ಜನನ ಹಾಗೂ ಮರಣದ ಅಂಕಿ ಅಂಶ ಶೀಘ್ರ ಮತದಾರರ ಪಟ್ಟಿಗೆ ಜೋಡಣೆ: ಅಮಿತ್ ಶಾ
ಜನನ ಹಾಗೂ ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿಗೆ (Electoral Roll) ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ.
ಜನನ ಹಾಗೂ ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿಗೆ (Electoral Roll) ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ದೇಶದಲ್ಲಿನ ಜನನ ಮತ್ತು ಮರಣಕ್ಕೆ ಸಂಬಂಧಿಸಿದ ಡೇಟಾವನ್ನು ಮತದಾರರ ಪಟ್ಟಿಗೆ ಲಿಂಕ್ ಮಾಡಲಾಗುತ್ತದೆ. ಈ ಮಾಹಿತಿಯನ್ನು ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೀಡಿದ್ದಾರೆ. ಜನನ ಮತ್ತು ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿ ಮತ್ತು ಒಟ್ಟಾರೆ ಅಭಿವೃದ್ಧಿ ಪ್ರಕ್ರಿಯೆಯೊಂದಿಗೆ ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಈ ನಿಟ್ಟಿನಲ್ಲಿ ಇನ್ನೂ ಯೋಜನೆ ರೂಪಿಸಲಾಗುತ್ತಿದೆ. ಜನಗಣತಿಯು ಒಂದು ಪ್ರಕ್ರಿಯೆಯಾಗಿದ್ದು, ಇದು ಅಭಿವೃದ್ಧಿ ಕಾರ್ಯಸೂಚಿಯ ಆಧಾರವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಭಾರತೀಯ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ ಜಂಗಣ್ಣನ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಡಿಜಿಟಲ್, ಸಂಪೂರ್ಣ ಮತ್ತು ನಿಖರವಾದ ಜನಗಣತಿಯ ದತ್ತಾಂಶದ ಪ್ರಯೋಜನಗಳು ಬಹುಮುಖವಾಗಿವೆ ಎಂದು ಹೇಳಿದರು.
ಮತ್ತಷ್ಟು ಓದಿ: Karnataka Election 2023: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಸಂಶಯವೇ? ಪರೀಕ್ಷಿಸುವುದು ಹೇಗೆಂದು ಇಲ್ಲಿ ನೋಡಿ
ಜನಗಣತಿಯ ದತ್ತಾಂಶದ ಆಧಾರದ ಮೇಲೆ ಯೋಜನೆಯನ್ನು ಮಾಡಿದಾಗ, ಅಭಿವೃದ್ಧಿಯು ಬಡವರನ್ನು ತಲುಪುತ್ತದೆ. ಜನನ ಮತ್ತು ಮರಣ ಪ್ರಮಾಣ ಪತ್ರದ ಡೇಟಾವನ್ನು ಸರಿಯಾಗಿ ಸಂರಕ್ಷಿಸಿದರೆ ಅಭಿವೃದ್ಧಿ ಕಾರ್ಯಗಳಿಗೆ ಯೋಜನೆ ರೂಪಿಸಲು ಸಾಧ್ಯವಾಗುತ್ತದೆ ಎಂದರು. ಜನನ ಮತ್ತು ಮರಣ ನೋಂದಣಿಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲಾಗುವುದು ಎಂದು ಅಮಿತ್ ಶಾ ಹೇಳಿದರು.
ಈ ಪ್ರಕ್ರಿಯೆಯಲ್ಲಿ ಯಾರಿಗಾದರೂ 18 ವರ್ಷ ತುಂಬಿದರೆ ಅವರ ಹೆಸರು ಸ್ವಯಂಚಾಲಿತವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುತ್ತದೆ. ಅದೇ ರೀತಿ ಯಾವುದೇ ಸಾವು ಸಂಭವಿಸಿದರೆ ಚುನಾವಣಾ ಆಯೋಗಕ್ಕೆ ಅದರ ಮಾಹಿತಿ ಸ್ವಯಂಚಾಲಿತವಾಗಿ ಸಿಗುತ್ತದೆ. ಮಾಹಿತಿ ಪಡೆದ ನಂತರ ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸುಲಭವಾಗುತ್ತದೆ.
ಜನನ ಮತ್ತು ಮರಣ ನೋಂದಣಿ ಕಾಯಿದೆ (RBD), 1969 ಅನ್ನು ತಿದ್ದುಪಡಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಪ್ರಯೋಜನ ಕೇವಲ ಮತದಾರರ ಪಟ್ಟಿಯಲ್ಲಿ ಕಾಣುವುದಿಲ್ಲ, ಆದರೆ ಈ ಮೂಲಕ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್‌ಪೋರ್ಟ್‌ನಲ್ಲಿಯೂ ಸೌಲಭ್ಯಗಳಿವೆ. ಈ ಡೇಟಾದ ಮೂಲಕ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್‌ಪೋರ್ಟ್ ನೀಡುವುದು ಸುಲಭವಾಗುತ್ತದೆ.
ಇನ್ನು ಮುಂದೆ ಜನಗಣತಿಯನ್ನು ವಿದ್ಯುನ್ಮಾನ ಮಾದರಿಯಲ್ಲಿ ಕೈಗೊಳ್ಳಲಿದ್ದು, ಸ್ವಯಂ ಗಣತಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಶಾ ತಿಳಿಸಿದ್ದಾರೆ.
ಸರ್ಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯುವುದು ಮೊದಲಿಗಿಂತ ಸುಲಭವಾಗಲಿದೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸರಿಯಾಗಿ ಇಟ್ಟರೆ ಗಣತಿ ಸಮಯ ಅಂದಾಜಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳಬಹುದು.
ಅಭಿವೃದ್ಧಿಗೆ ಸಾಕಷ್ಟು ಮಾಹಿತಿಗಳು ಲಭ್ಯವಾಗದ ಕಾರಣ ಮೊದಲು ಅಭಿವೃದ್ಧಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿತ್ತು. ಜನನ ಹಾಗೂ ಮರಣ ಪ್ರಮಾಣ ಪತ್ರದ ದತ್ತಾಂಶವನ್ನು ವಿಶೇಷ ರೀತಿಯಲ್ಲಿ ಸಂರಕ್ಷಿಸಿದರೆ ಜನಗಣತಿ ನಡುವಿನ ಸಮಯವನ್ನು ಅಂದಾಜಿಸಿ ಅಭಿವೃದ್ಧಿ ಕಾಮಗಾರಿಗಳ ಯೋಜನೆಯನ್ನು ಸಮರ್ಪಕವಾಗಿ ಮಾಡಬಹುದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ