ಕಾಂಗ್ರೆಸ್ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿತು; ನೆಹರು, ಇಂದಿರಾ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

|

Updated on: Dec 17, 2024 | 8:12 PM

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಇಲ್ಲಿಯವರೆಗೆ ಮಾಡಿದ ಸಂವಿಧಾನದ ತಿದ್ದುಪಡಿಗಳನ್ನು ಹೋಲಿಕೆ ಮಾಡಿ ಮಾತನಾಡಿದ್ದಾರೆ. ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರಿಸಿದ ಅಮಿತ್ ಶಾ, ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಪ್ರತಿಪಕ್ಷಗಳು ಹೇಳುತ್ತವೆ. ಸಂವಿಧಾನವನ್ನು ಬದಲಾಯಿಸುವ ನಿಬಂಧನೆಯು ನಮ್ಮ ಸಂವಿಧಾನದಲ್ಲಿ ಈಗಾಗಲೇ ಇದೆ. ಕಾಂಗ್ರೆಸ್ ಅದರ 55 ವರ್ಷಗಳ ಅಧಿಕಾರಾವಧಿಯಲ್ಲಿ ನಮ್ಮ ಸಂವಿಧಾನಕ್ಕೆ 77 ತಿದ್ದುಪಡಿಗಳನ್ನು ಮಾಡಿದ್ದರೆ, ಬಿಜೆಪಿ ಕೇವಲ 22 ಬಾರಿ ತಿದ್ದುಪಡಿ ಮಾಡಿದೆ ಎಂದಿದ್ದಾರೆ.

ಕಾಂಗ್ರೆಸ್ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿತು; ನೆಹರು, ಇಂದಿರಾ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ
Amit Shah News (3)
Follow us on

ನವದೆಹಲಿ: ಇಂದು ರಾಜ್ಯಸಭೆಯಲ್ಲಿ “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರದ ಪ್ರಗತಿಯ ಮೇಲೆ ಭಾರತೀಯ ಸಂವಿಧಾನದ ಪರಿವರ್ತಕ ಪರಿಣಾಮವನ್ನು ಒತ್ತಿ ಹೇಳಿದರು. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ಪಕ್ಷವು ತಮ್ಮ ಅಧಿಕಾರಾವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದೆ ಮತ್ತು ಜನರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ತನ್ನ ಹಿತಾಸಕ್ತಿಗಳಿಗೆ ಸರಿಹೊಂದುವಂತೆ ಸಂವಿಧಾನವನ್ನು ತಿದ್ದುಪಡಿ ಮಾಡಿದೆ ಎಂದಿರುವ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಭಾರತೀಯ ಸಂವಿಧಾನದ ಖಾಲಿ ಪ್ರತಿಗಳನ್ನು ಒಯ್ಯುತ್ತಿದ್ದಾರೆ. ಇದು ಜನರಿಗೆ ಮತ್ತು ದೇಶಕ್ಕೆ ಮಾಡಿದ ದೊಡ್ಡ ವಂಚನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ನೆಹರೂ ಕಾಲದಿಂದಲೂ ಕಾಂಗ್ರೆಸ್​ಗೆ​ ಸಂವಿಧಾನ ಬದಲಿಸುವ ಚಟ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ

ಬಿಜೆಪಿ 16 ವರ್ಷಗಳ ಕಾಲ ಆಡಳಿತ ನಡೆಸಿತು. ಈ ಅವಧಿಯಲ್ಲಿ 22 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ಕಾಂಗ್ರೆಸ್ 55 ವರ್ಷಗಳ ಕಾಲ ಆಡಳಿತ ನಡೆಸಿತು. ಈ ಅವಧಿಯಲ್ಲಿ ಬಿಜೆಪಿ 77 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಂವಿಧಾನಕ್ಕೆ ಬದಲಾವಣೆಗಳನ್ನು ಮಾಡಿದೆ. ಆದರೆ ಬದಲಾವಣೆಯ ಉದ್ದೇಶವೇನು? ಎಂಬುದು ಪಕ್ಷಕ್ಕೆ ಸಂವಿಧಾನದ ಮೇಲಿನ ನಂಬಿಕೆಯನ್ನು ತೋರಿಸುತ್ತದೆ ಎಂದಿದ್ದಾರೆ.


ಪ್ರಧಾನಿ ಜವಾಹರಲಾಲ್ ನೆಹರು ಅವರ ಅವಧಿಯಲ್ಲಿ ಸಂವಿಧಾನದಲ್ಲಿ ಮೊದಲ ತಿದ್ದುಪಡಿಯನ್ನು ಮಾಡಲಾಯಿತು ಮತ್ತು 19ಎ ಅನ್ನು ಸೇರಿಸಲಾಯಿತು. ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಈ ತಿದ್ದುಪಡಿಯನ್ನು ಮಾಡಲಾಗಿದೆ. ಅದೇ ರೀತಿ 24ನೇ ತಿದ್ದುಪಡಿ ಮಾಡಿ ಈ ಮೂಲಕ ನಾಗರಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಹಾಗೆಯೇ ಕಾಂಗ್ರೆಸ್ ತನ್ನ ಉದ್ದೇಶಕ್ಕಾಗಿಯೇ ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಿತು. ಸಂವಿಧಾನದ ಮೊದಲ ತಿದ್ದುಪಡಿಯು ಜೂನ್ 18, 1951ರಂದು ನಡೆಯಿತು. ಕಾಂಗ್ರೆಸ್ ಪಕ್ಷವು ಸಾರ್ವತ್ರಿಕ ಚುನಾವಣೆಗಳು ಸಂಭವಿಸುವವರೆಗೆ ಕಾಯಲು ಇಷ್ಟವಿಲ್ಲದ ಕಾರಣ ಸಂವಿಧಾನ ಸಮಿತಿಯು ಈ ತಿದ್ದುಪಡಿಯನ್ನು ಮಾಡಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: Maharashtra CM: ಮಹಾರಾಷ್ಟ್ರ ಸಿಎಂ ಆಗಿ ಮತ್ತೆ ಪಟ್ಟಕ್ಕೇರಿದ ದೇವೇಂದ್ರ ಫಡ್ನವಿಸ್; ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಭಾಗಿ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಸಂವಿಧಾನಕ್ಕೆ 19A ಅನ್ನು ಸೇರಿಸಲಾಯಿತು. ಈ ಬದಲಾವಣೆಯನ್ನು ಆ ಸಮಯದಲ್ಲಿ ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರು ಜಾರಿಗೆ ತಂದರು. ಕಾಂಗ್ರೆಸ್ ಸಂವಿಧಾನವನ್ನು ಯಾವುದೇ ಸದನಗಳಲ್ಲಿ ತರದೆ 35 ಎ ಪರಿಚ್ಛೇದವನ್ನು ಸೇರಿಸುವ ಮೂಲಕ ವೈಯಕ್ತಿಕ ಆಸ್ತಿ ಎಂದು ಪರಿಗಣಿಸಿದೆ. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಯಾವತ್ತೂ ಕೆಲಸ ಮಾಡಿಲ್ಲ, ಮೋದಿ ಸರ್ಕಾರ ಅವರ ಉನ್ನತಿಗೆ ಸಹಾಯ ಮಾಡುತ್ತಿದೆ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ 42ನೇ ಸಂವಿಧಾನ ತಿದ್ದುಪಡಿಯ ಮೂಲಕ ಲೋಕಸಭೆ, ವಿಧಾನಸಭೆಗಳ ಅಧಿಕಾರಾವಧಿಯನ್ನು ಹೆಚ್ಚಿಸಿತು ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಭಾರತ ಎಂದಿಗೂ ಆರ್ಥಿಕವಾಗಿ ಸ್ವತಂತ್ರವಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದವರಿಗೆ ದೇಶದ ಜನರು ಮತ್ತು ಸಂವಿಧಾನವು ತಕ್ಕ ಉತ್ತರವನ್ನು ನೀಡಿದೆ. ಇಂದು ನಾವು 5ನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ. ನಾವು ಬ್ರಿಟನ್​ನನ್ನು ಹಿಂದೆ ಹಾಕಿ ಮುನ್ನಡೆದಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Tue, 17 December 24