ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ಸಾಧ್ಯವಿಲ್ಲ ಎಂದ ಅಮಿತ್ ಶಾ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು(ಡಿಸೆಂಬರ್ 14) ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ಸಾಧ್ಯವಿಲ್ಲ ಎಂದ ಅಮಿತ್ ಶಾ
ಅಮಿತ್ ಶಾ ನೇತೃತ್ವದಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಸಭೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 14, 2022 | 8:59 PM

ನವದೆಹಲಿ : ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದ (Maharashtra-Karnataka Border Dispute) ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇಂದು(ಡಿಸೆಂಬರ್ 14) ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದು, ಸುಪ್ರೀಂಕೋರ್ಟ್ (supreme court) ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ತಟಸ್ಥ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗಡಿ ವಿವಾದ: ಅಮಿತ್​ ಶಾ ಭೇಟಿಯಾದ ಮಹಾರಾಷ್ಟ್ರ ನಾಯಕರು, ಕರ್ನಾಟಕದ ವಿರುದ್ಧ ದೂರು

ಸಂಸತ್ ಭವನದ ಲೈಬ್ರರಿ ಕಟ್ಟಡದಲ್ಲಿ ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಸುಪ್ರೀಂಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಎರಡು ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನನಗೆ ವಿಶ್ವಾಸ ಇದೆ, ಎಲ್ಲರೂ ರಾಜಕೀಯ ನಾಯಕರು ಸಹಕರಿಸಲಿದ್ದಾರೆ ಎಂದು ಹೇಳಿದರು.

ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ. ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್​ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಸಿಎಂಗಳಾದ ಬೊಮ್ಮಾಯಿ, ಏಕನಾಥ್ ಶಿಂಧೆ ಜತೆ ಸುದೀರ್ಘ ಚರ್ಚೆ ಮಾಡಿದ್ದು, ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹರಿಸಿಕೊಳ್ಳಲು ಬರುವುದಿಲ್ಲ ಎದು ಹೇಳಿದರು.

ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹರಿಸಿಕೊಳ್ಳಲು ಬರುವುದಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು. ಸಮಿತಿಯಲ್ಲಿ ಎರಡು ರಾಜ್ಯಗಳ ಮಂತ್ರಿಗಳು ಇರಲಿದ್ದು, ಪ್ರಯಾಣಿಕರಿಗೆ, ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಭಾಗಿಯಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:38 pm, Wed, 14 December 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ