ಪಿಎಫ್​ಐ, ಎಸ್​ಡಿಪಿಐ ಮೇಲೆ ಎನ್​ಐಎ ದಾಳಿಯ ಬೆನ್ನಿಗೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ, ಅಜಿತ್ ದೋವಲ್ ಭಾಗಿ

ಸಭೆಯಲ್ಲಿ ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುತ್ತಿದೆ.

ಪಿಎಫ್​ಐ, ಎಸ್​ಡಿಪಿಐ ಮೇಲೆ ಎನ್​ಐಎ ದಾಳಿಯ ಬೆನ್ನಿಗೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ, ಅಜಿತ್ ದೋವಲ್ ಭಾಗಿ
ಅಜಿತ್ ಡೊಭಾಲ್ ಮತ್ತು ಅಮಿತ್ ಶಾ (ಸಂಗ್ರಹ ಚಿತ್ರ)
Follow us
TV9 Web
| Updated By: ಡಾ. ಭಾಸ್ಕರ ಹೆಗಡೆ

Updated on:Sep 22, 2022 | 1:24 PM

ದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಎಸ್​ಡಿಪಿಐ (SDPI) ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (National Investigation Agency – NIA) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುತ್ತಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್​’. ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಗುಪ್ತಚರ ವಿಭಾಗವನ್ನು ನಿಯಂತ್ರಿಸುವ (National Security Advisor – NSA) ಅಜಿತ್ ದೋವಲ್ (Ajit Doval) ಸಹ ಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಸಭೆಯು ಹೆಚ್ಚು ಮಹತ್ವ ಪಡೆದುಕೊಂಡಿದೆ.

ಎನ್​ಐಎ, ಜಾರಿ ನಿರ್ದೇಶನಾಲಯ (Enforcement Directorate – ED) ಮತ್ತು ಗುಪ್ತದಳದಿಂದ (Intelligence Bureau – IB) ಸಾಕಷ್ಟು ಮಾಹಿತಿ ಕಲೆಹಾಕಿದ ನಂತರವೇ ಪಿಎಫ್​ಐ ಹಾಗೂ ಎಸ್​ಡಿಪಿಐ ಮೇಲೆ ಕೇಂದ್ರ ಸರ್ಕಾರದ ಏಜೆನ್ಸಿಗಳು ಇಂದು (ಸೆ 22) ದಾಳಿ ನಡೆಸಿದವು. ವಿವಿಧ ರಾಜ್ಯಗಳ ಪೊಲೀಸರ ನೆರವನ್ನೂ ದಾಳಿಯ ವೇಳೆ ಪಡೆಯಲಾಯಿತು. ಪಿಎಫ್​ಐ ಸಂಘಟನೆಯು ತನ್ನನ್ನು ತಾನು ಸಮಾಜೋ-ಧಾರ್ಮಿಕ ಸಂಘಟನೆ ಎಂದು ಕರೆದುಕೊಳ್ಳುತ್ತದೆ. ಈ ಸಂಘಟನೆಯ ಬಗ್ಗೆ ಕೇಂದ್ರ ಮತ್ತು ಹಲವು ರಾಜ್ಯ ಸರ್ಕಾರಗಳು ಇದೀಗ ಕಠಿಣ ನಿಲುವು ತಳೆದಿವೆ. ಉದಯ್​ಪುರ್ ಮತ್ತು ಅಮರಾವತಿ ನಗರಗಳಲ್ಲಿ ನಡೆದ ಶಿರಚ್ಛೇದ ಪ್ರಕರಣಗಳ ಅಪರಾಧಿಗಳಿಗೆ ಪಿಎಫ್​ಐ ನಂಟು ಇದ್ದುದು ಬೆಳಕಿಗೆ ಬಂದ ನಂತರ ಕೇಂದ್ರ ಸರ್ಕಾರವು ಪಿಎಫ್​ಐ ವಿರುದ್ಧ ಮತ್ತಷ್ಟು ಕಠಿಣ ನಿಲುವು ತಳೆಯಿತು.

ದೇಶಾದ್ಯಂತ ನಡೆದ ದಾಳಿಯಲ್ಲಿ ನೂರಾರು ಮಂದಿ ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೇರಳದಲ್ಲಿ 22, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ತಲಾ 20, ಆಂಧ್ರ ಪ್ರದೇಸದಲ್ಲಿ 5, ಅಸ್ಸಾಂನಲ್ಲಿ 9, ದೆಹಲಿಯಲ್ಲಿ 3, ಮಧ್ಯ ಪ್ರದೇಶದಲ್ಲಿ 4, ಪುದುಚೇರಿಯಲ್ಲಿ 3, ತಮಿಳುನಾಡಿನಲ್ಲಿ 10, ಉತ್ತರ ಪ್ರದೇಶದಲ್ಲಿ 8 ಮತ್ತು ರಾಜಸ್ಥಾನದಲ್ಲಿ ಇಬ್ಬರನ್ನು ಎನ್​ಐಎ ಬಂಧಿಸಿದೆ. ಭಯೋತ್ಪಾದಕ ಕೃತ್ಯಗಳಿಗೆ ಹಣ ಒದಗಿಸುವುದು, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಹಾಗೂ ಉಗ್ರ ಇಸ್ಲಾಂ ಪರ ಸಾಮಾನ್ಯ ಜನರನ್ನು ಓಲೈಸುವುದು ಸೇರಿದಂತೆ ಹಲವು ಆರೋಪಗಳನ್ನು ಬಂಧಿತರ ಮೇಲೆ ಹೊರಿಸಲಾಗಿದೆ.

ಮಧ್ಯಪ್ರಾಚ್ಯ ದೇಶಗಳಾದ ಕತಾರ್, ಕುವೈತ್, ಟರ್ಕಿ ಮತ್ತು ಸೌದಿ ಅರೇಬಿಯಾ ದೇಶಗಳಿಂದ ವ್ಯಾಪಕವಾಗಿ ಸಹಾಯಧನ ಹರಿದು ಬಂದ ನಂತರ ಕೇಂದ್ರ ಗೃಹ ಸಚಿವಾಲಯಕ್ಕೆ ಪಿಎಫ್​ಐ ಹಾಗೂ ಅದರ ರಾಜಕೀಯ ಹಸ್ತವಾಗಿರುವ ಎಸ್​ಡಿಪಿಐ ಬಗ್ಗೆ ಅನುಮಾನ ಬಲಗೊಂಡಿತ್ತು. ಕೇವಲ ಭಯೋತ್ಪಾದನೆಗೆ ಮಾತ್ರವೇ ಅಲ್ಲ, ಯುವಜನರಲ್ಲಿ ತೀವ್ರವಾದ ಹರಡಲೂ ಈ ನಿಧಿಯನ್ನು ಅವರು ಬಳಸಿಕೊಳ್ಳುತ್ತಿದ್ದ ಬಗ್ಗೆ ಅನುಮಾನಗಳಿದ್ದವು. ವಿಶ್ವದಾದ್ಯಂತ ಹರಡಿರುವ ‘ಮುಸ್ಲಿಂ ಬ್ರದರ್​ಹುಡ್​’ನಂಥ ಸಂಘಟನೆಯೊಂದಿಗೆ ಪಿಎಫ್​ಐಗೆ ಸಹಯೋಗವಿತ್ತು. ಭಾರತದಲ್ಲಿ ಇಸ್ಲಾಂ ಧರ್ಮದ ಮುಖವಾಣಿ ತಾನಾಗಬೇಕು ಎಂಬ ಹಂಬಲ ಈ ಸಂಘಟನೆಗೆ ಇತ್ತು.

ಪಿಎಫ್​ಐ ಮತ್ತು ಎಸ್​ಡಿಪಿಐ ಸಂಘಟನೆಗಳ ಮುಖ್ಯ ನಾಯಕತ್ವಕ್ಕೆ ನಿಷೇಧಿತ ಸಂಘಟನೆ ‘ಸಿಮಿ’ಯ (Students Islamic Movement of India – SIMI) ನಂಟು ಇದೆ. ಭಾರತದಲ್ಲಿ ಇಸ್ಲಾಮಿಕ್ ಖಿಲಾಫತ್ ಸ್ಥಾಪಿಸುವುದು ಸಿಮಿಯ ಉದ್ದೇಶವಾಗಿತ್ತು. ಸಂಪ್ರದಾಯವಾದಿ ಸುನ್ನಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಸಂಘಟನೆಯಾಗಿದ್ದರೂ ಪಿಎಫ್​ಐ ತನ್ನನ್ನು ತಾನು ಭಾರತದ ಎಲ್ಲ ಮುಸ್ಲಿಮರ ಪ್ರತಿನಿಧಿ ಎಂದು ಕರೆದುಕೊಳ್ಳುತ್ತಿತ್ತು. ಭಾರತದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಸೂಫಿಗಳು, ಬರೆಲ್​ವಿಗಳು ಮತ್ತು ದೇವಬಂದಿಗಳನ್ನೂ ಒಳಗೊಳ್ಳುವುದಾಗಿ ಪಿಎಫ್​ಐ ಹೇಳಿಕೊಳ್ಳುತ್ತಿತ್ತು.

ಇದನ್ನೂ ಓದಿ: ದೇಶದ ವಿವಿಧೆಡೆ NIA, ED ನಡೆಸಿದ ದಾಳಿಯಲ್ಲಿ 106 PFI ಕಾರ್ಯಕರ್ತರ ಬಂಧನ

Published On - 12:44 pm, Thu, 22 September 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ