Amit Shah ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಯೋಜನೆ, ಭದ್ರತೆಗೆ ವಿಷಯಗಳ ಬಗ್ಗೆ ಸಭೆ ನಡೆಸಿದ ಅಮಿತ್ ಶಾ
ಗೃಹ ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಯಲ್ಲಿ ಸಚಿವಾಲಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಅಭಿವೃದ್ಧಿ ಯೋಜನೆಗಳು ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಗೃಹ ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಯಲ್ಲಿ ನಡೆಯಲಿರುವ ಸಭೆಗಳಲ್ಲಿ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಭಾಗವಹಿಸಿದ್ದಾರೆ. ಎಲ್-ಜಿಗಳಲ್ಲದೆ, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ. ಗೃಹ ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಯಲ್ಲಿ ಸಚಿವಾಲಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು. ಲೇಹ್-ಲಡಾಖ್ ಕುರಿತ ಸಭೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದರೆ, ಜಮ್ಮು ಮತ್ತು ಕಾಶ್ಮೀರದ ಚರ್ಚೆ ಸಂಜೆ 4 ಗಂಟೆಗೆ ಪ್ರಾರಂಭವಾಗಿದೆ. ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿ ಯೋಜನೆಗಳು ಮತ್ತು ಕಣಿವೆಯಲ್ಲಿ ಪ್ರಸ್ತುತ ಭದ್ರತಾ ಪರಿಸ್ಥಿತಿಗಳ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಯಿತು.
ಬುಧವಾರ ನಸುಕಿನ ವೇಳೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹೊರವಲಯದಲ್ಲಿರುವ ಸಿದ್ರಾ ಬಳಿ ಕಾಶ್ಮೀರ ಕಣಿವೆಗೆ ತೆರಳುತ್ತಿದ್ದ ಟ್ರಕ್ ಅನ್ನು ಭದ್ರತಾ ಪಡೆಗಳು ತಡೆದ ನಂತರ ಉಂಟಾದ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ಘಟನೆಯ ಬೆನ್ನಲ್ಲೇ ಕೇಂದ್ರ ಸಚಿವರ ನೇತೃತ್ವದ ಸಭೆ ನಡೆದಿದೆ . ಎನ್‌ಕೌಂಟರ್ ಸ್ಥಳದಿಂದ ಏಳು ಎಕೆ 47 ರೈಫಲ್‌ಗಳು, ಒಂದು ಎಂ4 ಕಾರ್ಬೈನ್ ಮತ್ತು ಮೂರು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಿ ಉಗ್ರರನ್ನು ಸದೆಬಡಿದಿದ್ದಾರೆ. ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಾಗ ಎರಡೂ ಕಡೆಯಿಂದ ತೀವ್ರವಾದ ಗುಂಡಿನ ಚಕಮಕಿ ಸುಮಾರು ಒಂದು ಗಂಟೆಗಳ ಕಾಲ ಮುಂದುವರೆಯಿತು. ಸ್ಥಳವನ್ನು ತೆರವುಗೊಳಿಸಿದ ನಂತರ, ಭದ್ರತಾ ಪಡೆಗಳು ಏಳು ಎಕೆ 47 ರೈಫಲ್‌ಗಳು, ಮೂರು ಪಿಸ್ತೂಲ್‌ಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಭಯೋತ್ಪಾದಕರ ನಾಲ್ಕು ಶವಗಳನ್ನು ವಶಪಡಿಸಿಕೊಂಡವು.
ಟ್ರಕ್ನಲ್ಲಿದ್ದ ಮೂವರೂ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್‌ಕೌಂಟರ್ ನಡೆದ ಸ್ಥಳದಿಂದ ಒಬ್ಬ ಭಯೋತ್ಪಾದಕನ ಶವವನ್ನು ಹೊರತೆಗೆಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ 15 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ನಿಷ್ಕ್ರಿಯಗೊಳಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸೇನಾ ಪಡೆ ಸಿಬ್ಬಂದಿ ಸಿದ್ರಾದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದ್ದಾರೆ.
J&K | Visuals from Sidhra area of Jammu where an encounter is underway.
(Visuals deferred by unspecified time) pic.twitter.com/YSgz0xRQrO
— ANI (@ANI) December 28, 2022
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರನಲ್ಲಿ ತಪ್ಪಿದ ದುರಂತ; 15 ಕೆಜಿ ಸ್ಫೋಟಕ ನಿಷ್ಕ್ರಿಯಗೊಳಿಸಿದ ಪೊಲೀಸರು
ಬಸಂತ್‌ಗಢ ಪ್ರದೇಶದಲ್ಲಿ ಸಿಲಿಂಡರ್ ಆಕಾರದ ಐಇಡಿ, 300-400 ಗ್ರಾಂ ಆರ್‌ಡಿಎಕ್ಸ್, 7 7.62 ಎಂಎಂ ಕಾರ್ಟ್ರಿಡ್ಜ್‌ಗಳು ಮತ್ತು 5 ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಯ ಕೋಡೆಡ್ ಶೀಟ್ ಮತ್ತು ಲೆಟರ್ ಪ್ಯಾಡ್ ಪುಟವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಶಂಕಿತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ 2 ನಕ್ಸಲರನ್ನು ಎನ್‌ಕೌಂಟರ್ ಮಾಡಿದ ಭದ್ರತಾ ಪಡೆ
ಉಗ್ರರಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾದಲ್ಲಿ ಟ್ರಕ್ ಅನ್ನು ತಡೆದು ನಿಲ್ಲಿಸಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಟ್ರಕ್‌ನಲ್ಲಿ ಅಡಗಿ ಕುಳಿತಿದ್ದ ಉಗ್ರರು ತಪಾಸಣೆ ನಡೆಸಿದಾಗ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಮೇಲೆ ಪ್ರತೀಕಾರದ ಗುಂಡಿನ ದಾಳಿ ನಡೆಸಿ, ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.