AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಮಹಿಳೆಯರಿಗೆ ಶೇ. 33ರಷ್ಟು ಸರ್ಕಾರಿ ಉದ್ಯೋಗ ಮೀಸಲು; ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಅಮಿತ್ ಶಾ ಗಿಫ್ಟ್

ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತ್ರಿಪುರಾದಲ್ಲಿ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.

Amit Shah: ಮಹಿಳೆಯರಿಗೆ ಶೇ. 33ರಷ್ಟು ಸರ್ಕಾರಿ ಉದ್ಯೋಗ ಮೀಸಲು; ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಅಮಿತ್ ಶಾ ಗಿಫ್ಟ್
ಅಮಿತ್ ಶಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 08, 2022 | 5:16 PM

ಅಗರ್ತಲಾ: ಅಂತಾರಾಷ್ಟ್ರೀಯ ಮಹಿಳಾ ದಿನವಾದ್ದರಿಂದ (International Women’s Day) ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತ್ರಿಪುರಾದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ. ತ್ರಿಪುರಾದಲ್ಲಿ ಬಿಜೆಪಿ-ಐಪಿಎಫ್‌ಟಿ ಸರ್ಕಾರದ 4ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಿಜೆಪಿಯ ಹಿರಿಯ ನಾಯಕ ಬಿಪ್ಲಬ್ ದೇಬ್ ಅವರ ಆಡಳಿತವು ರಾಜಕೀಯ ಹಿಂಸಾಚಾರಕ್ಕೆ ಪೂರ್ಣ ವಿರಾಮ ಹಾಕಿದೆ ಎಂದು ಹೇಳಿದ್ದಾರೆ.

ತ್ರಿಪುರಾದಲ್ಲಿ ಘೋರ ಅಪರಾಧಗಳಲ್ಲಿ ಶೇ. 30ರಷ್ಟು ಇಳಿಕೆಯಾಗಿದೆ ಮತ್ತು ಶಿಕ್ಷೆಯ ಪ್ರಮಾಣವು ಶೇ. 5ರಿಂದ ಶೇ. 53ಕ್ಕೆ ಏರಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂದಿನ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಆಡಳಿತ ವ್ಯವಸ್ಥೆಯು ಈಡೇರಿಸುತ್ತದೆ. ಮತ ಕೇಳಲು ಮತ್ತೆ ತ್ರಿಪುರಾಕ್ಕೆ ಬರುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ತ್ರಿಪುರಾ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತ್ರಿಪುರಾದಲ್ಲಿ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ. ತ್ರಿಪುರಾ ಆಡಳಿತದಲ್ಲಿ ಉದ್ಯೋಗಗಳಲ್ಲಿ ಶೇ. 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ. ತ್ರಿಪುರಾದಲ್ಲಿ ಹಿಂದಿನ ಸಿಪಿಐ-ಎಂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಹಿಂದಿನ ಸಿಪಿಐ-ಎಂ ಸರ್ಕಾರವು ತಮ್ಮ ಆಡಳಿತದಲ್ಲಿ ಪ್ರತಿಪಕ್ಷಗಳ ರಕ್ತದಿಂದ ಹೋಳಿ ಆಡಿದರೆ, ಮುಖ್ಯಮಂತ್ರಿ ಬಿಪ್ಲಬ್ ದೇಬ್ ರಾಜ್ಯದಲ್ಲಿ ರಾಜಕೀಯ ಕೊಲೆಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

“ತ್ರಿಪುರಾದಲ್ಲಿ ಯುವಜನರಿಗಾಗಿ 200 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ. ಕೇವಲ 4 ವರ್ಷಗಳಲ್ಲಿ ಪ್ರತಿ ವ್ಯಕ್ತಿಯ ಆದಾಯವು ಶೇ.13ರಿಂದ 1.30 ಲಕ್ಷಕ್ಕೆ ಏರಿಕೆಯಾಗಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತ್ರಿಪುರಾದ ಸರ್ಕಾರದ ಅಡಿಯಲ್ಲಿ ರೈತರ ಆದಾಯವು ದ್ವಿಗುಣಗೊಂಡಿದೆ ಮತ್ತು ತಲಾ ಆದಾಯವು 1.3 ಲಕ್ಷ ರೂ.ಗೆ ಏರಿಕೆಯಾಗಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದ್ದಾರೆ. ರೈಲಿನ ಮೂಲಕ ಅಗರ್ತಲಾವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸಲಾಗಿದೆ. ಒಟ್ಟು 542 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲಾ ಧರ್ಮದ ಜನರು ಶಾಲಾ ಸಮವಸ್ತ್ರವನ್ನು ಒಪ್ಪಿಕೊಳ್ಳಬೇಕು: ಗೃಹ ಸಚಿವ ಅಮಿತ್ ಶಾ

ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಭಯೋತ್ಪಾದನೆ ಬಿತ್ತುತ್ತದೆ; ಅಖಿಲೇಶ್ ಯಾದವ್ ವಿರುದ್ಧ ಅಮಿತ್ ಶಾ ವಾಗ್ದಾಳಿ