲಂಗಾಣದ ವಾರಂಗಲ್​​​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ; ಚಿತ್ರಗಳಲ್ಲಿ ನೋಡಿ

ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದ ಶುರುವಾಗಲಿದ್ದು ಅದಕ್ಕೂ ಮೊದಲು ಮಹತ್ವದ ಬದಲಾವಣೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ