ಪೂಂಚ್​ ಭಯೋತ್ಪಾದಕ ದಾಳಿ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸಚಿವ ಅಮಿತ್ ಶಾ(Amit Shah) ಭದ್ರತೆಯನ್ನು ಪರಿಶೀಲಿಸಲು ಜನವರಿ 9ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ದಾಳಿ ನಡೆಸಿದ್ದರು.

ಪೂಂಚ್​ ಭಯೋತ್ಪಾದಕ ದಾಳಿ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ
ಅಮಿತ್ ಶಾ
Image Credit source: Outlook

Updated on: Jan 07, 2024 | 11:21 AM

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸಚಿವ ಅಮಿತ್ ಶಾ(Amit Shah) ಭದ್ರತೆಯನ್ನು ಪರಿಶೀಲಿಸಲು ಜನವರಿ 9ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ದಾಳಿ ನಡೆಸಿದ್ದರು.

ಆ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಮೂವರ ಶವ ಪತ್ತೆಯಾಗಿತ್ತು, ಉಗ್ರರ ದಾಳಿಯಲ್ಲಿ ಐವರು ಯೋಧರು ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಭದ್ರತೆ ಪರಿಶೀಲನೆ ಮಾಡಲು ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದ್ದಾರೆ. ಸುರನ್‌ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಧೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್‌ನಲ್ಲಿ ಡಿಸೆಂಬರ್​ನಲ್ಲಿ ದಾಳಿ ನಡೆದಿತ್ತು.

ಈ ಹಿಂದೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಪೂಂಚ್​ ದಾಳಿ ಬಳಿಕ ಜಮ್ಮುವಿಗೆ ಭೇಟಿ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಿತ್ ಶಾ ಉನ್ನತ ನಾಯಕರ ಸಭೆಯನ್ನೂ ನಡೆಸುವ ಸಾಧ್ಯತೆ ಇದೆ, ಚುನಾವಣೆ ಹಾಗೂ ಅಲ್ಲಿಯ ಪ್ರಸ್ತುತ ಸ್ಥಿತಿಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ಓದಿ: ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್‌ ಮೇಲೆ ಉಗ್ರರ ಹೊಂಚು ದಾಳಿ; 3 ಯೋಧರು ಹುತಾತ್ಮ, ಮೂವರಿಗೆ ಗಾಯ

ಪೂಂಚ್​ ದಾಳಿ ಬಳಿಕ ಜನವರಿ 2 ರಂದು ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಭದ್ರತೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು.
ಭದ್ರತೆಯನ್ನು ಬಲಪಡಿಸಲು ಪೊಲೀಸ್​, ಸೇನೆ ಕೇಂದ್ರ ಸಶಸ್ತ್ರ ಪಡೆಗಳ ನಡುವೆ ಉತ್ತಮ ಸಮನ್ವಯದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಡಿಸೆಂಬರ್ 22ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್​, ರಜೌರಿಯಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Sun, 7 January 24

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us