ಮತ್ತೆ ಆಸ್ಪತ್ರೆಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳ ಹಿಂದೆ ಕೊವಿಡ್‌ನಿಂದ ಬಳಲುತ್ತಿದ್ದ ಅಮಿತ್ ಶಾ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದ್ರೆ, ನಿನ್ನೆ ಸಚಿವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ AIIMS ಆಸ್ಪತ್ರೆಗೆ ಮತ್ತೊಮ್ಮೆ ದಾಖಲಾಗಿದ್ದಾರೆ. ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು ತಡರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದು ಅವರನ್ನು […]
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳ ಹಿಂದೆ ಕೊವಿಡ್‌ನಿಂದ ಬಳಲುತ್ತಿದ್ದ ಅಮಿತ್ ಶಾ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದ್ರೆ, ನಿನ್ನೆ ಸಚಿವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ AIIMS ಆಸ್ಪತ್ರೆಗೆ ಮತ್ತೊಮ್ಮೆ ದಾಖಲಾಗಿದ್ದಾರೆ.
ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು
ತಡರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದು ಅವರನ್ನು VVIPಗಳಿಗೆ ಮೀಸಲಾಗಿರುವ ವಿಶೇಷ ಕೊಠಡಿಯಲ್ಲಿ ಇರಿಸಲಾಗಿದೆ. AIIMS ನಿರ್ದೇಶಕ ಡಾ. ರಂದೀಪ್ ಗುಲೆರಿಯಾ ಅಮಿತ್ ಶಾಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಚಿವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.