ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭೋಪಾಲ್‌ನಲ್ಲಿ ನಡೆದ ಎರಡು ದಿನಗಳ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಮಧ್ಯಪ್ರದೇಶದಲ್ಲಿ ಈಗ ಹಲವಾರು ವ್ಯವಹಾರಗಳು ಹೂಡಿಕೆ ಮಾಡುತ್ತಿವೆ. ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು.
ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಮಯದಲ್ಲಿ 30,77,000 ಕೋಟಿ ರೂ. ಮೌಲ್ಯದ ಎಂಒಯುಗೆ ಸಹಿ ಹಾಕಲಾಗಿದೆ ಎಂದು ಅಮಿತ್ ಶಾ ಒತ್ತಿ ಹೇಳಿದರು. ಈ ಎರಡು ದಿನಗಳ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಭಾರತೀಯ ಕಂಪನಿಗಳು, ಜಾಗತಿಕ ಸಿಇಒಗಳು, 20ಕ್ಕೂ ಹೆಚ್ಚು ಯುನಿಕಾರ್ನ್ ಸಂಸ್ಥಾಪಕರು ಮತ್ತು 50ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಮಧ್ಯಪ್ರದೇಶದಲ್ಲಿ ಹೂಡಿಕೆ ಮಾಡಲು ಇಲ್ಲಿನ ಪರಿಸರವನ್ನು ನೋಡಲು ಆಗಮಿಸಿದ್ದಾರೆ. ಇದು ಮಧ್ಯಪ್ರದೇಶಕ್ಕೆ ಒಂದು ದೊಡ್ಡ ಸಾಧನೆಯಾಗಿದೆ. ಈ ಬಾರಿ ಮಧ್ಯಪ್ರದೇಶ ಕೂಡ ಒಂದು ಹೊಸ ಪ್ರಯೋಗವನ್ನು ಮಾಡಿದೆ. ಈ ಪ್ರಯೋಗವು ಮುಂಬರುವ ದಿನಗಳಲ್ಲಿ ಹಲವು ರಾಜ್ಯಗಳಿಗೆ ದಿಕ್ಕನ್ನು ತೋರಿಸುತ್ತದೆ ಎಂದು ಅಮಿತ್ ಹೇಳಿದರು.
ಇದನ್ನೂ ಓದಿ: ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ
2027ರ ವೇಳೆಗೆ ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯನ್ನು ಸಾಧಿಸುವಲ್ಲಿ ಮಧ್ಯಪ್ರದೇಶವು ದೊಡ್ಡ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Bhopal, MP: Speaking at the Concluding Ceremony of the Global Investors Summit 2025, Union Home Minister Amit Shah says, “First of all, I would like to congratulate Chief Minister Mohan Yadav, his entire team, his cabinet, and the administrative officials, including the Chief… pic.twitter.com/vLciE0bb8u
— IANS (@ians_india) February 25, 2025
ಉತ್ಪಾದನೆ, ಮೂಲಸೌಕರ್ಯ, ಕೃಷಿ, ನವೀಕರಿಸಬಹುದಾದ ಇಂಧನ, ತಂತ್ರಜ್ಞಾನ ಮತ್ತು ಸೇವೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆಗಳಿಗೆ ಮಧ್ಯಪ್ರದೇಶವನ್ನು ಪ್ರಮುಖ ತಾಣವಾಗಿ ಉತ್ತೇಜಿಸುವುದು ಶೃಂಗಸಭೆಯ ಮುಖ್ಯ ಉದ್ದೇಶವಾಗಿದೆ. ಬಿಲಿಯನೇರ್ ಗೌತಮ್ ಅದಾನಿ ಅವರ ಸಂಸ್ಥೆ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದಕ ಎನ್‌ಟಿಪಿಸಿ ಸೇರಿದಂತೆ ಒಂದು ಡಜನ್‌ಗಿಂತಲೂ ಹೆಚ್ಚು ಕಂಪನಿಗಳು ಮಧ್ಯಪ್ರದೇಶದ ವ್ಯವಹಾರಗಳಲ್ಲಿ ಸುಮಾರು 4 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಬದ್ಧವಾಗಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:48 pm, Tue, 25 February 25