ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ; ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಪರಿಶೀಲನೆ
Amit Shah: ಜೂನ್ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಮತ್ತು ಸಿಆರ್‌ಪಿಎಫ್‌ನ ಉನ್ನತ ಅಧಿಕಾರಿಗಳು ಮತ್ತು ಇತರರು ಭಾಗವಹಿಸಲಿದ್ದಾರೆ.
ನವದೆಹಲಿ: ಇತ್ತೀಚಿನ ಭಯೋತ್ಪಾದನಾ ದಾಳಿಯ (Terrorists Attack) ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ (Home Minister Amit Shah) ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಪ್ರಧಾನಮಂತ್ರಿ ಮೋದಿ (PM Narendra Modi) ಕೇಂದ್ರಾಡಳಿತ ಪ್ರದೇಶದ ಪರಿಸ್ಥಿತಿಯನ್ನು ಅವಲೋಕಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಜಮ್ಮು ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ನಂತರ ಕೈಗೊಂಡಿರುವ ಬಂಡಾಯ ನಿಗ್ರಹ ಕ್ರಮಗಳ ಬಗ್ಗೆ ಉನ್ನತ ಭದ್ರತಾ ಅಧಿಕಾರಿಗಳು ಗೃಹ ಸಚಿವರಿಗೆ ವಿವರಿಸಿದ್ದಾರೆ. ಇಂದು ಸಣ್ಣ ಮಟ್ಟದ ಸಭೆ ನಡೆದಿದ್ದು, ಭಾನುವಾರ 360 ಡಿಗ್ರಿ ಪರಿಶೀಲನೆ ನಡೆಯಲಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಮತ್ತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೇನೆಯ ಮುಖ್ಯಸ್ಥರು, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ಆರ್ ಆ್ಯಂಡ್ ಎಡಬ್ಲ್ಯು) ಮುಖ್ಯಸ್ಥರೊಂದಿಗೆ ಭಾಗವಹಿಸುವ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಲಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಯೋಧ ಸಾವು, 4 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಭಯೋತ್ಪಾದನಾ ದಾಳಿಯ ಬಗ್ಗೆ ರಾಷ್ಟ್ರೀಯ ಆಕ್ರೋಶದ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಮೇಲೆ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 16ರಂದು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಮತ್ತು ಸಿಆರ್‌ಪಿಎಫ್‌ನ ಉನ್ನತ ಅಧಿಕಾರಿಗಳು ಮತ್ತು ಇತರರು ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿ ಮತ್ತು ಭಯೋತ್ಪಾದಕ ಘಟನೆಗಳ ನಂತರ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Kathua Terrorists Encounter: ಜಮ್ಮು ಕಾಶ್ಮೀರದ ಕಥುವಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್
ಕಳೆದ 4 ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳ 4 ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, 9 ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಸೈನಿಕ ಸಾವನ್ನಪ್ಪಿದ್ದಾರೆ. 7 ಭದ್ರತಾ ಸಿಬ್ಬಂದಿ ಮತ್ತು ಹಲವರು ಗಾಯಗೊಂಡಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಶಂಕಿತ ಪಾಕಿಸ್ತಾನಿ ಭಯೋತ್ಪಾದಕರು ಸಹ ಹತ್ಯೆಗೀಡಾಗಿದ್ದಾರೆ. ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:19 pm, Fri, 14 June 24