26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ

26/11 Mumbai Attack; ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ
2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿಯ ಸಂಗ್ರಹ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on:Nov 26, 2022 | 11:05 AM

ನವದೆಹಲಿ: 2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿ(26/11 Mumbai Attack) ಸಂತ್ರಸ್ತರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ವಿದೇಶಾಂಗ ವ್ಯವಹಾರಗಳ ಸಚಿವ ಎಸ್​. ಜೈಶಂಕರ್ (S. Jaishankar) ಸೇರಿದಂತೆ ಅನೇಕ ಗಣ್ಯರು ಗೌರವ ಸಲ್ಲಿಸಿದರು. ಇದೇ ವೇಳೆ, ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

ದಾಳಿ ಸಂತ್ತಸ್ತರ ಪ್ರೀತಿಪಾತ್ರರು ಮತ್ತು ಕುಟುಂಬಗಳ ನಿರಂತರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಕರ್ತವ್ಯದ ವೇಳೆ ವೀರಾವೇಶದಿಂದ ಹೋರಾಡಿ ತ್ಯಾಗ, ಬಲಿದಾನ ಮಾಡಿದ ಭದ್ರತಾ ಸಿಬ್ಬಂದಿಗೆ ರಾಷ್ಟ್ರ ಗೌರವ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದೇಶದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್ ಅವರು ಕಳೆದ ತಿಂಗಳು ಮುಂಬೈಯ ತಾಜ್ ಹೋಟೆಲ್​ನಲ್ಲಿ ನಡೆದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ನೀಡಿದ್ದ ಹೇಳಿಕೆಗಳ ವಿಡಿಯೊ ತುಣುಕನ್ನು ಹಂಚಿಕೊಳ್ಳುವ ಮೂಲಕ ಗೌರವ ಸಲ್ಲಿಸಿದ್ದಾರೆ. ಇದೇ ತಾಜ್ ಹೋಟೆಲ್ ಮೇಲೆ 2008ರ ನವೆಂಬರ್ 26ರಂದು ದಾಳಿ ನಡೆದಿತ್ತು.

ಭಯೋತ್ಪಾದನೆಯು ಮಾನವೀಯತೆಗೆ ಬಹುದೊಡ್ಡ ಬೆದರಿಕೆ. ಇಂದು 26/11ರ ದಾಳಿ ಸಂತ್ರಸ್ತರನ್ನು ನೆನೆಯುವಲ್ಲಿ ವಿಶ್ವವೇ ಭಾರತದ ಜತೆ ನಿಂತಿದೆ. ಈ ದಾಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಜಗತ್ತಿನಾದ್ಯಂತ ಭಯೋತ್ಪಾದಕ ದಾಳಿಗೆ ಬಲಿಯಾದವರನ್ನೆಲ್ಲ ನಾವು ಸ್ಮರಿಸಿಕೊಳ್ಳುತ್ತೇವೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಈ ದೇಶವು 26/11ರ ದಾಳಿಯನ್ನು ಮರೆತಿಲ್ಲ. ಮರೆಯುವುದೂ ಇಲ್ಲ. ದಾಳಿಯಲ್ಲಿ ಮೃತಟ್ಟವರಿಗೆ ನನ್ನ ಗೌರವ ನಮನಗಳು. ದಾಳಿ ಸಂದರ್ಭ ಬಲಿದಾನ ಮಾಡಿದ, ದೇಶಕ್ಕಾಗಿ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿಗೆ ಹೃದಯಾಂತರಾಳದ ನಮನಗಳು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಭಯೋತ್ಪಾದಕರ ವಿರುದ್ಧ ಹೋರಾಡುವ ಮೂಲಕ ಉನ್ನತ ತ್ಯಾಗ ಮಾಡಿದ ನಮ್ಮ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಳ್ಳುತ್ತೇನೆ ಮತ್ತು ನಮಿಸುತ್ತೇನೆ. ಇವರ ತ್ಯಾಗವು ಇಂದು ಇಡೀ ಜಗತ್ತಿಗೆ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಸಂದೇಶವನ್ನು ನೀಡಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನಗಳು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯಲ್ಲಿ ಆರು ಮಂದಿ ಅಮೆರಿಕ ಪ್ರಜೆಗಳು ಸೇರಿದಂತೆ ಒಟ್ಟು 166 ಮಂದಿ ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 26 November 22

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ