ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಅಮಿತ್ ಶಾ, ಸ್ಮೃತಿ ಇರಾನಿ

| Updated By: ರಶ್ಮಿ ಕಲ್ಲಕಟ್ಟ

Updated on: Jul 29, 2022 | 1:12 PM

ಸ್ಮೃತಿ ಇರಾನಿ ಅವರು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯಸಚಿವ ಮಹೇಂದ್ರ ಮುಂಜಪ್ಪರ, ಅಲ್ಪ ಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಜಾನ್ ಬರ್ಲಾ ಅವರೊಂದಿಗೆ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಅಮಿತ್ ಶಾ, ಸ್ಮೃತಿ ಇರಾನಿ
ಮುರ್ಮು ಅವರನ್ನು ಭೇಟಿ ಮಾಡಿದ ಅಮಿತ್ ಶಾ
Follow us on

ದೆಹಲಿ: ಕೇಂದ್ರ ಸಚಿವರಾದ ಅಮಿತ್ ಶಾ (Amit Shah) ಮತ್ತು ಸ್ಮೃತಿ ಇರಾನಿ (Smriti Irani) ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu)ಅವರನ್ನು ಭೇಟಿಯಾಗಿದ್ದಾರೆ. ಮುರ್ಮ ಅವರನ್ನು ಭೇಟಿ ಮಾಡಿರುವ ಫೋಟೊವನ್ನು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಅದೇ ವೇಳೆ ಸ್ಮೃತಿ ಇರಾನಿ ಅವರು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯಸಚಿವ ಮಹೇಂದ್ರ ಮುಂಜಪ್ಪರ, ಅಲ್ಪ ಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಜಾನ್ ಬರ್ಲಾ ಅವರೊಂದಿಗೆ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ನಾಯಕಿಯಾಗಿದ್ದ ಮುರ್ಮು ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಯಾಗಿ ಚುನಾಯಿತರಾಗಿದ್ದ ಮುರ್ಮು ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೇರಿದ ಎರಡನೇ ಮಹಿಳೆ ಮತ್ತು ಬುಡಕಟ್ಟು ಜನಾಂಗದ ಮೊದಲ ಮಹಿಳೆಯಾಗಿದ್ದಾರೆ ದ್ರೌಪದಿ ಮುರ್ಮು.

ಕೇಂದ್ರ ಸಹಕಾರ ಮತ್ತು ಗೃಹ ಖಾತೆ ಸಚಿವರಾಗಿರುವ ಅಮಿತ್ ಶಾ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ. ರಾಷ್ಟ್ರಪತಿಯಾಗಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸುವ ದಿನದಂದು ಅಮಿತ್ ಶಾ ಅವರು, ನರೇಂದ್ರ ಮೋದಿ ಸರ್ಕಾರ ಬುಡಕಟ್ಟು ಜನಾಂಗದವರ ಸಬಲೀಕರಮಕ್ಕೆ ಬದ್ಧವಾಗಿದೆ ಎಂಬುದನ್ನು ಇದು ತೋರಿಸುತ್ತದೆ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮು ಆಯ್ಕೆಯಾಗಿರುವುದು ಭಾರತದ ಪ್ರಜಾಪ್ರಭುತ್ವದಲ್ಲಿನ ಐತಿಹಾಸಿಕ ಸಂಗತಿ ಎಂದಿದ್ದಾರೆ.

Published On - 1:00 pm, Fri, 29 July 22