AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ಸರ್ಕಾರದ ಗುರಿ; ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಅಮಿತ್ ಶಾ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಂದರ್ಭದಲ್ಲಿ 30,77,000 ಕೋಟಿ ರೂ. ಮೌಲ್ಯದ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭೋಪಾಲ್‌ನಲ್ಲಿ ಜಿಐಎಸ್‌ನ ಎರಡನೇ ಮತ್ತು ಕೊನೆಯ ದಿನದಂದು ಸುಗಮ ಸಂಚಾರ ವ್ಯವಸ್ಥೆಯನ್ನು ನಿರ್ಮಿಸಲು ಪೊಲೀಸರು ಹಳೆಯ ವಿಮಾನ ನಿಲ್ದಾಣದಿಂದ ಮಾನವ್ ಸಂಗ್ರಹಾಲಯಕ್ಕೆ ಸಂಚಾರ ಮಾರ್ಗವನ್ನು ಬದಲಾಯಿಸಿದ್ದಾರೆ. ಮಾನವ್ ಸಂಗ್ರಹಾಲಯದ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್‌ಗಳನ್ನು ಸಹ ನಿಷೇಧಿಸಲಾಗಿದೆ.

ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ಸರ್ಕಾರದ ಗುರಿ; ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಅಮಿತ್ ಶಾ
Amit Shah
ಸುಷ್ಮಾ ಚಕ್ರೆ
|

Updated on:Feb 25, 2025 | 6:48 PM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭೋಪಾಲ್‌ನಲ್ಲಿ ನಡೆದ ಎರಡು ದಿನಗಳ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಮಧ್ಯಪ್ರದೇಶದಲ್ಲಿ ಈಗ ಹಲವಾರು ವ್ಯವಹಾರಗಳು ಹೂಡಿಕೆ ಮಾಡುತ್ತಿವೆ. ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು.

ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಮಯದಲ್ಲಿ 30,77,000 ಕೋಟಿ ರೂ. ಮೌಲ್ಯದ ಎಂಒಯುಗೆ ಸಹಿ ಹಾಕಲಾಗಿದೆ ಎಂದು ಅಮಿತ್ ಶಾ ಒತ್ತಿ ಹೇಳಿದರು. ಈ ಎರಡು ದಿನಗಳ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಭಾರತೀಯ ಕಂಪನಿಗಳು, ಜಾಗತಿಕ ಸಿಇಒಗಳು, 20ಕ್ಕೂ ಹೆಚ್ಚು ಯುನಿಕಾರ್ನ್ ಸಂಸ್ಥಾಪಕರು ಮತ್ತು 50ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಮಧ್ಯಪ್ರದೇಶದಲ್ಲಿ ಹೂಡಿಕೆ ಮಾಡಲು ಇಲ್ಲಿನ ಪರಿಸರವನ್ನು ನೋಡಲು ಆಗಮಿಸಿದ್ದಾರೆ. ಇದು ಮಧ್ಯಪ್ರದೇಶಕ್ಕೆ ಒಂದು ದೊಡ್ಡ ಸಾಧನೆಯಾಗಿದೆ. ಈ ಬಾರಿ ಮಧ್ಯಪ್ರದೇಶ ಕೂಡ ಒಂದು ಹೊಸ ಪ್ರಯೋಗವನ್ನು ಮಾಡಿದೆ. ಈ ಪ್ರಯೋಗವು ಮುಂಬರುವ ದಿನಗಳಲ್ಲಿ ಹಲವು ರಾಜ್ಯಗಳಿಗೆ ದಿಕ್ಕನ್ನು ತೋರಿಸುತ್ತದೆ ಎಂದು ಅಮಿತ್ ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

2027ರ ವೇಳೆಗೆ ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯನ್ನು ಸಾಧಿಸುವಲ್ಲಿ ಮಧ್ಯಪ್ರದೇಶವು ದೊಡ್ಡ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ಪಾದನೆ, ಮೂಲಸೌಕರ್ಯ, ಕೃಷಿ, ನವೀಕರಿಸಬಹುದಾದ ಇಂಧನ, ತಂತ್ರಜ್ಞಾನ ಮತ್ತು ಸೇವೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆಗಳಿಗೆ ಮಧ್ಯಪ್ರದೇಶವನ್ನು ಪ್ರಮುಖ ತಾಣವಾಗಿ ಉತ್ತೇಜಿಸುವುದು ಶೃಂಗಸಭೆಯ ಮುಖ್ಯ ಉದ್ದೇಶವಾಗಿದೆ. ಬಿಲಿಯನೇರ್ ಗೌತಮ್ ಅದಾನಿ ಅವರ ಸಂಸ್ಥೆ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದಕ ಎನ್‌ಟಿಪಿಸಿ ಸೇರಿದಂತೆ ಒಂದು ಡಜನ್‌ಗಿಂತಲೂ ಹೆಚ್ಚು ಕಂಪನಿಗಳು ಮಧ್ಯಪ್ರದೇಶದ ವ್ಯವಹಾರಗಳಲ್ಲಿ ಸುಮಾರು 4 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಬದ್ಧವಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Tue, 25 February 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ