ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ

ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ

2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. -ಬಸವರಾಜ ಬೊಮ್ಮಾಯಿ

TV9kannada Web Team

| Edited By: Ayesha Banu

May 11, 2022 | 3:41 PM

ದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ(Amit shah) ಭೇಟಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಪ್ರತಿಕ್ರಿಯಿಸಿದ್ದಾರೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ಸಂಬಂಧ ಯಾರ ಹೆಸರು ಕೂಡ ಪ್ರಸ್ತಾಪಿಸಿಲ್ಲ. ಮುಂದಿನ ವಾರ ಬಹಳ ಮುಖ್ಯ ಯಾಕೆಂದ್ರ ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದರು.

ಮತ್ತೆ ನೆನೆಗುದಿಗೆ ಬಿದ್ದ ರಾಜ್ಯ ಸಚಿವ ಸಂಪುಟ ಕಸರತ್ತು? ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಕಸರತ್ತು ಮುಂದೂಡಲಾಗಿದೆ. ಒಂದು ವಾರದ ಬೆಳವಣಿಗೆ ನೋಡಿ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಪರೋಕ್ಷವಾಗಿ ಸದ್ಯಕ್ಕೆ ಸಂಪುಟ ಕಸರತ್ತು ಇಲ್ಲ ಎಂದಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ ‘ಕಾದು ನೋಡಿ’ ಎಂದು ಹೇಳಿದ್ದಾರೆ. ಮತ್ತೊಂದು ಕಡೆ ಇಂದು ಸಿಎಂ ಬೊಮ್ಮಾಯಿ ಹಾಗೂ ಜೆ.ಪಿ.ನಡ್ಡಾ ಭೇಟಿ ಅನುಮಾನವಾಗಿದೆ. ಏಕೆಂದರೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜಸ್ಥಾನ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಜೆ.ಪಿ.ನಡ್ಡಾ ಭೇಟಿಯಾಗುವುದು ಅನುಮಾನವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada