AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ
ಅಮಿತ್ ಶಾ
ನಯನಾ ರಾಜೀವ್
|

Updated on: Mar 30, 2023 | 10:49 AM

Share

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರದ ಉನ್ನತ ತನಿಖಾ ಸಂಸ್ಥೆಗಳು ಹೇಗೆ ದುರ್ಬಳಕೆಯಾಗುತ್ತಿದ್ದವು ಎಂಬುದಕ್ಕೆ ನಾನೇ ದೊಡ್ಡ ಉದಾಹರಣೆ, ನಾನು ಗುಜರಾತ್​ನ ಗೃಹ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದು ಎನ್​ಕೌಂಟರ್​ ನಡೆದಿತ್ತು, ನನ್ನ ವಿರುದ್ಧ ಪ್ರಕರಣ ದಾಖಲಾಯಿತು ಹಾಗೂ ಸಿಬಿಐ ನನ್ನನ್ನು ಬಂಧಿಸಿದ್ದರು.

ಇಡೀ ತನಿಖೆಯುದ್ದಕ್ಕೂ ಮೋದಿ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದರು, ನೀವು ತಲೆ ಕೆಡಿಸಿಕೊಳ್ಳಬೇಡಿ ಮೋದಿ ಹೆಸರು ಹೇಳಿಬಿಡಿ ನಾವು ನಿಮ್ಮನ್ನು ಬಿಟ್ಟುಬಿಡುತ್ತೇವೆ ಎಂದು ಹೇಳಿದ್ದರು. ಆಗ ನಾವು ಪ್ರತಿಭಟಿಸಿರಲಿಲ್ಲ, ಕಲಾಪಗಳಿಗೆ ಅಡ್ಡಿ ಮಾಡಿರಲಿಲ್ಲ, ಮೋದಿ ವಿರುದ್ಧ ತನಿಖಾ ಸಂಸ್ಥೆ ರಚಿಸಲಾಯಿತು, ಅದನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿತು. 90 ದಿನಗಳ ವಿಚಾರಣೆ ಬಳಿಕ ನನಗೆ ಜಾಮೀನು ಸಿಕ್ಕಿತ್ತು ಎಂದರು.

ಮತ್ತಷ್ಟು ಓದಿ: ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಭದ್ರತಾ ವೈಫಲ್ಯ: ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸೂರತ್​ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ ರಾಹುಲ್ ಗಾಂಧಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡ ಏಕೈಕ ರಾಜಕಾರಣಿಯೇನಲ್ಲ ಎಂದಿದ್ದಾರೆ.

ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಎಲ್ಲೆಡೆ ಪಸರಿಸುತ್ತಿದೆ, ನ್ಯಾಯಾಲಯ ದೋಷಿ ಎಂದು ನೀಡಿದ ತೀರ್ಪಿಗೆ ತಡೆ ನೀಡಲು ಬರುವುದಿಲ್ಲ, ಶಿಕ್ಷೆಗೆ ತಡೆ ನೀಡಬಹುದು ಎಂದು ಅವರು ಹೇಳಿದರು.

ತಮ್ಮ ಶಿಕ್ಷೆಗೆ ತಡೆ ನೀಡುವಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಯಾವುದೇ ಮನವಿ ಮಾಡಿಲ್ಲ,ಮ ಇದು ದುರಹಂಕಾರವಲ್ಲದೆ ಮತ್ತೇನು, ನಿಮಗೆ ಅನುಕೂಲ ಬೇಕು, ನೀವು ಸಂಸದರಾಗಿರಲು ಬಯಸುತ್ತೀರಿ ಆದರೆ ನ್ಯಾಯಾಲಯದ ಮುಂದೆ ಹೋಗುವುದಿಲ್ಲ.

2013ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್​ ಆದೇಶದಿಂದಾಗಿ ಲಾಲು ಪ್ರಸಾದ್ , ಜೆ ಜಯಲಲಿತಾಮತ್ತು ರಶೀದ್ ಅಲ್ವಿ ಸೇರಿದಮತೆ 17 ಮಂದಿ ಪ್ರಮುಖ ನಾಯಕರು ತಮ್ಮ ಸದಸ್ಯತ್ವ ಕಳೆದುಕೊಂಡಿದ್ದರು.

ಅಂದು ನಮ್ಮನ್ನು ಪೀಡಿಸಿದವರೇ ಇಂದು ವಿಧಿಯನ್ನು ದೂರುತ್ತಿದ್ದಾರೆ, ತಮ್ಮ ವರ್ತನೆಯ ಬಗ್ಗೆ ಅವರೇ ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ, ಅಮಾಯಕರಾಗಿದ್ದರೆ ಕಾನೂನಿನ ಮೇಲೆ ನಂಬಿಕೆ ಇರಲಿ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ