ಅಭಿವೃದ್ಧಿ ಹೊಂದಿದ ಭಾರತ ನೋಡಲು ಖರ್ಗೆ ಬದುಕಿರಬೇಕು: ಅಮಿತ್ ಶಾ
ಅಭಿವೃದ್ಧಿ ಹೊಂದಿದ ಭಾರತವ ನೋಡುವವರೆಗೂ ನೀವು ಬದುಕಿರಬೇಕು, ದೀರ್ಘ ಆಯುಷ್ಯ ನಿಮ್ಮದಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನನಗೆ ಈಗ 83 ವರ್ಷ, ಪ್ರಧಾನಿ ಮೋದಿಯನನ್ನು ಕುರ್ಚಿಯಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಖರ್ಗೆಗೆ ಶಾ ಪ್ರತ್ಯುತ್ತರ ನೀಡಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತವ ನೋಡಲು ನೀವು ಬದುಕಿರಬೇಕು, ದೀರ್ಘ ಆಯುಷ್ಯ ನಿಮ್ಮದಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನನಗೆ ಈಗ 83 ವರ್ಷ, ಪ್ರಧಾನಿ ಮೋದಿಯನನ್ನು ಕುರ್ಚಿಯಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಖರ್ಗೆಗೆ ಶಾ ಪ್ರತ್ಯುತ್ತರ ನೀಡಿದ್ದಾರೆ.
ಖರ್ಗೆಯವರು ಸಂಪೂರ್ಣವಾಗಿ ಅಸಹ್ಯಕರ ಮತ್ತು ಅವಮಾನಕರವಾಗಿ ಮಾತನಾಡಿದ್ದಾರೆ, ಅನಾವಶ್ಯಕವಾಗಿ ವೈಯಕ್ತಿಕ ವಿಚಾರಗಳಿಗೆ ಮೋದಿಯವರನ್ನು ಎಳೆದು ತಂದಿದ್ದಾರೆ. ಪ್ರಧಾನಿ ಮೋದಿಯವರ ಮೇಲೆ ಎಷ್ಟು ದ್ವೇಷ ಇದೆ ಎನ್ನುವುದನ್ನು ತೋರಿಸುತ್ತದೆ.
ಖರ್ಗೆಯವರ ಆರೋಗ್ಯ ಸುಧಾರಿಸಲಿ ಎಂದು ಮೋದಿಯವರು ಹಾಗೂ ನಾನು ಪ್ರಾರ್ಥನೆ ಮಾಡುತ್ತೇನೆ ಮೋದಿ 2047 ಅಭಿವೃದ್ಧಿ ಹೊಂದಿದ ಭಾರತವನ್ನು ನೋಡುವವರೆಗೂ ಬದುಕಿರಲಿ ಎಂದು ಹೇಳಿದ್ದಾರೆ. ಜಮ್ಮುವಿನ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಖರ್ಗೆ ಅಸ್ವಸ್ಥರಾಗಿದ್ದರು. ಈ ಸಂದರ್ಭದಲ್ಲಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದರು.
ಮತ್ತಷ್ಟು ಓದಿ: ಜಮ್ಮುವಿನಲ್ಲಿ ಸಭೆಯ ವೇಳೆ ಅಸ್ವಸ್ಥಗೊಂಡಿದ್ದ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ನವರಿಗೆ ಎಷ್ಟು ದ್ವೇಷ ಮತ್ತು ಭಯವಿದೆ ಎಂಬುದನ್ನು ಇದು ತೋರಿಸುತ್ತದೆ, ಅವರು ನಿರಂತರವಾಗಿ ಮೋದಿ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಶಾ ಹೇಳಿದರು. ಖರ್ಗೆ ಅವರ ಆರೋಗ್ಯದ ಬಗ್ಗೆ ಹೇಳುವುದಾದರೆ, ಮೋದಿ ಕೂಡ ಪ್ರಾರ್ಥಿಸುತ್ತಾರೆ, ನಾನು ಪ್ರಾರ್ಥಿಸುತ್ತೇನೆ ಮತ್ತು ನಾವೆಲ್ಲರೂ ಅವರು ದೀರ್ಘ ಮತ್ತು ಆರೋಗ್ಯಕರವಾಗಿ ಬದುಕಲಿ ಎಂದು ಪ್ರಾರ್ಥಿಸುತ್ತೇವೆ. ಅವರು ಇನ್ನೂ ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047 ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ನೋಡಲು ಬದುಕಲಿ ಎಂದರು.
ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ ಖರ್ಗೆಯವರು ಆರೋಗ್ಯ ವಿಚಾರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಣಿಗಾರಿಕೆ ಮತ್ತು ಮದ್ಯದ ಒಪ್ಪಂದಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಹೊರಗಿನವರಿಗೆ ಪ್ರಾಬಲ್ಯ ಸಾಧಿಸಲು ಬಿಜೆಪಿ ಅವಕಾಶ ನೀಡುತ್ತಿದೆ ಎಂದು ಖರ್ಗೆ ಆರೋಪಿಸಿದರು.
ಕೆಲಕಾಲ ಅವರನ್ನು ವೇದಿಕೆಯ ಮೇಲೆ ಕೂರಿಸಲಾಯಿತು. ಸ್ವಲ್ಪ ಹೊತ್ತು ಕುಳಿತ ನಂತರ ಮತ್ತೊಮ್ಮೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು ನಂತರ ವೇದಿಕೆ ಮೇಲೆ ನಿಂತು ಭಾಷಣ ಆರಂಭಿಸಿ ಜಮ್ಮು-ಕಾಶ್ಮೀರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ನಡೆಸುತ್ತೇವೆ ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ