Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್‌ಲೋಡ್ ಮಾಡಲು ಅಮಿತ್ ಶಾ ಮನವಿ
‘ಹರ್ ಘರ್ ತಿರಂಗ’ ಅಭಿಯಾನ: ಭಾರತದ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು. ಆ ಫೋಟೋವನ್ನು 'ಹರ್ ಘರ್ ತಿರಂಗ' harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು, ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಆ ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್‌ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದಿದ್ದಾರೆ.
PM Shri @narendramodi Ji’s #HarGharTiranga campaign has evolved into a national movement over the last two years, awakening the basic unity in every Indian across the length and breadth of the nation.
I appeal to all citizens to bolster this movement further and participate in…
— Amit Shah (@AmitShah) August 3, 2024
ಇದನ್ನೂ ಓದಿ: Wayanad Landslide: ವಯನಾಡಿಗೆ ಒಮ್ಮೆಯೂ ರೆಡ್ ಅಲರ್ಟ್ ನೀಡಿಲ್ಲ; ಅಮಿತ್ ಶಾ ಆರೋಪಕ್ಕೆ ಕೇರಳ ಸಿಎಂ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ವಿನಂತಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ