AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಗೆ ಅಗೌರವ ತೋರಿದ್ದಕ್ಕೆ 2024ರಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಬೆಲೆ ತೆರಲಿವೆ: ಅಮಿತ್ ಶಾ

ಈ ನಕಾರಾತ್ಮಕ ದೃಷ್ಟಿಕೋನವು ದೇಶಕ್ಕೆ ಎಂದಿಗೂ ಪ್ರಯೋಜನವಾಗುವುದಿಲ್ಲ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ನಾವು ನಿಮ್ಮನ್ನು (ಕಾಂಗ್ರೆಸ್) ಗೌರವಿಸುತ್ತಿದ್ದೆವು. ಆದರೆ ಸ್ಪಷ್ಟ ಬಹುಮತದೊಂದಿಗೆ ಪ್ರಧಾನಿಯಾಗಿದ್ದರೂ, ನೀವು ಅವರನ್ನು (ಮೋದಿ) ಬೆಂಬಲಿಸುತ್ತಿಲ್ಲ, ಇದು ಜನಾದೇಶದ ಅಗೌರವವಾಗಿದೆ.

ಪ್ರಧಾನಿಗೆ ಅಗೌರವ ತೋರಿದ್ದಕ್ಕೆ 2024ರಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಬೆಲೆ ತೆರಲಿವೆ: ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2023 | 8:56 PM

Share

ಮುಖ್ಯಾಂಶಗಳು

  • ಕಾಂಗ್ರೆಸ್ ಮತ್ತು ಇತರ 18 ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದು, ನೂತನ ಕಟ್ಟಡವನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಉದ್ಘಾಟಿಸಬೇಕೇ ಹೊರತು ಮೋದಿ ಉದ್ಘಾಟನೆ ಮಾಡಬಾರದು ಎಂದಿವೆ.
  • ಪ್ರಜಾಪ್ರಭುತ್ವ ಮತ್ತು ಭಾರತದ ಜನರು ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಲು ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ರಾಜಮನೆತನ (ಗಾಂಧಿ) ಒಂಬತ್ತು ವರ್ಷಗಳ ನಂತರವೂ ಪ್ರಧಾನಿಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ.
  • ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವ ಇತರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾ 2024 ರ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನಂತೆಯೇ ಆಗಲಿದೆ ಎಂದಿದ್ದಾರೆ

ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನದ (New Parliament building) ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ಉದ್ದೇಶಿಸಿರುವ ಕಾಂಗ್ರೆಸ್ (Congress) ಮತ್ತು ಇತರ ವಿರೋಧ ಪಕ್ಷಗಳು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಜನಾದೇಶಕ್ಕೆ ಅಗೌರವ ತೋರಿದ್ದಕ್ಕೆ ಬೆಲೆ ತೆರಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗುರುವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಜನತಾ ದಳ (ಯುನೈಟೆಡ್), ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಕಾಂಗ್ರೆಸ್ ಮತ್ತು ಇತರ 18 ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದು, ನೂತನ ಕಟ್ಟಡವನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಉದ್ಘಾಟಿಸಬೇಕೇ ಹೊರತು ಮೋದಿ ಉದ್ಘಾಟನೆ ಮಾಡಬಾರದು ಎಂದಿವೆ.

ಪ್ರಜಾಪ್ರಭುತ್ವ ಮತ್ತು ಭಾರತದ ಜನರು ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಲು ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ರಾಜಮನೆತನ (ಗಾಂಧಿ) ಒಂಬತ್ತು ವರ್ಷಗಳ ನಂತರವೂ ಪ್ರಧಾನಿಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅವರು ಸಂಸತ್ತಿನಲ್ಲಿ ಮಾತನಾಡಲು ಪ್ರಧಾನಿಗೆ ಅವಕಾಶ ನೀಡುವುದಿಲ್ಲ. ಅವರು ಮಾತನಾಡುವಾಗ ಅಥವಾ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಕಲಾಪಗಳನ್ನು ಬಹಿಷ್ಕರಿಸುತ್ತಾರೆ ಎಂದು ಅಸ್ಸಾಂನ ಗುವಾಹಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶಾ ಹೇಳಿದ್ದಾರೆ. ದೇಶದ ಜನಸಾಮಾನ್ಯರ ಆಶೀರ್ವಾದ ಮೋದಿಯವರ ಮೇಲಿರುವುದರಿಂದ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಬಹಿಷ್ಕಾರ ಗಣನೆಯಲ್ಲಿರುವುದಿಲ್ಲ.  ನೀವು (ಕಾಂಗ್ರೆಸ್) ಮಾಡುತ್ತಿರುವುದನ್ನು ಭಾರತದ 1.3 ಶತಕೋಟಿಗೂ ಹೆಚ್ಚು ಜನರು ವೀಕ್ಷಿಸುತ್ತಿದ್ದಾರೆ. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ, ನೀವು ಜನರ ಜನಾದೇಶವನ್ನು ಪಡೆಯಲು ಹೋದಾಗ, ನೀವು ಕಡಿಮೆ ಸಂಖ್ಯೆಯ ಸ್ಥಾನಗಳನ್ನು (2019 ಕ್ಕಿಂತ) ಪಡೆಯುತ್ತೀರಿ. ಮೋದಿಜಿ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಈ ನಕಾರಾತ್ಮಕ ದೃಷ್ಟಿಕೋನವು ದೇಶಕ್ಕೆ ಎಂದಿಗೂ ಪ್ರಯೋಜನವಾಗುವುದಿಲ್ಲ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ನಾವು ನಿಮ್ಮನ್ನು (ಕಾಂಗ್ರೆಸ್) ಗೌರವಿಸುತ್ತಿದ್ದೆವು. ಆದರೆ ಸ್ಪಷ್ಟ ಬಹುಮತದೊಂದಿಗೆ ಪ್ರಧಾನಿಯಾಗಿದ್ದರೂ, ನೀವು ಅವರನ್ನು (ಮೋದಿ) ಬೆಂಬಲಿಸುತ್ತಿಲ್ಲ, ಇದು ಜನಾದೇಶದ ಅಗೌರವವಾಗಿದೆ.

ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವ ಇತರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾ 2024 ರ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನಂತೆಯೇ ಆಗಲಿದೆ. ಜಾರ್ಖಂಡ್ ವಿಧಾನಸಭೆಯ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಮಾಡಿದರು. ಈ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಆಹ್ವಾನಿಸಲಾಗಿಲ್ಲ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತೇನೆ, ಜನರು ಶಾಂತಿ ಕಾಪಾಡಬೇಕು: ಅಮಿತ್ ಶಾ

ನಾನು ಕಾಂಗ್ರೆಸ್‌ಗೆ ಕೇಳಲು ಬಯಸುತ್ತೇನೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿಗಳು ಅಲ್ಲಿ ಹೊಸ ವಿಧಾನಸಭೆ ಕಟ್ಟಡದ ಶಂಕುಸ್ಥಾಪನೆ ಮಾಡಲಿಲ್ಲವೇ? ಆದಿವಾಸಿ ಮಹಿಳೆಯಾಗಿದ್ದ ರಾಜ್ಯದ ರಾಜ್ಯಪಾಲರು ಆಗ ಎಲ್ಲಿದ್ದರು? ನೀವು ಅವರನ್ನೇಕೆ ಆಹ್ವಾನಿಸಲಿಲ್ಲ? ಎಂದು ಶಾ ಕೇಳಿದ್ದಾರೆ.

ಅಸ್ಸಾಂ, ಮಣಿಪುರ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಇದೇ ರೀತಿಯ ನಿದರ್ಶನಗಳನ್ನು ಉಲ್ಲೇಖಿಸಿದ ಶಾ,ಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಆಯಾ ರಾಜ್ಯಗಳ ರಾಜ್ಯಪಾಲರನ್ನು ಆಹ್ವಾನಿಸದೆಯೇ ಶಂಕುಸ್ಥಾಪನೆ ಅಥವಾ ಹೊಸ ವಿಧಾನಸಭೆ ಕಟ್ಟಡಗಳನ್ನು ಉದ್ಘಾಟಿಸಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂಗೆ ಒಂದು ದಿನದ ಭೇಟಿ ನೀಡಿದ ಶಾ,ಗುವಾಹಟಿ ಕ್ಯಾಂಪಸ್‌ನ ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ವಿಶ್ವವಿದ್ಯಾಲಯದ (ಎನ್‌ಎಫ್‌ಎಸ್‌ಯು) 9ನೇ ಕ್ಯಾಂಪಸ್‌ನ ಶಂಕುಸ್ಥಾಪನೆ ಮಾಡಿದ್ದು ಅಸ್ಸಾಂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ 44,703 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​