ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಜಮ್ಮು ಕಾಶ್ಮೀರವನ್ನು ಮತ್ತೆ ಭಯೋತ್ಪಾದನೆಗೆ ತಳ್ಳಲು ಬಯಸುತ್ತಿವೆ: ಅಮಿತ್ ಶಾ

ಚುನಾವಣಾ ಕಣದಲ್ಲಿರುವ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯ ಪ್ರಚಾರ ಮಾಡುತ್ತಿರುವ ಅಮಿತ್ ಶಾ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಭಯೋತ್ಪಾದನೆಯ ಬಗ್ಗೆ 'ಮೃದು'ವಾಗಿದೆ. ಅವರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಭಯೋತ್ಪಾದಕರು ಮತ್ತು ಕಲ್ಲು ತೂರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಪದೇ ಪದೇ ಹೇಳಿಕೊಂಡಿದ್ದಾರೆ.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಜಮ್ಮು ಕಾಶ್ಮೀರವನ್ನು ಮತ್ತೆ ಭಯೋತ್ಪಾದನೆಗೆ ತಳ್ಳಲು ಬಯಸುತ್ತಿವೆ: ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Sep 16, 2024 | 4:10 PM

ದೆಹಲಿ ಸೆಪ್ಟೆಂಬರ್ 16: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ (Jammu and Kashmir Polls) ಮೊದಲ ಹಂತದ ಪ್ರಚಾರದ ಕೊನೆಯ ದಿನವಾದ ಸೋಮವಾರ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ (Amit Shah), ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ (Rahul Gandhi) ಈ ಪ್ರದೇಶವನ್ನು ಮತ್ತೆ ಭಯೋತ್ಪಾದನೆಗೆ ತಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಚುನಾವಣಾ ಕಣದಲ್ಲಿರುವ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯ ಪ್ರಚಾರ ಮಾಡುತ್ತಿರುವ ಶಾ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ (NC) ಭಯೋತ್ಪಾದನೆಯ ಬಗ್ಗೆ ‘ಮೃದು’ವಾಗಿದೆ. ಅವರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಭಯೋತ್ಪಾದಕರು ಮತ್ತು ಕಲ್ಲು ತೂರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಪದೇ ಪದೇ ಹೇಳಿಕೊಂಡಿದ್ದಾರೆ.

ಆದಾಗ್ಯೂ, ಅಮಿತ್ ಶಾ ಅವರ ಈ ವಾದವನ್ನುಈಗಾಗಲೇ ಎನ್‌ಸಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದ್ದಾರೆ.

ಮತ್ತೊಮ್ಮೆ ಇಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಎನ್‌ಸಿ ಮತ್ತು ಕಾಂಗ್ರೆಸ್ ಗೆದ್ದರೆ ಈ ಭಯೋತ್ಪಾದಕರನ್ನು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿವೆ. ಆದರೆ (ಪ್ರಧಾನಿ) ನರೇಂದ್ರ ಮೋದಿಯವರ ಸರ್ಕಾರ (ಕೇಂದ್ರದಲ್ಲಿ) ಇರುವವರೆಗೆ, ಯಾರೂ ಭಾರತದ ನೆಲದಲ್ಲಿ ಭಯೋತ್ಪಾದನೆಯನ್ನು ಹರಡಲು ಧೈರ್ಯ ಮಾಡುವುದಿಲ್ಲ ಎಂದು ನಾನು ಇಂದು ನಿಮಗೆ ಭರವಸೆ ನೀಡುತ್ತೇನೆ ಎಂದು ಕಿಶ್ತ್ವಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಶಾ ಹೇಳಿದ್ದಾರೆ.

ಇಂದು, ನಾನು ಈ ಪ್ರದೇಶದ ಎಲ್ಲಾ ಹುತಾತ್ಮರನ್ನು ಸ್ಮರಿಸುತ್ತೇನೆ. ಭಯೋತ್ಪಾದನೆ ಮತ್ತೆ ತಲೆ ಎತ್ತದಂತೆ ನಾವು ಅದನ್ನು ಕೊನೆಗೊಳಿಸುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದು ಶಾ ಹೇಳಿದ್ದಾರೆ . ಇದಲ್ಲದೆ, ಜಮ್ಮು ಮತ್ತು ಕಾಶ್ಮೀರಕ್ಕೆ ‘ವಿಶೇಷ ಸ್ಥಾನಮಾನ’ ನೀಡಿದ ಮತ್ತು 2019 ರ ಆಗಸ್ಟ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರವು ರದ್ದುಪಡಿಸಿದ 370 ನೇ ವಿಧಿಯು ‘ಇತಿಹಾಸ’ ಎಂದು ಶಾ ಪುನರುಚ್ಚರಿಸಿದರು.

ಇದನ್ನೂ ಓದಿ: ಬೆಳಿಗ್ಗೆ ಕಾಶಿ, ಮಧ್ಯಾಹ್ನ ಭುವನೇಶ್ವರ, ಸಂಜೆ ನಾಗ್ಪುರ: ಹುಟ್ಟುಹಬ್ಬದಂದು ಮೋದಿ ಭಾಗವಹಿಸುವ ಕಾರ್ಯಕ್ರಮಗಳು ಹೀಗಿವೆ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನವೆಂಬರ್-ಡಿಸೆಂಬರ್ 2014 ರ ನಂತರ ಮೊದಲ ಚುನಾವಣೆ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 8 ರಂದು ನಡೆಯಲಿದೆ.

2014 ರ ಚುನಾವಣೆಯ ತಿಂಗಳುಗಳ ನಂತರ, ಫೆಬ್ರವರಿ 2015 ರಲ್ಲಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಅಧಿಕಾರಕ್ಕೇರಿದ್ದು, ಜೂನ್ 2018 ರಲ್ಲಿ ಈ ಮೈತ್ರಿ ಕೊನೆಗೊಂಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು