26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ

| Updated By: Ganapathi Sharma

Updated on: Nov 26, 2022 | 11:05 AM

26/11 Mumbai Attack; ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ
2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿಯ ಸಂಗ್ರಹ ಚಿತ್ರ
Image Credit source: PTI
Follow us on

ನವದೆಹಲಿ: 2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿ(26/11 Mumbai Attack) ಸಂತ್ರಸ್ತರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ವಿದೇಶಾಂಗ ವ್ಯವಹಾರಗಳ ಸಚಿವ ಎಸ್​. ಜೈಶಂಕರ್ (S. Jaishankar) ಸೇರಿದಂತೆ ಅನೇಕ ಗಣ್ಯರು ಗೌರವ ಸಲ್ಲಿಸಿದರು. ಇದೇ ವೇಳೆ, ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

ದಾಳಿ ಸಂತ್ತಸ್ತರ ಪ್ರೀತಿಪಾತ್ರರು ಮತ್ತು ಕುಟುಂಬಗಳ ನಿರಂತರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಕರ್ತವ್ಯದ ವೇಳೆ ವೀರಾವೇಶದಿಂದ ಹೋರಾಡಿ ತ್ಯಾಗ, ಬಲಿದಾನ ಮಾಡಿದ ಭದ್ರತಾ ಸಿಬ್ಬಂದಿಗೆ ರಾಷ್ಟ್ರ ಗೌರವ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದೇಶದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್ ಅವರು ಕಳೆದ ತಿಂಗಳು ಮುಂಬೈಯ ತಾಜ್ ಹೋಟೆಲ್​ನಲ್ಲಿ ನಡೆದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ನೀಡಿದ್ದ ಹೇಳಿಕೆಗಳ ವಿಡಿಯೊ ತುಣುಕನ್ನು ಹಂಚಿಕೊಳ್ಳುವ ಮೂಲಕ ಗೌರವ ಸಲ್ಲಿಸಿದ್ದಾರೆ. ಇದೇ ತಾಜ್ ಹೋಟೆಲ್ ಮೇಲೆ 2008ರ ನವೆಂಬರ್ 26ರಂದು ದಾಳಿ ನಡೆದಿತ್ತು.

2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯಲ್ಲಿ ಆರು ಮಂದಿ ಅಮೆರಿಕ ಪ್ರಜೆಗಳು ಸೇರಿದಂತೆ ಒಟ್ಟು 166 ಮಂದಿ ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 26 November 22